Connect with us

ಶರವೇಗದಲ್ಲಿ ವಿಶ್ವಾದ್ಯಂತ ಹರಡುತ್ತಿದೆ ಕೊರೋನಾ ವೈರಸ್ 17 ಸಾವಿರ ಜನರಿಗೆ ಸೋಂಕು 400 ರ ಗಡಿ ದಾಡಿದ ಸಾವಿನ ಸಂಖ್ಯೆ

Published

on

ಚೀನಾ: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಣಾಂತಿಕ ಕರೋನಾ ವೈರಸ್ ಈಗ ದಕ್ಷಿಣಕನ್ನಡ ಜಿಲ್ಲೆಯ ಗಡಿಭಾಗದ ಕಾಸರಗೋಡಿಗೂ ಕಾಲಿಟ್ಟಿದೆ. ಇತ್ತೀಚೆಗಷ್ಟೇ ಚೀನಾದ ವುಹಾನ್ ನಿಂದ ಕಾಸರಗೋಡಿಗೆ ಬಂದಿರುವ ವಿದ್ಯಾರ್ಥಿಯಲ್ಲಿ ಕೊರೊನಾ ವೈರಸ್‌ಪತ್ತೆಯಾಗಿದೆ.

ಆತನಿಗೆ ಕಾಂಞಗಾಡ್‌ನ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತಂತೆ ಮಾಹಿತಿ ನೀಡಿದ ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಇದುವರೆಗೆ ಕೇರಳದಲ್ಲಿ ಮೂರು ಕೊರೊನಾ ವೈರಸ್ ಪ್ರಕರಣ ದಾಖಲಾಗಿದ್ದು, ಕಾಸರಗೋಡಿನದ್ದು ಮೂರನೇ ಪ್ರಕರಣ. ರೋಗಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ತಿಳಿಸಿದರು. ಕೇರಳ-ಕರ್ನಾಟಕದ ಗಡಿ ಭಾಗದ ಜಿಲ್ಲೆ ಕಾಸರಗೋಡಿನಲ್ಲಿ ಈ ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ.

ಜಿಲ್ಲಾಡಳಿತ ಈಗಾಗಲೇ ಕೊರೊನಾ ವೈರಸ್ ಸಂಬಂಧಿಸಿದಂತೆ ಸಿದ್ದತೆಗಳನ್ನು ಕೈಗೊಂಡಿದ್ದು, ಯಾವುದೇ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ. ಇನ್ನು ಚೀನಾದಲ್ಲಿ ಬಲಿಯಾದವರ ಒಟ್ಟು ಸಂಖ್ಯೆ 400ರ ಗಡಿ ದಾಟಿದ್ದು, 2002-03ರಲ್ಲಿ ಸಾರ್ಸ್ ಸಾಂಕ್ರಾಮಿಕದಿಂದ 349 ಮಂದಿ ಮೃತಪಟ್ಟ ದಾಖಲೆಯನ್ನು ಕೊರೊನಾ ಅಳಿಸಿ ಹಾಕಿದೆ. ವೈರಸ್ ಸೋಂಕು ತಡೆಯಲು ಹೆಣಗಾಡುತ್ತಿರುವ ಅಧಿಕಾರಿಗಳು, ನಗರದಲ್ಲಿ ರಸ್ತೆಗಳನ್ನು ಮುಚ್ಚಿ, ಜನ ಮನೆಗಳಿಂದ ಹೊರಬರದಂತೆ ಸೂಚಿಸಿದ್ದಾರೆ.


ಚೀನಾದ ವೂಹಾನ್ ನಗರದಲ್ಲಿ ಕಾಣಿಸಿಕೊಂಡ ವೈರಸ್ ಸೋಂಕು ಇದೀಗ 17000 ಮಂದಿಗೆ ಹರಡಿದ್ದು, ಚೀನಾ ಹೊರತುಪಡಿಸಿ ಇತರ 24 ದೇಶಗಳಿಗೆ ಹಬ್ಬಿದೆ. ಕೆನಡಾ, ಫ್ರಾನ್ಸ್, ಜರ್ಮನಿ, ಇಟೆಲಿ, ಜಪಾನ್, ಬ್ರಿಟನ್ ಹಾಗೂ ಅಮೆರಿಕದಲ್ಲೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಭಾರತಕ್ಕೆ ಬರುವ ಚೀನಾ ಜೆಪ್ರಗಳು ಹಾಗೂ ಚೀನಾದಲ್ಲಿರುವ ವಿದೇಶಿಯರಿಗೆ ನೀಡಲಾಗುತ್ತಿದ್ದ ಇ–ವೀಸಾ ಸೌಲಭ್ಯವನ್ನು ಭಾನುವಾರದಿಂದ ಅನ್ವಯವಾಗುವಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೊರೊನಾ ವೈರಸ್ ಸೋಂಕು ಪ್ರಸರಣದಿಂದ ತತ್ತರಿಸಿರುವ ಚೀನಾದ ವುಹಾನ್ನಿಂದ 323 ಭಾರತೀಯರನ್ನು ಹೊತ್ತ ಏರ್ ಇಂಡಿಯಾದ ಎರಡನೇ ವಿಮಾನ ನಿನ್ನೆ ನವ ದೆಹಲಿಗೆ ಆಗಮಿಸಿತು.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page