Connect with us

ಪಟ್ಲರಿಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ ಗೌರವ 

Published

on

ಪಟ್ಲರಿಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ ಗೌರವ 

ಮಂಗಳೂರು: ಮೇರು ಭಾಗವತ, ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಅವರನ್ನು ಸೃಷ್ಟಿ ಕಲಾ ವಿದ್ಯಾಲಯ ಕೊಡಮಾಡುವ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಭಾಗವತಿಕೆ ಮೂಲಕ ಯಕ್ಷ ರಂಗದಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಅದೇ ರೀತಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಲಕ ಅಶಕ್ತ ಕಲಾವಿದರ ಶ್ರೇಯೋಭಿವೃದ್ಧಿಗೆ, ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಟ್ಲ ಸತೀಶ ಶೆಟ್ಟಿ ಅವರ ಸಮಾಜ ಮುಖಿ ಸೇವೆಯನ್ನು ಪರಿಗಣಿಸಿ, ಫೆ.2ರಂದು ಬೆಂಗಳೂರಿನ ಸೃಷ್ಟಿ ಕಲಾವಿದ್ಯಾಲಯ ದಶಮಾನದ ಹಬ್ಬದ ಸಂದರ್ಭದಲ್ಲಿ ಜೆ.ಪಿ. ನಗರದ ಆರ್.ವಿ.ದಂತ ಮಹಾವಿದ್ಯಾಲಯ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸೃಷ್ಟಿ ಕಲಾ ವಿದ್ಯಾಲಯ ಸಂಸ್ಥಾಪಕ ಛಾಯಾಪತಿ ಕಂಚಿಬೈಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಲಾ ಲೋಕಕ್ಕೆ ತಮ್ಮನ್ನು ಅರ್ಪಿಸಿಕೊಂಡು ಕಲಾದೇವಿಯನ್ನು ಆರಾಧಿಸುತ್ತಿರುವ ಕಲಾವಿದರಿಗೆ ಸೃಷ್ಟಿ ಕಲಾಭೂಷಣ ಹಾಗೂ ಸೃಷ್ಟಿ ಕಲೋಪಾಸಕ ಪ್ರಶಸ್ತಿಯನ್ನು ನೀಡಿ ಸತ್ಕರಿಸಲಾಗುತ್ತದೆ.
ದೊಡ್ಢೇ ರಂಗೇಗೌಡ, ವಿದ್ಯಾಭೂಷಣ, ರಮೇಶ್ಚಂದ್ರ, ಅರ್ಚನಾ ಉಡುಪ ಮುಂತಾದ ಮಹನೀಯರುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಈ ಬಾರಿ ಸೃಷ್ಟಿ ಕಲಾಬಂಧು ಪ್ರಶಸ್ತಿಯನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ಶ್ರೀಕಾಂತ್ ರಾವ್ ಜೆ. ಅವರಿಗೆ ನೀಡಲಾಗುವುದು. ಜಾದೂಗಾರ್ ಪ್ರಹ್ಲಾದ್ ಆಚಾರ್ಯ ಅವರಿಗೆ ಸೃಷ್ಟಿ ಕಲೋಪಾಸಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ದಶಮಾನ ಹಬ್ಬದಲ್ಲಿ ಯಕ್ಷಗಾನ, ಕಥಕ್ ನೃತ್ಯ, ಕಲರಿಯಪಟ್ಟು, ಶಾಡೋ ಪ್ಲೇ, ಡೊಳ್ಳು ಕುಣಿತ, ಕರ್ನಾಟಕ ಸಂಗೀತ ನಡೆಯಲಿದೆ.

ದಶಮಾನ ಹಬ್ಬದ ಪ್ರಯುಕ್ತ ಸಂಗೀತ ಹಬ್ಬ, ವಾದನ ಹಬ್ಬ, ಭರತ ನಾಟ್ಯ ಹಬ್ಬ, ಚಿತ್ರಕಲಾ ಹಬ್ಬ ನಗೆ ಹಬ್ಬ, ಯಕ್ಷಗಾನ ಹಬ್ಬ, ಸಿನಿಮೀ ನೃತ್ಯ ಹಬ್ಬ, ಸನ್ಮಾನ ಹಬ್ಬ, ಜಾನಪದ ಹಬ್ಬ, ಕಲಾ ಸಂಗಮ ಹಬ್ಬ ನಡೆಯಲಿದೆ.

ಸ್ನೇಹಜ್ಯೋತಿ ಅನಾಥಾಶ್ರಮ, ಶ್ರೀಶಂಕರಾಚಾರ್ಯ ವಿದ್ಯಾ ಪೀಠ ಆಶ್ರಮದ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ಮತ್ತು ವೇದಿಕೆ ಕಲ್ಪಿಸುವ ಮೂಲಕ ಅವರಿಗೆ ನೈತಿಕ ಮತ್ತು ಆರ್ಥಿಕ ಬೆಂಬಲ ನೀಡುತ್ತಿದ್ದೇವೆ.

ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ರತಿ ವರ್ಷ ಸಾವಿರ ಗಿಡ ನೆಡುವ ಮೂಲಕ ಪರಿಸರ ಕಾಳಜಿ, ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಜಿತೇಂದ್ರ ಕುಂದೇಶ್ವರ, ಶ್ರೀಲೋಕಾಭಿರಾಮ ವ್ಯವಸ್ಥಾಪಕ ಸಂಪಾದಕ ಶಂಕರ ಮೂರ್ತಿ ಕಾಯರಬೆಟ್ಟು ಇದ್ದರು.

ವಿಡಿಯೋ..

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page