Connect with us

LATEST NEWS

10 ವರ್ಷ ಪ್ರಿಯತಮೆಯನ್ನು ತನ್ನ ರೂಮಿನಲ್ಲಿ ಬಚ್ಚಿಟ್ಟು ಮದುವೆಯಾದ ಪಾಗಲ್‌ ಪ್ರೇಮಿ

Published

on

ಪಾಲಕ್ಕಾಡ್‌: ಯಾರಿಗೂ ತಿಳಿಯದಂತೆ ಪ್ರಿಯತಮೆಯನ್ನು 10 ವರ್ಷಗಳ ಕಾಲ ತನ್ನ ಮನೆಯ ಒಂಟಿ ಕೋಣೆಯಲ್ಲಿ ಬಚ್ಚಿಟ್ಟು ಸುದ್ದಿಯಾಗಿದ್ದ ವ್ಯಕ್ತಿ, ಕೊನೆಗೂ ಆಕೆಯನ್ನು ವಿವಾಹವಾಗಿದ್ದಾನೆ.


ರೆಹಮಾನ್‌ ಎಂಬಾತ ತನ್ನ ಪ್ರಿಯತಮೆ ಸಾಜಿತಾ ಎಂಬಾಕೆಯನ್ನು ಹತ್ತು ವರ್ಷಗಳ ಕಾಲ ಬಚ್ಚಿಟ್ಟಿದ್ದ ಎಂದು ಸುದ್ದಿಯಾಗಿದ್ದು,

ಬುಧವಾರ ಇಬ್ಬರು ಪಾಲಕ್ಕಾಡ್‌‌ ನೇನ್ಮರದಲ್ಲಿ ರಿಜಿಸ್ಟರ್‌‌ ವಿವಾಹವಾಗಿದ್ದಾರೆ. ಸಾಜಿತಾ ಸರಳವಾದ ಹತ್ತಿ ಸಲ್ವಾರ್‌ ಧರಿಸಿದ್ದು, ರೆಹಮಾನ್‌ ಸಾಂಪ್ರದಾಯಿಕ ಧೋತಿ ಹಾಗೂ ಶರ್ಟ್‌ನಲ್ಲಿ ಕಾಣಿಸಿಕೊಂಡಿದ್ದು,

ಇಬ್ಬರು ಜೊತೆಯಾಗಿ ವಿವಾಹ ದಾಖಲೆಗಳಿಗೆ ಸಹಿಹಾಕಿದ್ದಾರೆ. ವಿವಾಹದ ಬಳಿಕ ಎಲ್ಲರಿಗೂ ಸಿಹಿ ಹಂಚಿ ತಮ್ಮನ್ನು ಬೆಂಬಲಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ರೆಹಮಾನ್‌‌, ನಾವಿಬ್ಬರು ಸಂತೋಷ ಹಾಗೂ ಶಾಂತಿಯುತ ಜೀವನ ನಡೆಸಬೇಕು ಎಂದು ಇಚ್ಛಿಸಿದ್ದೇವೆ ಎಂದು ಹೇಳಿದ್ದಾರೆ.

ಸಾಜಿತಾ ಕುಟುಂಬ ವಿವಾಹಕ್ಕೆ ಸಾಕ್ಷಿಯಾಗಿತ್ತು. ಆದರೆ, ರೆಹಮಾನ್‌ ಕುಟುಂಬಕ್ಕೆ ವಿವಾಹ ಇಷ್ಟವಿಲ್ಲದ ಕಾರಣ ಅವರು ಅಂತರ ಕಾಯ್ದುಕೊಂಡಿದ್ದರು.

ವಿವಾಹದಲ್ಲಿ ನೇನ್ಮಾರಾ ಶಾಸಕ ಕೆ. ಬಾಬು ಕೂಡಾ ಪಾಲ್ಗೊಂಡಿದ್ದು, ಜೋಡಿಗೆ ಶುಭ ಹಾರೈಸಿದ್ದು, ಸ್ವಂತ ಮನೆ ಕಟ್ಟಿಕೊಳ್ಳುವ ಅವರ ಆಸೆಯನ್ನು ನೆರವೇರಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಘಟನೆಯ ವಿವರ
2010ರ ಫೆಬ್ರವರಿ 2ರಂದು ಕೇರಳದ ಪಲಕ್ಕಾಡ್ ಜಿಲ್ಲೆಯ ಅರಿಯೂರು ಸಮೀಪದ ಕರೈಕ್ಕಟ್ಟುಪರಂಬು ಗ್ರಾಮದಲ್ಲಿ 19 ವರ್ಷದ ಸಾಜಿತಾ ನಾಪತ್ತೆಯಾಗಿದ್ದಳು.

ಮಗಳಿಗಾಗಿ ಪೋಷಕರು ಎಷ್ಟೇ ಹುಡುಕಾಡಿದರೂ ಕೂಡಾ ಮಗಳು ಪತ್ತೆಯಾಗಿರಲಿಲ್ಲ. ಕೊನೆಗೆ ಪೋಷಕರು ಪೊಲೀಸ್‌ ಠಾಣೆಯಲ್ಲಿ ಸಾಜಿತಾ ನಾಪತ್ತೆ ಕೇಸ್‌‌ ದಾಖಲಿಸಿದ್ದರು.

ಆದರೆ, ಸಾಜಿತಾ ಅದೇ ಗ್ರಾಮದ ಯುವಕನಾದ ಆಕೆಯ ಪ್ರಿಯಕರ ರೆಹಮಾನ್‌ ಮನೆಯಲ್ಲಿ ಇದ್ದಳು. ಅಂದು ನಾಪತ್ತೆಯಾಗಿದ್ದ ಸಾಜಿತಾಳನ್ನು ರೆಹಮಾನ್ ತನ್ನ ಮನೆಯಲ್ಲಿಯ ಕೋಣೆಯೊಂದರಲ್ಲಿ ಅಡಗಿಸಿಟ್ಟಿದ್ದ. ಆದರೆ, ಈ ಬಗ್ಗೆ ಯಾರಿಗೂ ತಿಳಿದೇ ಇರಲಿಲ್ಲ.

ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ ಬಳಿಕ ಆತ ಕಿಟಕಿಯ ಮೂಲಕ ಆಕೆಯನ್ನು ಸ್ನಾನಗೃಹಕ್ಕೆ, ಶೌಚಗೃಹಕ್ಕೆ ಕರೆದೊಯ್ಯುತ್ತಿದ್ದ. ತಾನು ಕೋಣೆಯಲ್ಲಿ ಊಟ ಮಾಡುತ್ತೇನೆ ಎಂದು ತಟ್ಟೆಗೆ ಊಟ ಹಾಕಿಕೊಂಡು ಹೋಗುತ್ತಿದ್ದವನು ತನ್ನ ಪ್ರೇಯಸಿಗೆ ಊಟ ನೀಡುತ್ತಿದ್ದ.

ಅಲ್ಲದೇ, ರೆಹಮಾನ್‌ ತನ್ನ ಕೋಣೆಗೆ ಯಾರಿಗೂ ಪ್ರವೇಶ ನೀಡುತ್ತಿರಲಿಲ್ಲ. ಮನೆಯವರು ಪ್ರಶ್ನಿಸುವುದನ್ನು ತಪ್ಪಿಸಲು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಈ ಕಾರಣದಿಂದ ಮನೆಯವರು ಆತನ ಬಳಿ ಸುಳಿಯುತ್ತಿರಲಿಲ್ಲ. ಕೆಲಸಕ್ಕೆ ಹೋದರೂ ಕೂಡಾ ಬೇಗ ಮನೆಗೆ ಬಂದು ಸೇರಿಕೊಳ್ಳುತ್ತಿದ್ದ. ರೆಹಮಾನ್‌ ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ.

ಈ ಬಗ್ಗೆ ಆತಂಕಗೊಂಡಿದ್ದ ಪೋಷಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಇತ್ತೀಚೆಗೆ ರೆಹಮಾನ್‌ ತನ್ನ ಸಹೋದರನ ಕಣ್ಣಿಗೆ ಬಿದ್ದಿದ್ದ.

ಈ ವಿಚಾರ ಪೊಲೀಸರಿಗೆ ತಿಳಿಯುತ್ತಿದ್ದಂತೆ ಪೊಲೀಸರು ರೆಹಮಾನ್‌‌ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ವೇಳೆ ನಿಜ ವಿಚಾರ ಬಯಲಾಗಿದೆ.

LATEST NEWS

NSUI ನಾಯಕನ ಮೇಲೆ ತಲವಾರು ದಾ*ಳಿ ಪ್ರಕರಣ; ಐವರು ಅರೆಸ್ಟ್

Published

on

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಎನ್.ಎಸ್.ಯು.ಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ನಡೆದ ಹ*ಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕುಂಜಿಬೆಟ್ಟು ನಿವಾಸಿ ಅಕ್ಷತ್ ಪೈ (27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ ಕೊರಗ (38), ಅಲೆವೂರು ನಿವಾಸಿ ಶಂಶಾಂಕ್ ನಾಯಕ್ (25) ಬಂಧಿತ ಆರೋಪಿಗಳು.

ಜನವರಿ 30 ರಂದು ರಾತ್ರಿ 9 ಗಂಟೆ ಸುಮಾರಿಗೆ ಚಿಟ್ಟಾಡಿ ಬೈಲೂರು ಬಡಗುಬೆಟ್ಟು ನಿವಾಸಿ ಶರತ್ ಕುಂದರ್ (25) ಅವರು ತಮ್ಮ ಸ್ನೇಹಿತನ ಕಾರಿನಲ್ಲಿ ಮಣಿಪಾಲದ ಹೋಟೆಲೊಂದಕ್ಕೆ ಊಟಕ್ಕೆಂದು ತೆರಳಿದ್ದರು. ಅಲ್ಲಿ ಅಕ್ಷತ್ ಪೈ, ಶಶಾಂಕ್ ಹಾಗೂ ಉಡುಪಿಯ ಜನರಲ್ ಸ್ಟೋರೊಂದರ ಮಾಲಕರ ಮಗನೊಂದಿಗೆ ಸಣ್ಣ ವಿಚಾರಕ್ಕೆ ಸಂಬಂಧಿಸಿ ಬಾಯಿ ಮಾತಿನ ಗಲಾಟೆ ನಡೆದಿದೆ.

ನಂತರ ಶರತ್ ಕುಂದ‌ರ್ ಮನೆಗೆ ವಾಪಸ್ಸಾಗುತ್ತಿದ್ದಾಗ ಕಲ್ಸಂಕ ಬಳಿ ತಲುಪುವ ಸಂದರ್ಭದಲ್ಲಿ ಅಕ್ಷತ್ ಪೈ ಕರೆ ಮಾಡಿ, ಹೋಟೆಲ್‌ನ ಗಲಾಟೆ ವಿಚಾರವಾಗಿ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ನಿಲ್ಲುವಂತೆ ತಿಳಿಸಿದ್ದಾನೆ. ರಾತ್ರಿ ಸುಮಾರು 11.30ರ ವೇಳೆಗೆ ಪಿಪಿಸಿ ಕ್ರಾಸ್ ಸಮೀಪ ಕೋಸ್ಟಲ್ ಚಿಕನ್ ಅಂಗಡಿಯ ಎದುರು ರಸ್ತೆಯ ಬದಿಯಲ್ಲಿ ಶರತ್ ಕುಂದರ್ ತಮ್ಮ ಸ್ನೇಹಿತರಾದ ಧ್ರುವಾ, ಸಿಲಾನ್ ಗಗನ್ ಹಾಗೂ ರೋಹಿತ್ ಜೊತೆ ಮಾತನಾಡುತ್ತ ನಿಂತಿದ್ದ ವೇಳೆ ಟಾಟಾ ಸಫಾರಿ ಮತ್ತು ಮಹೀಂದ್ರ ಥಾರ್ ವಾಹನಗಳು ಏಕಾಏಕಿ ಬಂದು ನಿಂತಿವೆ.

ವಾಹನಗಳಿಂದ ಇಳಿದ ಅಕ್ಷತ್ ಪೈ, ಶಶಾಂಕ್ ಸೇರಿದಂತೆ ಆರೇಳು ಮಂದಿ ಕೈಯಲ್ಲಿ ತಲವಾರಿನಂತಹ ಆಯುಧ ಹಾಗೂ ಕಬ್ಬಿಣದ ಚೈನ್ ಹಿಡಿದು ಶರತ್ ಕುಂದ‌ರ್ ಮೇಲೆ ಹಲ್ಲೆ ನಡೆಸಿದರೆಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆ ಬಳಿಕ  ಆರೋಪಿಗಳು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದರು. ಗಾಯಾಳುವನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ ಹುಂಡೈ ಅವೆನ್ಯೂ ಕಾರು (ಅಂದಾಜು ಮೌಲ್ಯ 8 ಲಕ್ಷ) ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

FILM

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್ ಪೋಸ್ಟ್!

Published

on

ಕನ್ನಡ ಚಿತ್ರರಂಗದ ಮಾದರಿ ದಂಪತಿಗಳಾದ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿಯ ವ್ಯಾಲೆಂಟೈನ್ಸ್ ದಿನವನ್ನು ಪ್ರೀತಿಯಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪತಿ ಯಶ್ ಅವರೊಂದಿಗೆ ಇರುವ ಸುಂದರವಾದ ಫೋಟೋವನ್ನು ಹಂಚಿಕೊಳ್ಳುವ ಮೂಲಕ ವಿಶ್ ಮಾಡಿದ್ದಾರೆ.


ರಾಧಿಕಾ ಪಂಡಿತ್‌ ಮತ್ತು ಯಶ್‌ ಇಬ್ಬರೂ ಧಾರಾವಾಹಿ ಮೂಲಕ ಪರಿಚಯ ಆಗಿದ್ದು, ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿ, ಬಳಿಕ ಒಟ್ಟಾಗಿ ಸಿನಿಮಾ ಮಾಡಿದರು. ತೆರೆಮೇಲೆ ಜೋಡಿಯಾಗಿದ್ದ ಇವರು ತೆರೆಹಿಂದೆಯೂ ಕಪಲ್‌ ಆಗಿದ್ದಾರೆ. ಇದೀಗ ಯಶ್‌ ಅವರ ಕುರಿತು ರಾಧಿಕಾ ಪಂಡಿತ್‌ ಹಂಚಿಕೊಂಡಿರೋ ಪೋಸ್ಟ್‌ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಯಶ್ ಅವರಿಗೆ ಧನ್ಯವಾದ ಅರ್ಪಿಸಿರುವ ರಾಧಿಕಾ, ‘ನನ್ನ ಅಭದ್ರತೆಯನ್ನು ತೆಗೆದು ಹಾಕಿದವನು ನೀನು. ನಿನ್ನ ಕಣ್ಣುಗಳಲ್ಲಿ ದಣಿವು, ಬೇರೆ ಯಾರೂ ಗಮನಿಸದ ತ್ಯಾಗ, ದೂರು ನೀಡದೆ ನೀನು ಹೊತ್ತುಕೊಂಡ ದೀರ್ಘ ಭಾರ ನನಗೆ ಕಾಣುತ್ತಿದೆ. ಅದು ನಮಗಾಗಿ ಎಂದು ನನಗೆ ತಿಳಿದಿದೆ. ನನ್ನನ್ನು ದಿನವೂ ಆಯ್ಕೆ ಮಾಡಿದ್ದಕ್ಕೆ ನಿನಗೆ ಧನ್ಯವಾದ, ಹ್ಯಾಪಿ ವ್ಯಾಲೆಂಟೈನ್ಸ್ ಡೇ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಇಬ್ಬರೂ ಜೊತೆಯಾಗಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಪ್ರೇಮಿಗಳ ದಿನದ ಶುಭಾಶಯ ಕೋರಿದ್ದಾರೆ. ರಾಧಿಕಾ ಪಂಡಿತ್ ಅವರ ಈ ಪೋಸ್ಟ್ ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಸಾವಿರಾರು ಅಭಿಮಾನಿಗಳು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

Continue Reading

LATEST NEWS

ಚರಂಡಿಗೆ ಬಿ*ದ್ದು ಬಾಲಕ ಸಾ*ವು

Published

on

ಮಂಗಳೂರು/ಬೀದರ್ : ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕ  ಚರಂಡಿಗೆ ಬಿ*ದ್ದು ಸಾ*ವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅವಿನಾಶ್ ಮೃ*ತ ಬಾಲಕ. ಮನೆಯ ಮುಂದೆ ಆಡುತ್ತಿದ್ದ ಬಾಲಕ ಕಾಣೆಯಾಗಿದ್ದ. ಹೀಗಾಗಿ  ಕುಟುಂಬಸ್ಥರು ಹುಡುಕಾಡಿದ್ದು, ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾ*ವನ್ನಪ್ಪಿರುವುದು ಗೊತ್ತಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಬಗದಲ್ ಪೊಲೀಸ್ ವ್ಯಾಪ್ತಿಯಲ್ಲಿ ಈ ದುರಂ*ತ ಸಂಭವಿಸಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page