Connect with us

ಯು.ಎ.ಇ ಯಿಂದ 177 ಅನಿವಾಸಿ ಭಾರತೀಯರು ನಾಳೆ ಮಂಗಳೂರಿಗೆ ಆಗಮನ

Published

on

ಯು..  ಯಿಂದ 177 ಅನಿವಾಸಿ ಭಾರತೀಯರು ನಾಳೆ ಮಂಗಳೂರಿಗೆ ಆಗಮನ

ಮಂಗಳೂರು:  ವಿದೇಶದಲ್ಲಿರುವ ಭಾರತೀಯರನ್ನು ಮಂಗಳೂರಿಗೆ ಕರೆತರಲು ಮೊದಲ ವಿಮಾನ ಸಜ್ಜಾಗಿದ್ದು, ಮೇ 12 ರಂದು ರಾತ್ರಿ ಸುಮಾರು 10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ ಎಂದು ಐ.ಎ.ಎಸ್ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.

ಸೋಮವಾರ (ಮೇ 11) ಮಂಗಳೂರು ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,

ವಿದೇಶದಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು  ಮಾಡಿಕೊಂಡಿದೆ.

ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು.

ಯು.ಎ.ಇ  ನಿಂದ ಮಂಗಳೂರಿಗೆ ವಿಮಾನದಲ್ಲಿ ಒಟ್ಟು  177 ಪ್ರಯಾಣಿಕರು ಆಗಮಿಸಲಿದ್ದಾರೆ. ಅವರನ್ನು 17 ಹೋಟೆಲ್‍ ಹಾಗೂ 12 ಹಾಸ್ಟೆಲ್ ಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ.

ವಿಮಾನ ನಿಲ್ದಾಣದಲ್ಲಿ ನೇಮಿಸಿರುವ ಅಧಿಕಾರಿಯು ಪ್ರಯಾಣಿಕರಿಂದ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆಯಲಿದ್ದಾರೆ ಎಂದವರು ಮಾಹಿತಿ ನೀಡಿದರು.

ಪ್ರಯಾಣಿಕರನ್ನು ಸ್ವೀಕರಿಸುವಲ್ಲಿ, ಹೋಟೆಲ್ ಬುಕ್ಕಿಂಗ್ ವ್ಯವಸ್ಥೆ, ವಾಹನ ವ್ಯವಸ್ಥೆ, ಹೋಟೆಲ್ ಕ್ವಾರಂಟೈನ್ ವ್ಯವಸ್ಥೆ ಪ್ರತಿಯೊಂದು ವಿಭಾಗಕ್ಕೂ ಒಬ್ಬ ಅಧಿಕಾರಿಯನ್ನು ನೇಮಕ ಮಾಡಲಾಗಿದ್ದು,

ಅಧಿಕಾರಿಗಳು ಎಲ್ಲಾ ಕಡೆ ಭೇಟಿ ನೀಡಿ ಮಾಹಿತಿ ನೀಡಬೇಕು ಎಂದು ರಾಹುಲ್ ಸೂಚಿಸಿದರು.

ಪ್ರಯಾಣಿಕರಲ್ಲಿ ‘ಎ ಮತ್ತು ಬಿ’ ಎಂದು 2 ವಿಭಾಗ ಮಾಡಲಾಗುವುದು. ಕೆಮ್ಮು, ಜ್ವರ, ನೆಗಡಿ ಇರುವವರು ‘ಎ’ ವಿಭಾಗದ ಪ್ರಯಾಣಿಕರು.

ಇವರಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 14 ದಿನಗಳವರೆಗೆ ಕ್ವಾರಂಟೈನ್ ಮಾಡಿ ಬೇಕಾಗುವ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದರು.

‘ಬಿ’ ವಿಭಾಗ ಎಂದರೆ ಯಾವುದೇ ರೋಗ ಲಕ್ಷಣ ಇಲ್ಲದವರು ಅಂತವರನ್ನ ಹೋಟೆಲ್/ಹಾಸ್ಟೆಲ್ ಕ್ವಾರೆಂಟೈನ್‍ ನಲ್ಲಿ ಇರಿಸಲಾಗುವುದು.

ವಿಮಾನ ನಿಲ್ದಾಣದಲ್ಲೇ ಹೋಟೆಲ್‍ ಗಳನ್ನು ಗುರುತಿಸಲು ಆನ್‍ ಲೈನ್ ಬುಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಅಲ್ಲಿಂದ ಪ್ರಯಾಣಿಕರು ಗುರುತಿಸಿರುವ ಹೋಟೆಲ್‍ಗಳಿಗೆ ತಲುಪಿಸಲು ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಚಂದ್ರ ಬಾಯರಿ, ಮಂಗಳೂರು ಮಹಾನಗರಪಾಲಿಕೆ ಪರಿಸರ ಅಭಿಯಂತರ ಮಧು ಮನೋಹರ್ ಹಾಗೂ ಇತರ ಇಲಾಖಾ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page