Connect with us

BELTHANGADY

ಬೆಳ್ತಂಗಡಿಯ 15 ಆದಿವಾಸಿ ಸಹಿತ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ

Published

on

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿದಂತೆ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

BELTHANGADY

ಧರ್ಮಸ್ಥಳ: ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಉದ್ಘಾಟಿಸಿದ ಡಿಕೆಶಿ

Published

on

ಉಜಿರೆ: ಧರ್ಮಸ್ಥಳದಲ್ಲಿ ನಡೆಯುವ ಬಹುಮುಖಿ ಸೇವೆ ನಿಜಕ್ಕೂ ಶ್ಲಾಘನೀಯವಾಗಿದ್ದು, ಕಲ್ಯಾಣ ಮಂಟಪ ನಿರ್ಮಾಣದಂತ ಕಾರ್ಯ ಮಹತ್ತರದಾಗಿದೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಭಾನುವಾರ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ನೂತನವಾಗಿ ನಿರ್ಮಾಣವಾದ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಉದ್ಘಾಟಿಸಿದ್ದಾರೆ. ಶ್ರೀ ಉಮಾ ಮಹೇಶ್ವರ, ಶಿವ ಪಾರ್ವತಿ ಮತ್ತು ಗೌರಿ ಶಂಕರ ಎಂಬ ಮೂರು ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ನಿರ್ಮಿಸಲಾಗಿದ್ದು, ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹಲವು ಗಣ್ಯರ ಸಮಕ್ಷಮದಲ್ಲಿ ಉದ್ಘಾಟನೆ ಮಾಡಲಾಗಿದೆ.

ಧರ್ಮಸ್ಥಳಕ್ಕೆ ರಾಜ್ಯದ ಮಾತ್ರವಲ್ಲದೆ ಹೊರ ರಾಜ್ಯದ ಜನರು ಕೂಡಾ ಮದುವೆ ಕಾರ್ಯಕ್ಕೆ ಬರುತ್ತಿದ್ದು, ಇಲ್ಲಿ ಮದುವೆಯಾದ್ರೆ ಜೀವನ ಉಜ್ವಲವಾಗುತ್ತದೆ ಎಂಬ ನಂಬಿಕೆ ಇರಿಸಿದ್ದಾರೆ. ಹೀಗಾಗಿ ಭಕ್ತರ ಆಸೆಯನ್ನು ನೆರವೇರಿಸುವ ಸಲುವಾಗಿ ಈ ಸುಸಜ್ಜಿತ ಕಲ್ಯಾಣ ಮಂಟಪದ ಸಮುಚ್ಚಯವನ್ನು ನಿರ್ಮಾಣ ಮಾಡಲಾಗಿದೆ.

ಈ ಸಂದರ್ಭ ಹರ್ಷೇಂದ್ರ ಹೆಗ್ಗಡೆ, ಸುರೇಂದ್ರ ಹೆಗ್ಗಡೆ, ಶಾಸಕ ಹರೀಶ್ ಪೂಂಜಾ, ರಕ್ಷಿತ್ ಶಿವರಾಂ ಮೊದಲಾದವರು ಉಪಸ್ಥಿತರಿದ್ದರು.

Continue Reading

BELTHANGADY

ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶದ ಬ್ಯಾನರ್‌ಗಳಿಗೆ ಹಾನಿ; ಕಿಡಿಗೇಡಿಗಳು ಪರಾರಿ

Published

on

ಬೆಳ್ತಂಗಡಿ: ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶ ಇಂದು (ಏ.20) ನಡೆಯಲಿದ್ದು, ಅದಕ್ಕೆ ಸಂಬಂಧಿಸಿ ಹಾಕಲಾಗಿದ್ದ ಹತ್ತಾರು ಬ್ಯಾನರ್‌ಗಳನ್ನು ಗುರುವಾಯನಕೆರೆಯ ಶಕ್ತಿನಗರದಲ್ಲಿ ಅಳವಡಿಸಲಾಗಿತ್ತು. ಆದರೆ ಯಾರೋ ಕಿಡಿಗೇಡಿಗಳು ಅವುಗಳನ್ನು ಹರಿದು ಹಾಕಿ ಪರಾರಿಯಾಗಿರುವ ಘಟನೆ ನಿನ್ನೆ (ಏ.19) ರಾತ್ರಿಯ ಸಂಭವಿಸಿದೆ.

ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಗ್ಸ್ ಗಳನ್ನು ಅಳವಡಿಸಲಾಗಿತ್ತು.

ಆದರೆ ಆ ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿ ಪರಾರಿಯಾಗಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

BELTHANGADY

ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್

Published

on

ಬೆಳ್ತಂಗಡಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಎ.20) ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.

ಬಳಿಕ ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿ ಹುಂಡಿಗೆ ಕಾಣಿಕೆ ಹಾಕಿದರು. ಇದೇ ಸಂದರ್ಭದಲ್ಲಿ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು.

ಮಾಜಿ ಎಂ.ಎಲ್.ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page