Connect with us

LATEST NEWS

ತೌಕ್ತೆ ಆರ್ಭಟಕ್ಕೆ ಮುಳುಗಿದ್ದ ಮುಂಬೈ ಬಾರ್ಜ್;37 ಶವಗಳು ಪತ್ತೆ 38 ಮಂದಿ ನಾಪತ್ತೆ..!

Published

on

ಮುಂಬೈ:ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಂಬೈನಿಂದ 35 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಬಾರ್ಜ್ ಪಿ-305 ಮುಳುಗಿದ್ದ ಘಟನೆ ಸೋಮವಾರ ನಡೆದಿದೆ.ಈ ಘಟನೆಯಲ್ಲಿ ಈವರೆಗೆ 37 ಶವಗಳು ಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಮುಂದುವರಿದಿದೆ. ಬಾರ್ಜ್‌ನಲ್ಲಿದ್ದ 38 ಮಂದಿ ಇನ್ನೂ ನಾಪತ್ತೆಯಾಗಿದ್ದು, ಅವರು ಬದುಕುಳಿದಿರುವ ಭರವಸೆ ಕ್ಷೀಣಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂದು ಪತ್ತೆಯಾದ ಮೃತದೇಹ ಹಾಗೂ ಬದುಕುಳಿದವರನ್ನು ಐ.ಎನ್‌.ಎಸ್ ಕೋಲ್ಕತಾ ಹೊತ್ತು ಮುಂಬೈ ತಲುಪಿದ್ದು, ಮತ್ತೆ ಶೋಧ ಕಾರ್ಯಾಚರಣೆಯಲ್ಲಿ ಐಎನ್‌ಎಸ್ ಕೋಲ್ಕತಾ ತೊಡಗಿದೆ.

ಐ.ಎನ್‌.ಎಸ್ ಕೊಚ್ಚಿ ಕೂಡ ಮತ್ತೆ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದೆ. ಇನ್ನು ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಮುಳುಗಿದ್ದ ಬಾರ್ಜ್ ಪಿ-305 ನಲ್ಲಿ ಇದ್ದ 273 ಜನರ ಪೈಕಿ ಈವರೆಗೆ 188 ಮಂದಿಯನ್ನು ರಕ್ಷಿಸಲಾಗಿದ್ದು ಶೋಧ ಕಾರ್ಯಾಚರಣೆಯು ಇನ್ನೂ ಮುಂದುವರೆದಿದೆ.ನೌಕಾಪಡೆಯ ಹಡಗುಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದೆ. ನೌಕಾಪಡೆಯು ಇಂದು ಬೆಳಿಗ್ಗೆ ಹೊಸ ವೈಮಾನಿಕ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ.

ಉಳಿದಂತೆ ಐ.ಎನ್‌.ಎಸ್ ಟಗ್‌, ಐ.ಎನ್‌.ಎಸ್ ಬೆಟ್ವಾ, ಐ.ಎನ್‌.ಎಸ್ ಬಿಯಾಸ್, ಪಿ 8 ಐ ವಿಮಾನ ಮತ್ತು ಹೆಲಿಕಾಪ್ಟರ್‌ಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಈ ನಡುವೆ ತೌಕ್ತೆ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದ್ದರೂ ಈ ಪ್ರದೇಶದಲ್ಲಿ ಬಾರ್ಜ್‌ನ್ನು ಏಕೆ ಉಳಿಸಲಾಗಿದೆ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ. ಪೊಲೀಸರು ಬುಧವಾರ ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.

ಸೇನೆಯ ಕಮಾಂಡರ್ ಆಪರೇಷನ್ಸ್ ನ ನೇವಲ್ ಕಮಾಂಡೆಂಟ್ ಎಂ.ಕೆ. ಝಾ ಅವರು ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ಹಾಗೆಯೇ ಈ ಎಲ್ಲಾ ಸಾವುಗಳು ಬಾರ್ಜ್ ಪಿ -305 ಮುಳುಗಡೆಯಿಂದಲೇ ಸಂಭವಿಸಿದೆಯೇ ಎಂದು ದೃಢಪಡಿಸಲಾಗುವುದು ಎಂಬುದಾಗಿ ತಿಳಿಸಿದ್ದಾರೆ.

LATEST NEWS

ಸಿದ್ಧರಾಮಯ್ಯಗೆ ಬಿಗ್ ರಿಲೀಫ್; ಸಿಬಿಐ ತನಿಖೆಯಿಂದ ಪಾರಾದ ಸಿಎಂ

Published

on

ಮಂಗಳೂರು/ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮುಡಾ ಪ್ರಕರಣದ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಈ ಮೂಲಕ ಸಾಮಾಜಿಕ ಹೋರಾಟಗಾರ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಹಿನ್ನೆಡೆ ಅನುಭವಿಸಿದ್ದಾರೆ. ಅವರ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಸಿಎಂ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿ ಇಂದು (ಫೆಬ್ರ. 07) ತೀರ್ಪು ನೀಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಮೇಲೆ ಹಲವು ಆರೋಪ ಕೇಳಿ ಬಂದಿತ್ತು. ಸ್ನೇಹಿಮಯಿ ಕೃಷ್ಣ ಅವರು ಸಿಎಂ ವಿರುದ್ಧ ದೂರು ನೀಡಿದ್ದರು. ಸಿಎಂ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದರು. ಇದರ ವಿಚಾರಣೆ ನಡೆಸಿ, ಮೈಸೂರು ಲೋಕಾಯುಕ್ತ ಪೊಲೀಸ್‌ ತನಿಖೆಗೆ ಸಮ್ಮತಿಸಿತ್ತು.

ಲೋಕಾಯುಕ್ತ ತನಿಖೆ ಬೇಡ. ಸಿದ್ದರಾಮಯ್ಯ ಅವರ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾಯಪೀಠವು ಈ ಅರ್ಜಿ ವಜಾಗೊಳಿಸಿದೆ. ಮುಡಾ ಪ್ರಕರಣವನ್ನು ಪೊಲೀಸರೇ ತನಿಖೆ ಮುಂದುವರಿಸಲಿದ್ದಾರೆ.

ಇದನ್ನೂ ಓದಿ : ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪಗೆ ತಾತ್ಕಲಿಕ ರಿಲೀಫ್

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, ಕಾನೂನು ಹೋರಾಟ ಮುಂದುವರಿಸುತ್ತೇವೆ. ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇನೆ. ಹೈಕೋರ್ಟ್ ಆದೇಶ ಪ್ರತಿ ಸಿಕ್ಕಿದ ಕೂಡಲೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವೆ. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದಿದ್ದಾರೆ.

Continue Reading

LATEST NEWS

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

Published

on

ಮಂಗಳೂರು/ಧಾರವಾಡ : ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯ ಆದೇಶ ಹೊರ ಬಿದ್ದಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಪೀಠವು ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಬಿಎಸ್ ವೈ ಬಂಧನ ಭೀತಿಯಿಂದ ಪಾರಾಗಿದ್ದಾರೆ.

ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್, ಕೇಸ್ ರದ್ದತಿಗೆ ನಿರಾಕರಿಸಿದೆ. ಹೀಗಾಗಿ ಬಿಎಸ್ ವೈ ಅವರು ತಾತ್ಕಾಲಿಕವಾಗಿ ಬಚವಾಗಿದ್ದಾರೆ.

ಇದನ್ನೂ ಓದಿ: ಸಿಎಂ, ಮಾಜಿ ಸಿಎಂಗೆ ಇಂದು ಬಿಗ್ ಡೇ !

ಏನಿದು ಪ್ರಕರಣ?

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

Continue Reading

LATEST NEWS

ಚಾರ್ಮಾಡಿ ಘಾಟ್‌ನಲ್ಲಿ ಲಾರಿಯನ್ನು ಅಡ್ಡಗಟ್ಟಿ ನಗದು ದೋಚಿದ ದರೋಡೆಕೋರರು

Published

on

ಕೊಟ್ಟಿಗೆಹಾರ: ಚಲಿಸುತ್ತಿದ್ದ ಮೀನಿದ ಲಾರಿಯನ್ನು ನಡುರಾತ್ರಿ ಮುಸುಕುಧಾರಿಗಳು ಅಡ್ಡಗಟ್ಟಿ 1 ಲಕ್ಷದ 61 ಸಾವಿರ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಚಾರ್ಮಾಡಿ ಘಾಟ್‌ನಲ್ಲಿ ನಡೆದಿದೆ.

ಮೀನು ಸಾಗಾಟದ ಲಾರಿ ಕೊಟ್ಟಿಗೆಹಾರ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿತ್ತು. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಮುಸುಕುಧಾರಿಗಳು ಲಾರಿಯನ್ನು ಅಣ್ಣಪ್ಪ ದೇವಸ್ಥಾನದಿಂದ ಎರಡು ಕಿ.ಮೀ ಹಿಂದೆಯೇ ಅಡ್ಡಗಟ್ಟಿ ಲಾರಿಯ ಗಾಜನ್ನು ಪುಡಿ ಮಾಡಿದ್ದಾರೆ. ನಂತರ ಲಾರಿಯಲ್ಲಿದ್ದ 1 ಲಕ್ಷದ 61 ಸಾವಿರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ.

ಬಳಿಕ ಲಾರಿ ಡ್ರೈವರ್ ಈ ಘಟನೆಯ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಬಣಕಲ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page