Connect with us

LATEST NEWS

ಟಿ20 ವಿಶ್ವಕಪ್‌ನಲ್ಲಿ ಕಿಂಗ್‌ ಕೊಹ್ಲಿ ದಾಖಲೆ ಮುರಿದ 22 ವರ್ಷದ ಯುವ ದಾಂಡಿಗ!

Published

on

ಮುಂಬೈ: ಟಿ20 ವಿಶ್ವಕಪ್‌ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಇದೀಗ ವೆಸ್ಟ್‌ ಇಂಡೀಸ್ ಎದುರಿನ ಪಂದ್ಯದಲ್ಲಿ ಝಿಂಬಾಬ್ವೆ ತಂಡದ 22ರ ಯುವ ದಾಂಡಿಗ ಕಿಂಗ್‌ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯೊಂದನ್ನ ಮುರಿದಿದ್ದಾರೆ.


ಹೌದು.. ಈ ಬಾರಿಯ ವಿಶ್ವಕಪ್​ನಲ್ಲಿ ಒಮಾನ್ ವಿರುದ್ಧ ಅಜೇಯ 48 ರನ್ ಬಾರಿಸಿದ್ದ ಬ್ರಿಯಾನ್ ಬೆನ್ನೆಟ್, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಜೇಯ 64 ರನ್​ ಗಳಿಸಿದ್ದರು. ಇನ್ನು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಜೇಯ 63 ರನ್ ಬಾರಿಸಿದ್ದರು.

ಅಂದರೆ ಮೊದಲ ಮೂರು ಇನಿಂಗ್ಸ್​ಗಳಲ್ಲಿ ಬ್ರಿಯಾನ್ ಬೆನ್ನೆಟ್ ಔಟ್ ಆಗಿರಲಿಲ್ಲ. ಆದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಬ್ರಿಯಾನ್ ಬೆನ್ನೆಟ್ ಕೇವಲ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಕಳೆದ 4 ಇನಿಂಗ್ಸ್​ಗಳ ಮೂಲಕ ಬ್ರಿಯಾನ್ ಬೆನ್ನೆಟ್ ಬರೋಬ್ಬರಿ 180 ರನ್​ಗಳಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಔಟಾಗುವ ಮುನ್ನ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

ಇದನ್ನೂ ಓದಿ: IND vs SA: ತಂಡದ ಸೋಲಿಗೆ ಕಾರಣ ತಿಳಿಸಿದ ಕ್ಯಾಪ್ಟನ್‌ ಸೂರ್ಯ; ಹೋಗಳಿದ್ದು ಯಾರನ್ನ..?

2022 ರ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ ಮೊದಲ ಮೂರು ಇನಿಂಗ್ಸ್​ಗಳಲ್ಲಿ 82*, 62*, 12 ರನ್ ಬಾರಿಸಿದ್ದರು. ಈ ಮೂಲಕ 156 ರನ್ ಬಾರಿಸಿ ಟಿ20 ವಿಶ್ವಕಪ್​ನಲ್ಲಿ ಔಟಾಗುವ ಮುನ್ನ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.‌ ಇದೀಗ 48*, 64*, 63*, 5 ರನ್​ಗಳಿಸುವ ಮೂಲಕ ಬ್ರಿಯಾನ್ ಬೆನ್ನೆಟ್ ಒಟ್ಟು 180 ರನ್ ಕಲೆಹಾಕಿದ್ದಾರೆ. ಅಂದರೆ ವಿಶ್ವಕಪ್ ಇತಿಹಾಸದಲ್ಲಿ ಔಟ್ ಆಗುವ ಮುನ್ನ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬ್ರಿಯಾನ್ ಹೆಸರಿಗೆ ಸೇರ್ಪಡೆಯಾಗಿದೆ.

bangalore

6 ತಿಂಗಳಿನಿಂದ ಒಂದೇ ಮನೆಗೆ ಸ್ಕೆಚ್, 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಯುವಕ ಅರೆಸ್ಟ್

Published

on

ಬೆಂಗಳೂರು: ಮನೆಯವರು ಅಮೇರಿಕಾದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ  ಕಳ್ಳನೋರ್ವ ಸುಮಾರು 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿನಿಮೀಯ ಶೈಲಿಯಲ್ಲಿಕಳ್ಳತನಗೈದ ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ದಂಪತಿ ಅಮೇರಿಕಾದಲ್ಲಿ ಸೆಟಲ್ ಆಗಿರೋದನ್ನು ಖಚಿತಪಡಿಸಿಕೊಂಡು  ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ.

ಲಾಕರ್ ಓಪನ್ ಮಾಡಿ 1.8 ಕೆಜಿಯ ಚಿನ್ನಾಭರಣ, ಡೈಮಂಡ್ ಹಾಗೂ ನಗದು ಎಲ್ಲವನ್ನು ದೋಚಿಕೊಂಡು ಹೋಗಿದ್ದ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಚಿನ್ನಾಭರಣ ಸಿಕ್ಕ ಖುಷಿಗೆ ಯಾರಿಗೂ ಹೇಳದೆ ಕೇಳದೆ ನೇರವಾಗಿ ರಾಜಸ್ಥಾನಕ್ಕೆ ಚಿನ್ನಾಭರಣ ಕೊಂಡೊಯ್ದು, ಮನೆಯಲ್ಲಿ ಬಚ್ಚಿಟ್ಟಿದ್ದ.

ಮನೆಯ ಸಿಸಿಟಿವಿಯನ್ನ ಅಮೆರಿಕದಲ್ಲಿದ್ದ ದಂಪತಿ ಮೊಬೈಲ್ ನಲ್ಲಿ ಪರಿಶೀಲಿಸಿದ ಸಂದರ್ಭ ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಸಿಸಿಟಿವಿ ಆಧರಿಸಿ ಆರೋಪಿ ವೇಲಾರಾಮ್‌ ನನ್ನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

Continue Reading

LATEST NEWS

ಸೆಕೆ ತಾಳಲಾರದೆ ತಂಪಾಗಲು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

Published

on

ಹುಬ್ಬಳ್ಳಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಈಜಲು ಹೋಗಿ ನೀರಿನ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.


ಮೃತಪಟ್ಟ ವಿದ್ಯಾರ್ಥಿಗಳನ್ನು ಸಮರ್ಥ್ ಮತ್ತು ಹರೀಶ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗೋಪನಕೊಪ್ಪದ ಸರ್ಕಾರಿ ಪದವಪೂರ್ವ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ವಿದ್ಯಾರ್ಥಿಗಳು, ಪ್ರಥಮ ಪಿಯುಸಿ ಪರೀಕ್ಷೆ ಮುಗಿದಿರುವ ಕಾರಣ ಮನೆಯಲ್ಲಿದ್ದರು ಎನ್ನಲಾಗಿದೆ.

ಬೇಸಿಗೆಯ ಸೆಕೆ ತಾಳಲಾರದೆ ತಂಪಾಗಲು ಇಬ್ಬರು ಸ್ನೇಹಿತರು ಮನೆ ಸಮೀಪ ಇರುವ ನಿರ್ಮಾಣ ಹಂತದ RNS ಗಾಲ್ಫ್​​ ಮೈದಾನದಲ್ಲಿರೋ ಹೊಂಡಕ್ಕೆ ಈಜಲು ತೆರಳಿದ್ದರು. ಮಧ್ಯಾಹ್ನ ಮನೆಯಿಂದ ಹೋದವರು, ಸಂಜೆಯಾದರೂ ಮನೆಗೆ ಮರುಳಲಿಲ್ಲ. ಆ ವೇಳೆ ಇಬ್ಬರು ಹೊಂಡದಲ್ಲಿ ಬಿದ್ದಿರೋದನ್ನು ಗಮನಿಸಿದ ಅಲ್ಲಿನ ಕೆಲಸಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದರು ಎನ್ನಲಾಗಿದೆ. ಘಟನನಾ ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆಯಲಾಗಿದೆ.

Continue Reading

LATEST NEWS

ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

Published

on

ಶಿವಮೊಗ್ಗ: ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.


ಬುರ್ಖಾ ಧರಿಸಿ, ವ್ಯಾನಿಟಿ ಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನ ವರದಿಯಾಗುತ್ತಿದ್ದು, ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು ಎಗರಿಸಿ ಪರಾರಿಯಾಗುತ್ತಿದ್ದಳು.

ಕಳೆದ ಒಂದು ತಿಂಗಳ ಹಿಂದೆ ನಡೆದ ಮದುವೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಹಗಲಿರುಳು ಪರಿಶೀಲಿಸಿದಾಗ, ಆಕೆಯ ಕೈಯಲ್ಲಿದ್ದ ವಿಶಿಷ್ಟವಾದ ವ್ಯಾನಿಟಿ ಬ್ಯಾಗ್ ಕಳ್ಳಿಯನ್ನು ಪತ್ತೆಹಚ್ಚಲು ಪ್ರಮುಖ ಸುಳಿವು ನೀಡಿತು.

ಇದನ್ನೂ ಓದಿ: ಗ್ಯಾಸ್ ಟ್ರಬಲ್: ಚನ್ನಪಟ್ಟಣದ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಕಳವು!

ಇನ್ನು ಬಂಧಿತವಾಗಿರುವ ಕಳ್ಳಿ ರುಕ್ಸಾರ್ 18 ಲಕ್ಷ ರೂ ಮೌಲ್ಯದ ಒಟ್ಟು 120 ಗ್ರಾಂ ಚಿನ್ನಾಭರಣ ಕದ್ದಿದ್ದಾಳೆ. ಈಕೆಯ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣ ಪತ್ತೆಯಾಗಿವೆ. ವಿಚಾರಣೆ ವೇಳೆ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ.

ಈ ಹಿಂದೆ ಕೆಲವು ಮದುವೆ ಮನೆಗಳಲ್ಲಿ ಕಳ್ಳತನ ಮಾಡುವಾಗ ಈಕೆ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಳು. ಆದರೆ, ಮಹಿಳೆಯೆಂದು ಅನುಕಂಪ ತೋರಿಸಿದ ಜನರು ವಾರ್ನಿಂಗ್ ಮಾಡಿ ಬಿಟ್ಟು ಕಳಿಸಿದ್ದರು. ಇದನ್ನೇ ಲಾಭವನ್ನಾಗಿ ಮಾಡಿಕೊಂಡ ಈ ಕಿಲಾಡಿ ಕಳ್ಳಿ, ತನ್ನ ಕಳ್ಳತನದ ಕಾಯಕವನ್ನು ಮುಂದುವರಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು.

Continue Reading
Advertisement

Trending

Copyright © 2025 Namma Kudla News

You cannot copy content of this page