Connect with us

ಶ್ರಮಿಕ್ ವಿಶೇಷ ರೈಲಿನ ಮೂಲಕ ಊರಿಗೆ ಹಿಂದಿರುಗಿದ 1520 ಮಂದಿ ವಲಸೆ ಕಾರ್ಮಿಕರು..

Published

on

ಶ್ರಮಿಕ್ ವಿಶೇಷ ರೈಲಿನ ಮೂಲಕ ಊರಿಗೆ ಹಿಂದಿರುಗಿದ 1520 ಮಂದಿ ವಲಸೆ ಕಾರ್ಮಿಕರು..

ಪುತ್ತೂರು: ವಿಶೇಷ ರೈಲಿನ ಮೂಲಕ ಮೇ 12ರಂದು ಪುತ್ತೂರಿನಿಂದ 1498 ಮಂದಿ ವಲಸೆ ಕಾರ್ಮಿಕರು ಬಿಹಾರಕ್ಕೆ ತೆರಳಿದ ಬೆನ್ನಲೇ,

ಇದೀಗ ಬಂಟ್ವಾಳ ಸೇರಿದಂತೆ ಪುತ್ತೂರು ಉಪ ವಿಭಾಗದಿಂದ ಒಟ್ಟು 1520 ಮಂದಿ ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರು ಶನಿವಾರ (ಮೇ 16) ವಿಶೇಷ ರೈಲಿನ ಮೂಲಕ ಪುತ್ತೂರಿನಿಂದ ತಮ್ಮ ಊರಿಗೆ ತೆರಳಿದ್ದಾರೆ.

ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಎಡಿಷನಲ್ ಎಸ್ಪಿ ವಿಕ್ರಂ ಅಮ್ಟೆ, ಡಿವೈಎಸ್ಪಿ ದಿನಕರ್ ಶೆಟ್ಟಿ, ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು, ಕಡಬ ತಹಶೀಲ್ದಾರ್ ಜಾನ್‌ಪ್ರಕಾಶ್, ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರೀ,

ಸುಳ್ಯ ತಹಶೀಲ್ದಾರ್ ಅನಂತ ಶಂಕರ, ಜತೆ ಕಂದಾಯ ಇಲಾಖೆ ಸಿಬಂದಿ, ಕೆಎಸ್ಸಾರ್ಟಿಸಿ ಅಧಿಕಾರಿಗಳು, ರೈಲ್ವೇ ಅಧಿಕಾರಿಗಳು , ಪೊಲೀಸ್ ಸಿಬಂದಿ ಸಹಕಾರದಲ್ಲಿ,

1520 ಮಂದಿ ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಸ್ಕ್ರೀನಿಂಗ್ ಹಾಗೂ ವೈದ್ಯಕೀಯ ಪರಿಶೀಲನೆ ನಡೆಸಿ ಕಳುಹಿಸಿ ಕೊಡಲಾಯಿತು.

ಪುತ್ತೂರು ಉಪವಿಭಾಗದ ಬೆಳ್ತಂಗಡಿ, ಸುಳ್ಯ, ಸುಬ್ಯಹ್ಮಣ್ಯ, ಕಡಬ, ಬಂಟ್ವಾಳ ಭಾಗಗಳಿಂದ 42 ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಬಂದ ವಲಸೆ ಕಾರ್ಮಿಕರನ್ನು,

ಪುತ್ತೂರು ಮಹಾಲಿಂಗೇಶ್ವರ ದೇವಳದ ದೇವರ ಮಾರುಗದ್ದೆಯಲ್ಲಿ ಸೇರಿಸಿ ಅಲ್ಲಿಂದ ಅದೇ ಬಸ್ ಮೂಲಕ ರೈಲ್ವೇ ಸ್ಟೇಶನ್‌ಗೆ ಕರೆ ತರಲಾಯಿತು.

ನಂತರ ಶ್ರಮಿಕ್ ವಿಶೇಷ ರೈಲಿನಲ್ಲಿ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶಕ್ಕೆ ಕಳುಹಿಸಲಾಯಿತು.

ಈ ವಲಸೆ ಕಾರ್ಮಿಕರಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಳ ಮತ್ತು ಪುತ್ತೂರು ಮಹಾಲಿಂಗೇಶ್ವರ ದೇವಳದ ವತಿಯಿಂದ ಊಟ, ಹಾಗೂ ಕಿಟ್, ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಯಿತು.

ಪುತ್ತೂರು ಕಬಕ ರೈಲ್ವೇ ನಿಲ್ದಾಣದಿಂದ ಹೊರಟ ಶ್ರಮಿಕ ರೈಲು ಅರಸೀಕೆರೆ, ಗುಂಟಕಲ್, ನಾಗಪುರ, ಝಾನ್ಸಿ, ಲಕ್ನೋ ಮೂಲಕ,

ಸುಮಾರು 52 ಗಂಟೆಗಳಲ್ಲಿ ಉತ್ತರ ಪ್ರದೇಶ ಸೇರಲಿದ್ದಾರೆ ಎಂದು ನೈರುತ್ಯ ರೈಲ್ವೇ ಮೈಸೂರು ವಿಭಾಗದ ಹಿರಿಯ ಟಿಕೇಟ್ ನಿರೀಕ್ಷಕ ವಿಠಲ್ ನಾಯಕ್ ಮಾಹಿತಿ ನೀಡಿದ್ದಾರೆ.

ಇನ್ನು ಮಂಗಳೂರು ಜಂಕ್ಷನ್‌ ನಿಲ್ದಾಣದಿಂದ ಶುಕ್ರವಾರ (ಮೇ 15) ಬಿಹಾರ ಮತ್ತು ಝಾರ್ಖಂಡ್‌ಗೆ ಸುಮಾರು 3,000 ಮಂದಿ ತೆರಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದ ಇತರ ರಾಜ್ಯಗಳ 40,510 ಕಾರ್ಮಿಕರು ಹೊರ ರಾಜ್ಯಕ್ಕೆ ತೆರಳಲು “ಸೇವಾ ಸಿಂಧು’ ಆ್ಯಪ್ ಮೂಲಕ ನೋಂದಣಿ ಮಾಡಿದ್ದಾರೆ.

ಬಿಹಾರದ 7,589 ಮಂದಿ, ಝಾರ್ಖಂಡ್‌ನ‌ 7,976, ಉತ್ತರಪ್ರದೇಶದ 9,700, ಪಶ್ಚಿಮ ಬಂಗಾಲದ 4,609 ಮಂದಿ ಜಿಲ್ಲೆಯಲ್ಲಿದ್ದರು.

ಈ ಪೈಕಿ ಉತ್ತರ ಪ್ರದೇಶದ 6,000, ಬಿಹಾರದ 4200, ಝಾರ್ಖಂಡ್‌ನ‌ 1,148 ಮಂದಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಿಂದ ತೆರಳಿದ್ದಾರೆ.

ಜಿಲ್ಲೆಯಲ್ಲಿದ್ದ ಬಾಗಲಕೋಟೆ, ಗದಗ, ವಿಜಯಪುರ ಸೇರಿದಂತೆ 25 ರಾಜ್ಯಗಳ 12,970 ಮಂದಿ 500 ಬಸ್‌ಗಳ ಮೂಲಕ ತೆರಳಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page