Connect with us

DAKSHINA KANNADA

4ನೇ ವರ್ಷದ ನರಿಂಗಾನ ಲವ-ಕುಶ ಜೋಡುಕರೆ ಕಂಬಳ; ಫಲಿತಾಂಶ ಹೀಗಿದೆ

Published

on

ಉಳ್ಳಾಲ: ತಾಲೂಕಿನ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಡೆದ 4 ನೇ ವರ್ಷದ ಲವಕುಶ ಜೋಡುಕರೆ ಕಂಬಳದಲ್ಲಿ ಕನೆಹಲಗೆ ಮತ್ತು ಅಡ್ಡ ಹಲಗೆ ವಿಭಾಗಗಳಲ್ಲಿ ತಲಾ 10 ಜೊತೆ ಕೋಣಗಳು,ಹಗ್ಗ ಹಿರಿಯ 26 ಜೊತೆ, ನೇಗಿಲು ಹಿರಿಯ 27 ಜೊತೆ, ಹಗ್ಗ ಕಿರಿಯ 28 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 94 ಜೊತೆ ಕೋಣಗಳು ಸೇರಿದಂತೆ ಒಟ್ಟು 195 ಜೊತೆ ಕೋಣಗಳು ಭಾಗವಹಿಸಿದ್ದವು.

ಫಲಿತಾಂಶ:

ಕನೆ ಹಲಗೆ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಕುಂಡೋಳಿ ಶ್ರೀ ದುರ್ಗಾ ನಿಲಯ ಸುಧೀರ್ ಪದ್ಮನಾಭ ಶೆಟ್ಟಿ
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

ಅಡ್ಡ ಹಲಗೆ
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ (12.45)
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು

ದ್ವಿತೀಯ: ನೇರಳಕಟ್ಟೆ ಕೊಡ್ಲಾಡಿ ಅಶ್ವಿನ್ ರವಿರಾಜ್ ಶೆಟ್ಟಿ (13.24)
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

ನೇಗಿಲು ಕಿರಿಯ
ಪ್ರಥಮ: ಅಡಕಲಕಟ್ಟೆ ಚಂದ್ರಹಾಸ ಕುಲಾಲ್ “ಎ” (11.37)
ಓಡಿಸಿದವರು: ಪಡು ಸಾಂತೂರು ಪೃಥ್ವಿರಾಜ್ ಪೂಜಾರಿ

ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ (12.28)
ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ನೇಗಿಲು ಹಿರಿಯ
ಪ್ರಥಮ: ಶ್ರೀ ಮಹಮ್ಮಾಯಿ ಕಛೇರಿ ಪಂಜಿಕುಡೆಲು ಗುತ್ತು ನಾರಾಯಣ ಪೂಜಾರಿ (11.76)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.88)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ಹಗ್ಗ ಕಿರಿಯ
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (12.10)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ

ದ್ವಿತೀಯ: ಆಂಗ್ಲ ಮೊಗರು ಕೊಟ್ರಗುತ್ತು ಅಘನ್ಯ ನಿಖಿಲ್ ಕೊಟ್ಟಾರಿ “ಎ” (12.32)
ಓಡಿಸಿದವರು: ಮಂದಾರ್ತಿ ಶಿರೂರು ಭರತ್ ನಾಯ್ಕ

ಹಗ್ಗ ಹಿರಿಯ
ಪ್ರಥಮ: ಮಿಜಾರ್‌ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಎ” (11.99)
ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ನೂಜಿಪ್ಪಾಡಿ ಡಾ.ಪ್ರವೀಣ್ ಹೊಳ್ಳ (12.05)
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

DAKSHINA KANNADA

ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

Published

on

ಬೆಳ್ತಂಗಡಿ : ಅಜ್ಜಿಯ ತಿಥಿಗೆ ಆಮೆಯನ್ನು ಸಾರು ಮಾಡಿ ಬಡಿಸಲು ನದಿಯಲ್ಲಿ ಅ*ಕ್ರಮವಾಗಿ ಆಮೆಗಳನ್ನು ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದ ನಾಲ್ವರನ್ನು  ಆಮೆಗಳ ಸಹಿತ ಬೆಳ್ತಂಗಡಿ ಠಾಣೆಯ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರ್ಡಾಲ ನೀರ್ಚಾಲಿನ ನಿವಾಸಿ ಮಣಿಕಂಠ(42), ಮಂಗಳೂರು ಮೂಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ(54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಘ್ನೇಶ್(32), ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್(35)  ಬಂಧಿತರು.

ದಾ*ಳಿ ವೇಳೆ ಆರೋಪಿಗಳಿಂದ ನಾಲ್ಕು ಸುಟ್ಟ ಆಮೆಯನ್ನು ಜಪ್ತಿ ಮಾಡಿ ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ : ಕೋಟ : ಗೂಗಲ್ ಮ್ಯಾಪ್ ಎಡವಟ್ಟು; ಕೊಲ್ಲೂರಿಗೆ ಹೊರಟವರು ತಲುಪಿದ್ದೆಲ್ಲಿಗೆ ಗೊತ್ತಾ?

ಫೆ.13 ರಂದು ಆರೋಪಿಗಳು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ, ದೇವಮ್ಮ ಎಂಬವರ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಆಗಮಿಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

Continue Reading

DAKSHINA KANNADA

ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ಸಾ*ವು

Published

on

ಪುತ್ತೂರು : ಹೃದಯಾ*ಘಾತಕ್ಕೆ ವ್ಯಕ್ತಿ ಬ*ಲಿಯಾಗಿರುವ ಘಟನೆ ಪುತ್ತೂರಿನ ಶಾಂತಿಗೋಡಿನಲ್ಲಿ ನಡೆದಿದೆ. 48 ವರ್ಷದ ರವಿ ಕುಮಾರ್ ಕಲ್ಕಾರ್ ಮೃ*ತ ವ್ಯಕ್ತಿ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ  ರವಿ  ಕುಸಿದು ಬಿ*ದ್ದಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯು*ಸಿರೆಳೆದಿದ್ದಾರೆಂದು ತಿಳಿದು ಬಂದಿದೆ.

ಇದನ್ನೂ ಓದಿ : ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ರವಿ ಕಲ್ಕಾರ್  ವಿದೇಶದಲ್ಲಿ ಹಲವಾರು ವರ್ಷ ದುಡಿದು ಬಳಿಕ ಶಾಂತಿಗೋಡು ಕಲ್ಕಾರ್ ಎಂಬಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದರು. ಪುತ್ತೂರು ತಾಲೂಕು ಬಿಲ್ಲವ ಸಂಘದ ವಿದ್ಯಾನಿಧಿ ಸಂಚಾಲಕರಾಗಿ, ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಪುತ್ತೂರು ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ, ಕೂಡುರಸ್ತೆ ಮುಂಡೋಡಿ ನವಶಕ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಹೀಗೆ ಹಲವು ಸಂಘಟನೆಗಳಲ್ಲಿ ರವಿ ಕಲ್ಕಾರ್  ಗುರುತಿಸಿಕೊಂಡಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page