Connect with us

ಎರಡು ದಿನಗಳ ಶಕ್ತಿ ಫೆಸ್ಟ್ – 2020 ಸಮಾಪನ

Published

on

ಎರಡು ದಿನಗಳ ಶಕ್ತಿ ಫೆಸ್ಟ್ – 2020 ಸಮಾಪನ

ಮಂಗಳೂರು : ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಅಯೋಜಿಸಿದ್ದ 2 ದಿನಗಳ ಶಕ್ತಿ ಫೆಸ್ಟ್ – 2020 ಸಮಾಪನಗೊಂಡಿದೆ.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಶ್ರೀ ರವಿಶಂಕರ ವಿದ್ಯಾ ಮಂದಿರದ ಪ್ರಾಂಶುಪಾಲರಾದ ಆಶಾಪ್ರಿಯ ಸ್ಪರ್ಧೆ ಗೆಲುವಿನ ಹಠ ಹಾಗೂ ಛಲವನ್ನು ಹುಟ್ಟಿಸುತ್ತದೆ. ಹಾಗಾಗಿ ಸೋಲನ್ನು ಅವಮಾನ ಎಂದು ಭಾವಿಸದೆ, ಸವಾಲಾಗಿ ಸ್ವೀಕರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮತ್ತೊಬ್ಬ ಮುಖ್ಯ ಅತಿಥಿ ಹೆಸರಾಂತ ಕಲಾವಿದ ಪಿ.ಎನ್ ಆಚಾರ್ಯ ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತಾ ಲಲಿತ ಕಲೆಗಳಲ್ಲಿಆಸಕ್ತಿ ಹೊಂದಿದ ವಿದ್ಯಾರ್ಥಿಗಳು ಬದುಕಿನಲ್ಲಿ ಯಶಸ್ಸನ್ನುಗಳಿಸುತ್ತಾರೆ.

ಲಲಿತ ಕಲೆಗಳನ್ನು ಕಲಿತ ವಿದ್ಯಾರ್ಥಿಗಳು ಯಾವುದೇ ಉದ್ಯೋಗಗಳಿಗೆ ಅವಲಂಬಿತವಾಗದೆ ಸೋದ್ಯೋಗಗಳ ಮೂಲಕವೂ ತಮ್ಮ ಜೀವನವನ್ನು ನಡೆಸಬಹುದು ಮಾತ್ರವಲ್ಲದೆ ತಮ್ಮ ಸ್ವಂತ ಪ್ರತಿಭೆಯ ಮೂಲಕ ಒಬ್ಬ ಕಲಾವಿದನಾಗಿಯೂ ತನ್ನದೇ ಶೈಲಿಯ ಕಲೆಗಳನ್ನು ಪರಿಚಯಿಸಲು ಸಾಧ್ಯವಿದೆ. ಒಬ್ಬ ಕಲಾವಿದ ತನ್ನ ಸ್ವ ಆಲೋಚನೆಗಳಿಗೆ ತನ್ನ ಪ್ರತಿಭೆ ಹಾಗೂ ತಾನು ಆರಿಸಿದ ಕಲೆಯ ಮೂಲಕ ರೂಪಕೊಡುತ್ತಾನೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ. ನಾಯಕ್‌, ಶಕ್ತಿ ಎಜ್ಯುಕೇಶನ್ ಟ್ರಸ್ಟಿನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಪ್ರಧಾನ ಸಲಹೆಗಾರ ರಮೇಶ ಕೆ., ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪಿ.ಯು ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್, ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು.

ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಒಟ್ಟು 19 ಶಾಲೆಗಳ 350 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮೊದಲನೆಯ ದಿನದ ಸ್ಪರ್ಧೆಯಲ್ಲಿ 1-4೪ ವಿಭಾಗದಲ್ಲಿ ಕೆನರ ಶಾಲೆ ಉರ್ವ ಪ್ರಥಮ, ರಾಮಕೃಷ್ಣ ಶಾಲೆ ದ್ವಿತೀಯ, ಶಾರದಾ ವಿದ್ಯಾಲಯ ಶಾಲೆ ತೃತೀಯ ಚಾಂಪಿಯನ್­ಶಿಪ್ ಪ್ರಶಸ್ತಿ ಗಳಿಸಿತು. ಎರಡನೆ ದಿನದ ಸ್ಪರ್ಧೆಯಲ್ಲಿ 5-8 ವಿಭಾಗದಲ್ಲಿ ಕೆನರಾ ಶಾಲೆ ಉರ್ವ ಪ್ರಥಮ, ಶಾರದ ವಿದ್ಯಾಲಯ ದ್ವಿತೀಯ, ರಾಮಕೃಷ್ಣ ಶಾಲೆ ತೃತೀಯ ಬಹುಮಾನಗಳಿಸಿತು.

ವಿಡಿಯೋಗಾಗಿ..

https://youtu.be/W8L5KmWSMNk

Advertisement
Click to comment

Leave a Reply

Your email address will not be published. Required fields are marked *

LATEST NEWS

ಹೆಲ್ಮೆಟ್‌ ಧರಿಸದ ಸವಾರನನ್ನು ನಿಲ್ಲಿಸಿ ದಂಡ ಹಾಕದೇ ಕಳುಹಿಸಿದ ಪೊಲೀಸ್‌ ಸಿಬ್ಬಂದಿ!

Published

on

ಶಹದೋಲ್: ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಚಾಲನೆ ಹಾಗೂ ಅಪಘಾತಗಳಾಗುವ ಸಂದರ್ಭದಲ್ಲಿ ತಲೆಗೆ ಏಟು ಬೀಳಬಾರದೆನ್ನುವ ಕಾರಣಕ್ಕೆ ಹೆಲ್ಮೆಟ್‌ ಖಡ್ಡಾಯಗೊಳಿಸಿ ಸರಕಾರವೇ ಆದೇಶ ಹೊರಡಿಸಿದೆ. ಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ.

ಆದರೆ, ಮಧ್ಯಪ್ರದೇಶದ ಶಹದೋಲ್‌ನಲ್ಲಿ ಸಂಚಾರಿ ಪೊಲೀಸ್ ಹೆಲ್ಮೆಟ್ ಧರಿಸದೇ ಬಂದ ಬೈಕ್ ಸವಾರರನನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದಾಗ ಅವರು ಹೇಳಿದ ಉತ್ತರ ಕೇಳಿ ಕಕ್ಕಾಬಿಕ್ಕಿಯಾಗಿದ್ದಾರೆ.

ತನ್ನ ದೊಡ್ಡ ತಲೆಗೆ ಚಿಕ್ಕ ಹೆಲ್ಮೆಟ್ ಸರಿಹೊಂದುವುದಿಲ್ಲ ಎಂದಾಗ ಪೊಲೀಸ್‌ ತನ್ನದೇ ಹೆಲ್ಮೆಟ್‌ ತೆಗೆದು ಸವಾರನ ತಲೆಗೆ ಇಟ್ಟು ನೋಡಿದ್ದಾರೆ. ಆದರೂ ಹೆಲ್ಮೆಟ್‌ ಅವರ ತಲೆಗೆ ಸರಿಹೊಂದಿಲ್ಲ. ಇವರಿಬ್ಬರ ನಡುವಿನ ಸಂವಾದ ಇದೀಗ ಭಾರೀ ವೈರಲ್‌ ಆಗಿದೆ.

“ದಿ ಟ್ರಾಫಿಕ್ ಕಾಪ್” ಎಂದು ಜನಪ್ರಿಯವಾಗಿರುವ ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್ ಮತ್ತು ಸೋಶಿಯಲ್ ಇನ್ಫ್ಲುಯೆನ್ಸರ್ ಆಗಿರುವ ವಿವೇಕಾನಂದ ತಿವಾರಿ, ಹೆಲ್ಮೆಟ್ ಇಲ್ಲದೆ ಮೋಟಾರ್‌ಸೈಕಲ್ ಸವಾರಿ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ತಡೆದಿದ್ದಾರೆ.

ಸುರಕ್ಷತಾ ಉಲ್ಲಂಘನೆಯ ಬಗ್ಗೆ ಪ್ರಶ್ನಿಸಿದಾಗ, ಸವಾರ ಬೈಕ್‌ನಿಂದ ಇಳಿದು ಮಾರುಕಟ್ಟೆಯಲ್ಲಿ ತನ್ನ ಗಾತ್ರದ ಹೆಲ್ಮೆಟ್ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಆರಂಭದಲ್ಲಿ ಸಂಶಯ ವ್ಯಕ್ತಪಡಿಸಿದ ತಿವಾರಿ, ಸವಾರನ ತಲೆಯ ಮೇಲೆ ತನ್ನದೇ ಆದ ಹೆಲ್ಮೆಟ್ ಹಾಕಲು ಪ್ರಯತ್ನಿಸಿದ್ದಾರೆ. ಹೆಲ್ಮೆಟ್ ಹೊಂದಿಕೆಯಾಗಲಿಲ್ಲ, ನಿಜವಾದ ಕಷ್ಟವನ್ನು ಅರಿತುಕೊಂಡ ಅಧಿಕಾರಿ, ದಂಡ ವಿಧಿಸಲ್ಲ ಎಂದರು.

ಇದನ್ನೂ ಓದಿ: ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

ಅಲ್ಲದೆ ದೊಡ್ಡ ತಲೆಗೆ ಸರಿ ಹೊಂದುವ ಹೆಲ್ಮೆಟ್‌ಗಳನ್ನು ತಯಾರಿಸಿ ಎಂದು ಕಂಪೆನಿಗಳಿಗೆ ಮನವಿ ಮಾಡಿದರು. ಈ ವಿಡಿಯೋ ವೈರಲ್‌ ಆಗಿದ್ದು, ಸ್ಟೀಲ್‌ಬರ್ಡ್ ಕಂಪೆನಿ ಹೆಲ್ಮೆಟ್ಸ್ ಕೂಡ ಪ್ರತಿಕ್ರಿಯೆ ನೀಡಿದೆ. ದೊಡ್ಡ ಹೆಲ್ಮೆಟ್‌ಗಳನ್ನು ತಯಾರಿಸುವುದಾಗಿ ಹೇಳಿದೆ.

Continue Reading

LATEST NEWS

ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

Published

on

ಕೇವಲ 10 ರೂಪಾಯಿಗೆ ಒಂದು ಬಟ್ಟೆ ಇಸ್ತ್ರಿ ಮಾಡುವ ಸಣ್ಣ ಉದ್ಯಮದಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸುತ್ತಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ.


ನಳಿನಿ ಉನಾಗರ್ ಎಂಬುವವರು ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಅವರ ಮನೆಯ ಬಳಿಯಿರುವ ಡ್ರೈ ಕ್ಲೀನರ್ ಅಂಗಡಿಯ ಮಾಲೀಕರು ಮತ್ತು ಅವರ ಪತ್ನಿ ಇಬ್ಬರೂ ಸೇರಿ ಸಹಾಯಕರ ನೆರವಿನೊಂದಿಗೆ ಈ ಸಾಧನೆ ಮಾಡುತ್ತಿದ್ದಾರೆ.

ಪ್ರತಿದಿನ ಸುಮಾರು 350 ಬಟ್ಟೆಗಳನ್ನು ತಲಾ 10 ರೂಪಾಯಿಯಂತೆ ಇಸ್ತ್ರಿ ಮಾಡುತ್ತಾರೆ. ಇದರಿಂದ ದಿನಕ್ಕೆ 3,500 ರೂ. ಆದಾಯ ಬರುತ್ತದೆ. ಪ್ರತಿದಿನ ಸರಿಸುಮಾರು 20 ಭಾರೀ ಬಟ್ಟೆಗಳನ್ನು ತಲಾ 350 ರೂ. ರಂತೆ ಡ್ರೈ ಕ್ಲೀನ್ ಮಾಡುತ್ತಾರೆ. ಇದರಿಂದ ದಿನಕ್ಕೆ 7,000 ರೂ. ಆದಾಯ ಬರುತ್ತದೆ. ಎಲ್ಲಾ ಸೇರಿ ದಿನಕ್ಕೆ ಸುಮಾರು 10,500 ರೂಪಾಯಿ ಗಳಿಸುತ್ತಾರೆ. ತಿಂಗಳಿಗೆ 27 ದಿನ ಕೆಲ್ಸ ಮಾಡಿದ್ರೂ ಒಟ್ಟು ಆದಾಯ ಸುಮಾರು 2.8 ಲಕ್ಷ ಎಂದು ನಳಿನಿ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು

ಅಂಗಡಿ ಅವರದ್ದೇ ಆದ ಕಾರಣ ಬಾಡಿಗೆ ಇರುವುದಿಲ್ಲ. ವಿದ್ಯುತ್ ಬಿಲ್ ಸುಮಾರು 6,000 ರೂ. ಮತ್ತು ಇಬ್ಬರು ಸಹಾಯಕರ ಸಂಬಳ 40,000 ರೂ. ಕಳೆದರೆ, ಅವರಿಗೆ ತಿಂಗಳಿಗೆ ಅಂದಾಜು 2.3 ಲಕ್ಷ ರೂಪಾಯಿ ಉಳಿಯುತ್ತದೆ.

Continue Reading

LATEST NEWS

ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು

Published

on

ಬೆಂಗಳೂರು: ಶಾಲಾ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಎರಡು ಪುಟ್ಟ ಕಂದಮ್ಮಗಳು ಕೊನೆಯುಸಿರೆಳೆದ ಘಟನೆ ಇಂದು ಬೆಳಿಗ್ಗೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕಾನ್ಸ್‌ಟೇಬಲ್ ನಾಗನಗೌಡ ಅವರ 2 ವರ್ಷದ ಮಗಳು ವರ್ಷ ಹಾಗೂ ಅವರ ಅಣ್ಣನ ಮಗಳು 4 ವರ್ಷದ ಭಾನು ಎಂದು ಗುರುತಿಸಲಾಗಿದೆ.

ನಗರದ ಸಿಎಆರ್ ವಿಭಾಗದಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಗನಗೌಡ ಎಂಬುವವರು ಇಂದು ಬೆಳಿಗ್ಗೆ ತಮ್ಮ ಬೈಕ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ಹೊರಟಿದ್ದರು.

ಥಣಿಸಂದ್ರದ ಮುಖ್ಯರಸ್ತೆಯ ಬಳಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಶಾಲಾ ಬಸ್ ಅಚಾನಕ್ಕಾಗಿ ಟರ್ನ್ ಪಡೆದುಕೊಂಡಿದೆ. ಈ ವೇಳೆ ಬೈಕ್‌ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ನಾಗನಗೌಡ ಮತ್ತು ಇಬ್ಬರು ಮಕ್ಕಳು ರಸ್ತೆಗೆ ಬಿದ್ದಿದ್ದಾರೆ.

ದುರದೃಷ್ಟವಶಾತ್, ಮಕ್ಕಳಿಬ್ಬರು ನೇರವಾಗಿ ಬಸ್ಸಿನ ಚಕ್ರದ ಕೆಳಗೆ ಬಿದ್ದಿದ್ದು, ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ಬಸ್ ಮಕ್ಕಳ ಮೇಲೆ ಹರಿದಿದೆ. ತಲೆಗೆ ಗಂಭೀರ ಗಾಯಗಳಾದ ಪರಿಣಾಮ ಎರಡು ಮತ್ತು ನಾಲ್ಕು ವರ್ಷದ ಇಬ್ಬರು ಪುಟಾಣಿಗಳು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ

ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page