Connect with us

ಅಮೆರಿಕಾದಲ್ಲಿ ಕೋವಿಡ್-19 ರುದ್ರ ನರ್ತನ: 42, 217 ಮಂದಿ ಕೊರೊನಾಗೆ ಬಲಿ.!

Published

on

ಅಮೆರಿಕಾದಲ್ಲಿ ಕೋವಿಡ್-19 ರುದ್ರ ನರ್ತನ: 42, 217 ಮಂದಿ ಕೊರೊನಾಗೆ ಬಲಿ.!

ನವದೆಹಲಿ: ಕೊರೊನಾ ವೈರಸ್ ನ ದಾಳಿಗೆ ಅಮೆರಿಕಾ ತತ್ತರಿಸಿದೆ. ಅಲ್ಲಿ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, 42, 217 ಜನ ಬಲಿಯಾಗಿದ್ದಾರೆಂದು ಜಾನ್ಸ್ ಹಾಫ್ ಕಿನ್ಸ್ ವಿಶ್ವವಿದ್ಯಾನಿಲಯ ವರದಿ ತಿಳಿಸಿದೆ.

ಜಗತ್ತಿನಾದ್ಯಂತ ಉಳಿದ ರಾಷ್ಟ್ರಗಳಿಗೆ ಹೋಲಿಸಿದರೆ ಅಮೆರಿಕಾದಲ್ಲೇ ಕೋವಿಡ್ 19 ರುದ್ರ ನರ್ತನ ಮೆರೆದಿದ್ದು, ಸ್ಪೇನ್ ಇಟಲಿಗಿಂತಲೂ ದುಪಟ್ಟು ಪ್ರಮಾಣದಲ್ಲಿ ಜನ ಕೊರೊನಾಕ್ಕೆ ಬಲಿಯಾಗಿದ್ದಾರೆ.

ಈ ಮೂಲಕ ಅತೀ ಹೆಚ್ಚು ಜನರು ಮೃತಪಟ್ಟ ರಾಷ್ಟ್ರದ ಹಣೆಪಟ್ಟಿಗೆ ಅಮೇರಿಕಾ ಪಾತ್ರವಾಗಿದೆ. ಇನ್ನು ವಿಶ್ವದಲ್ಲಿ 24,79,498 ಜನ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ.

ಇದುವರೆಗೆ 1,70,322 ಜನ ಬಲಿಯಾಗಿದ್ದಾರೆ. 6,12,681 ಜನ ಗುಣಮುಖರಾಗಿದ್ದಾರೆ. ಈ ವೈರಸ್ ಬಹುಕಾಲದವರೆಗೂ ಕಾಡುವ ಅಪಾಯವಿದೆ .

ಈ ಹಿನ್ನೆಲೆಯಲ್ಲಿ ಹಲವು ದೇಶಗಳು ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು. ಲಾಕ್ ಡೌನ್ ಅನ್ನು ವೃಥಾ ಸಡಿಲಿಸಬಾರದು ವಿಶ್ವ ಆರೋಗ್ಯ ಸಂಸ್ಥೆ ಜಗತ್ತಿನ ರಾಷ್ಟ್ರಗಳಿಗೆ ಕರೆ ನೀಡಿದೆ.

ಇನ್ನು ಭಾರತದಲ್ಲೂ ಕೋವಿಡ್ -19 ಭೀತಿ ಹೆಚ್ಚಾಗುತ್ತಲೇ ಇದ್ದು, ಈವರೆಗೂ 21,403 ಜನರಿಗೆ ಸೋಂಕು ತಗುಲಿದೆ.

ಮೃತರ ಸಂಖ್ಯೆ 681ಕ್ಕೆ ಏರಿಕೆ ಆಗಿದೆ. ಮಹಾರಾಷ್ಟ್ರ ದೇಶದಲ್ಲೇ ನಂಬರ್ ವನ್ ಸ್ಥಾನದಲ್ಲಿದ್ದು, 5649 ಜನರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ.

269 ಜನ ಮೃತಪಟ್ಟಿದ್ದಾರೆ. ಗುಜರಾತ್ 2ನೇ ಸ್ಥಾನದಲ್ಲಿದೆ. 2407 ಜನರು ಕೊರೊನಾ ಪೀಡಿತರಾಗಿದ್ದು, 103 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page