Connect with us

BANTWAL

ಅನೈತಿಕ ಸಂಬಂಧದ ವಾಸನೆಯಿಂದ ತಮ್ಮನನ್ನೇ ಮುಗಿಸಿದ ಅಣ್ಣನ ಬಂಧನ..!

Published

on

ಬಂಟ್ವಾಳ: ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಅಣ್ಣ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ,

ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ರವಿ ಬಂಧಿತ ಆರೋಪಿಯಾಗಿದ್ದಾನೆ.

ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ಸುಂದರ(30) ಎಂಬಾತನನ್ನು ಶುಕ್ರವಾರ ತಡರಾತ್ರಿ ಕೊಲೆ ಮಾಡಿ ಅರೋಪಿ ರವಿ ಪರಾರಿಯಾಗಿದ್ದ. ಇದೀಗ ಬಂಟ್ವಾಳ ಪೋಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೊಲೆಯಾದ ಸುಂದರ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣನ ಮನೆಯಿದ್ದು, ಅಲ್ಲಿಂದ ಅತ್ತಿಗೆ ಊಟ- ತಿಂಡಿ‌ ನೀಡುತ್ತಿದ್ದರು.

ಸುಂದರನಿಗೂ ಆತನ ಅತ್ತಿಗೆಗೂ ಅನೈತಿಕ‌ ಸಂಬಂಧವಿದೆ ಎಂದು ಆರೋಪಿಸಿ ಆತನ ಅಣ್ಣ ರವಿಗೂ ಪದೇ ಪದೇ ಜಗಳ ನಡೆಯುತ್ತಲೇ ಇತ್ತು.
ಶುಕ್ರವಾರ ತಡರಾತ್ರಿಯೂ ಅವರ ಮಧ್ಯೆ ಜಗಳ ನಡೆದಿದ್ದು, ಸುಂದರ ಬೊಬ್ಬೆ ಹೊಡೆಯುವುದನ್ನು ಕೇಳಿ ಮತ್ತೋರ್ವ ಅಣ್ಣ ರಮೇಶ ಅವರು ಹೋಗಿ ನೋಡಿದಾಗ, ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ತಲೆಗೆ ಹೊಡೆದಿದ್ದು, ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದನು.

ಆರೈಕೆ ಮಾಡುತ್ತಿದ್ದಂತೆ ಮೃತಪಟ್ಟಿದ್ದಾನೆ. ಈ ವೇಳೆ ಆರೋಪಿ ರವಿಯು ಓಡಿ ಹೋಗಿ ತಲೆಮರೆಸಿಕೊಂಡಿದ್ದ.

 

BANTWAL

ಬಂಟ್ವಾಳದ ಯುವಕ ಚೆನ್ನರಾಯಪಟ್ಟಣದಲ್ಲಿ ರೈಲಿನಿಂದ ಬಿದ್ದು ಸಾವು

Published

on

ಬಂಟ್ವಾಳ: ಬಂಟ್ವಾಳ ಮೂಲದ ಯುವಕನೋರ್ವ ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಪುಣಚ ಗ್ರಾಮದ ದೇವಿನಗರ ನಿವಾಸಿ 25 ವರ್ಷ ಪ್ರಾಯದ ನಿಶಿತ್ ನಾಯ್ಕ್ ಮೃತ ಯುವಕನಾಗಿರುತ್ತಾನೆ.


ನಿಶಿತ್ ಅವರು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಮುಗಿಸಿ ಬೆಂಗಳೂರಿನ ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಊರಿಗೆ ರೈಲಿನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ, ಹಣ ಪಡೆದು ಪರಾರಿಯಾಗುತ್ತಿದ್ದ ಆರೋಪಿಗಳ ಬಂಧನ

ನಿಶಿತ್ ಅವರು ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿಯೂ ಗುರುತಿಸಿಕೊಂಡಿದ್ದರು. ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ಟ್ರೈನ್ ಹಿಡಿದಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅವರು ಮುಂಜಾನೆ ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Continue Reading

BANTWAL

ವಿಟ್ಲ: ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಮಹಿಳೆ

Published

on

ವಿಟ್ಲ: ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ. 68 ವರ್ಷದ ವಿಟ್ಲ ಮುಳ್ಳೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ ಮೃತ ಮಹಿಳೆ.


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಬೈಕ್ ಸುಮಾರು 50 ಮೀಟರ್ ದೂರ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉಳ್ಳಾಲ: ಎಮ್ ಡಿಎಮ್ ಎ ಮಾರಾಟ ಪ್ರಕರಣ: ಆರೋಪಿ ಬಂಧನ

ಗಾಯಗೊಂಡು ಬಿದ್ದಿದ್ದ ಬೈಕ್ ಸವಾರನನ್ನು ಯಾರೂ ಮುಟ್ಟದೆ ಇದ್ದ ಸಂದರ್ಭ ಕಾಶಿಮಠ ನಿವಾಸಿ ಪ್ರತಾಪ್ ಅವರು ಮಾನವೀಯತೆ ಮೆರೆದಿದ್ದು, ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತ ಸೀತಾ ಶೆಟ್ಟಿ ಅವರು ಪುತ್ರ ರೂಪೇಶ್ ಹಾಗೂ ಪುತ್ರಿ ರೂಪಿತಾರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Continue Reading

BANTWAL

ಇಂದಿನಿಂದ ಫೆ. 10ರ ತನಕ ಸಸಿಹಿತ್ಲು ಸಾರಂತಾಯ ದೈವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ

Published

on

ಮೂಲ್ಕಿ: ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವಕ್ಕೆ ಕ್ಷೇತ್ರ ಸಜ್ಜಾಗಿ ನಿಂತಿದೆ.


ಇಂದಿನಿಂದ ಮೊದಲ್ಗೊಂಡು ಫೆಬ್ರವರಿ 10 ರ ತನಕ ನಿರಂತರ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಿ. ಬಿ. ಕರ್ಕೇರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಸುಮಾರು 3.5 ಕೋಟಿ ರೂಪಾಯಿ ವೆಚ್ಚದಲ್ಲಿ ದೈವಸ್ಥಾನ ಭವ್ಯ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದೆ. ಶ್ರೀ ಉಳ್ಳಾಯ ಮತ್ತು ಪರಿವಾರ ಶಕ್ತಿಗಳಿಗೆ ಪ್ರಧಾನಗೊಂಡ ಕಾಂತಾಬಾರೆ ಬೂದಾಬಾರೆ ಮತ್ತು ಮಾಯಂದಾಲ್ ದೈವಕ್ಕೆ ಪ್ರತ್ಯೇಕ ಗುಡಿ ನಿರ್ಮಿಸಲಾಗಿದ್ದು, ದೈವಸ್ಥಾನದ ಪ್ರಧಾನ ಗೋಪುರವನ್ನು ನವೀಕರಿಸಲಾಗಿದೆ.

ಇದನ್ನೂ ಓದಿ: ಫೆ.7-8 ರಂದು ಈಶ್ವರ ಮಲ್ಪೆ ತಂಡದಿಂದ ಉಚಿತ ಶ್ರವಣ ತಪಾಸಣಾ ಶಿಬಿರ

ಹಳೆಯಂಗಡಿಯ ವೇದಮೂರ್ತಿ ಎಚ್. ರಂಗನಾಥ ಭಟ್ ನೇತೃತ್ವದಲ್ಲಿ ಏಳು ದಿನಗಳ ಕಾಲ ನಿರಂತರ ವೈದಿಕ ವಿಧಿ ವಿಧಾನಗಳು ನಡೆಯಲಿವೆ. ಬ್ರಹ್ಮಕಲಶೋತ್ಸವ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಗೌರವ ಸಲಹೆಗಾರ ಚಂದ್ರಶೇಖರ ನಾನಿಲ್, ಮುಂಬೈ ಸಮಿತಿಯ ಅಧ್ಯಕ್ಷ ಸತೀಶ್ ಎನ್ ಕೋಟ್ಯಾನ್ ಮತ್ತಿತರರು ಇದ್ದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page