Connect with us

35 ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಕಡಲ ನಗರಿಯಲ್ಲಿ ಭರದ ಸಿದ್ದತೆ..

Published

on

35ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಕಡಲ ನಗರಿಯಲ್ಲಿ ಭರದ ಸಿದ್ಧತೆ

ಮಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುವ ರಾಜ್ಯ ಪತ್ರಕರ್ತರ ೩೫ನೇ ಸಮ್ಮೇಳನಕ್ಕೆ ಕಡಲ ನಗರಿ ಮಂಗಳೂರು ಸಂಪೂರ್ಣ ಸಿದ್ಧಗೊಂಡಿದೆ.

ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಾ.7 ಮತ್ತು 8 ರಂದು ನಡೆಯುವ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆಗಳು ಪೂರ್ತಿಗೊಂಡಿದೆ.

ಶುಕ್ರವಾರ ಸಂಜೆಯ ವೇಳೆಗೆ ರಾಜ್ಯದ ವಿವಿಧ ಕಡೆಗಳಿಂದ ಪತ್ರಿಕಾ ಪ್ರತಿನಿಧಿಗಳು ನಗರಕ್ಕೆ ಆಗಮಿಸಿದ್ದಾರೆ. ನಗರದ ವಿವಿಧ ಕಡೆಗಳಲ್ಲಿ ಹೊರ ರಾಜ್ಯ ಹಾಗೂ ಜಿಲ್ಲೆಯ ಪ್ರತಿನಿಧಿಗಳಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ.

ಪುರಭವನದ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಬೆಳಿಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎರಡು ದಿನಗಳ ಸಮ್ಮೇಳನವನ್ನು ಉದ್ಘಾಟಿಸುವರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು.

ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ಸಮ್ಮೇಳನದ ಆಶಯ ಭಾಷಣ ಮಾಡಲಿರುವರು. ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

ಉದ್ಘಾಟನಾ ಸಮಾರಂಭದ ಬಳಿಕ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ.ಎ. ವಿವೇಕ ಉಡುಪ ಅವರು ಪತ್ರಕರ್ತರ ಮಾನಸಿಕ ಒತ್ತಡ ಮತ್ತು ಆರೋಗ್ಯ ನಿರ್ವಹಣೆ ಬಗ್ಗೆ ಮಾತನಾಡಲಿರುವರು.

ಬಳಿಕ ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಧ್ಯಕ್ಷತೆಯಲ್ಲಿ ಪತ್ರಕರ್ತರ ವೃತ್ತಿ ಸವಾಲು ಮತ್ತು ಸಾಮಾಜಿಕ ಹೊಣೆಗಾರಿಕೆ ಬಗ್ಗೆ ವಿಚಾರಗೋಷ್ಠಿ ನಡೆಯಲಿದೆ.

ಸಂಜೆ ಪ್ರಜಾವಾಣಿಯ ಸಂಪಾದಕ ರವೀಂದ್ರ ಭಟ್ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಮಾಧ್ಯಮ ಎಂಬ ಗೋಷ್ಠಿ ನಡೆಯಲಿದೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಸುಳ್ಯ : ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ; ಕಾರಣ ನಿಗೂಢ

Published

on

ಸುಳ್ಯ : ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಕಾರಣಗಳು ನಿಖರವಾಗಿರುವುದಿಲ್ಲ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲೂ ಅಂತಹದ್ದೇ ಘಟನೆಯೊಂದು ನಡೆದಿದೆ.

ಸುಳ್ಯದ ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ, ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟ ಮಹಿಳೆಯನ್ನು ರೇವತಿ (51) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸುಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾಗೆ ಭರ್ಜರಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ!

Published

on

ಮಂಗಳೂರು/ಮುಂಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಣೆ ಮಾಡಿದೆ.


ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಈ ಶ್ರೇಷ್ಠ ಸಾಧನೆಯನ್ನು ಗೌರವಿಸುವ ಸಲುವಾಗಿ ಇದೀಗ 58 ಕೋಟಿ ರೂ. ನಗದು ಬಹುಮಾನ ಘೋಷಿಸಲಾಗಿದ್ದು, ಈ ಮೊತ್ತವನ್ನು ಆಟಗಾರರು, ತರಬೇತಿ ಮತ್ತು ಸಹಾಯಕ ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ: 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ; ಸಿಕ್ಕ ಬಹುಮಾನ ಮೊತ್ತ ಎಷ್ಟು?

“ಸತತ ಐಸಿಸಿ ಪ್ರಶಸ್ತಿಗಳನ್ನು ಗೆಲ್ಲುವುದು ವಿಶೇಷವಾಗಿದೆ. ಈ ಬಹುಮಾನವು ಜಾಗತಿಕ ವೇದಿಕೆಯಲ್ಲಿ ಟೀಮ್ ಇಂಡಿಯಾದ ಸಮರ್ಪಣೆ ಮತ್ತು ಶ್ರೇಷ್ಠತೆಯನ್ನು ಗುರುತ್ತಿಸುತ್ತದೆ” ಎಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

Continue Reading

LATEST NEWS

ಆ‌ರ್.ಜಿ ಕರ್‌ ಪ್ರಕರಣ : 7 ತಿಂಗಳ ಬಳಿಕ ಪೋಷಕರ ಕೈ ಸೇರಿತು ಮರಣ ಪ್ರಮಾಣ ಪತ್ರ

Published

on

ಮಂಗಳೂರು/ಕೋಲ್ಕತ್ತ : ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಆರ್‌.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅತ್ಯಾ*ಚಾರ ಹಾಗೂ ಕೊ*ಲೆ ಪ್ರಕರಣ ನಡೆದು 7 ತಿಂಗಳುಗಳು ಕಳೆದಿವೆ. ಇದೀಗ ಸಂತ್ರಸ್ತೆ ವೈದ್ಯ ವಿದ್ಯಾರ್ಥಿನಿಯ ಮ*ರಣ ಪ್ರಮಾಣಪತ್ರವನ್ನು ಪೋಷಕರಿಗೆ ನೀಡಲಾಗಿದೆ. ಪಶ್ಚಿಮ ಬಂಗಾಳ ಆರೋಗ್ಯ ಕಾರ್ಯದರ್ಶಿ ಎನ್‌.ಎಸ್.ನಿಗಮ್ ಅವರಿಂದ ಪೋಷಕರು ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆರ್.ಜಿ.ಕರ್ ಆಸ್ಪತ್ರೆಯ ವೈದ್ಯಕೀಯ ಸೂಪರಿಂಟೆಂಡೆಂಟ್, ಉಪಪ್ರಾಂಶುಪಾಲರ ಜೊತೆ ಸಂ*ತ್ರಸ್ತೆಯ ಮನೆಗೆ ಬುಧವಾರ(ಮಾ.19) ರಾತ್ರಿ ತೆರಳಿದ ಅವರು, ಮೂಲ ದಾಖಲೆಯನ್ನು ಪೋಷಕರಿಗೆ ಹಸ್ತಾಂತರಿಸಿದರು.

ಘಟನೆ ನಡೆದ ಆಗಸ್ಟ್ 9 ರಿಂದ ನಾವು ಪ್ರಮಾಣಪತ್ರ ನೀಡಬೇಕೆಂದು ಒತ್ತಾಯಿಸಿದ್ದೆವು. ಆರೋಗ್ಯ ಕಾರ್ಯದರ್ಶಿ ಇಂದು ಅಚಾನಕ್ಕಾಗಿ ಬಂದು ದಾಖಲೆ ಕೊಟ್ಟಿದ್ದಾರೆ.  ಮೂಲ ದಾಖಲೆ ಪಡೆಯಲು ನಾವು ಬಹಳ ಕಷ್ಟ ಪಟ್ಟಿದ್ದೆವು. ಜನವರಿಯಲ್ಲಿ ಇ-ಮೇಲ್ ಮಾಡಿದ್ದೆವು. ಆದರೂ ಇಲಾಖೆಯಿಂದ ಇಲಾಖೆಗೆ ಅಲೆದಾಡಿಸಿದ್ದರು. ಯಾರೂ ಸಹಕರಿಸಲಿಲ್ಲ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ. ಬಳಿಕ ಲಿಂಕ್ ಕಳಿಸಿದ್ದ, ನಾವು ದಾಖಲೆಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದೆವು ಎಂದಿದ್ದಾರೆ.

ಇದನ್ನೂ ಓದಿ : ಇಷ್ಟವಿದ್ದರೂ ಚಿಂತೆಯಿಲ್ಲ… ಕ್ಯಾನ್ಸರ್‌ಗೆ ಕಾರಣವಾಗುವ ಈ 6 ತಿಂಡಿಯಿಂದ ದೂರವಿರಿ…

ಆಗಸ್ಟ್ 9ರಂದು ಆರ್ ಜಿ ಕರ್ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾ*ಚಾರ ನಡೆಸಿ, ಕೊ*ಲೆಗೈಯಲಾಗಿತ್ತು. ಇಡೀ ದೇಶದಾದ್ಯಂತ ಪ್ರತಿಭಟನೆಯೂ ನಡೆದಿತ್ತು. ಈ ಪ್ರಕರಣ ಸಂಬಂಧ ಸಂಜಯ್ ರಾಯ್ ಎಂಬಾತನನ್ನು ಬಂಧಿಸಲಾಗಿದ್ದು, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page