Connect with us

DAKSHINA KANNADA

ಅಕ್ರಮ ಮರಳುಗಾರಿಕೆ ; ಡೋಜರ್‌ ಸಹಿತ 50 ಮೆಟ್ರಿಕ್ ಟನ್ ಮರಳು ವಶ

Published

on

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 150 ಮೆಟ್ರಿಕ್ ಟನ್ ಮರಳು, ಡೋಜರ್‌ಗಳನ್ನು ವಶಪಡಿಸಿಕೊಂಡಿರುವ ಘಟನೆ ಬಜ್ಪೆ ಪೊಲಿಸ್ ಠಾಣಾ ವ್ಯಾಪ್ತಿಯ ಮರವೂರು ರೈಲ್ವೆ ಸೇತುವೆಯ ಬಳಿ ನಡೆದಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮದ ಪ್ರಕಾರ ಸೇತುವೆಯ ಎರಡೂ ಭಾಗದ ತಲಾ 100 ಮೀ. ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸುವಂತಿಲ್ಲ. ಆದರೆ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಎಂ.ಸಿ. ಕೃಷ್ಣವೇಣಿ ಮಾರ್ಗದರ್ಶನದಂತೆ ಗಣಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗವು ದಾಳಿ ನಡೆಸಿದೆ.

ತಮಿಳುನಾಡು-ಕೇರಳ-ಮಂಗಳೂರಿನಿಂದ ಮರವೂರು ರೈಲ್ವೆ ಸೇತುವೆ ಮೂಲಕ ಕೊಂಕಣ ರೈಲು ಮಾರ್ಗದಲ್ಲಿ ಪ್ರತಿನಿತ್ಯ 50 ರೈಲುಗಳಲ್ಲಿ 40 ಸಾವಿರದಿಂದ 50 ಸಾವಿರ ಪ್ರಯಾಣಿಕರು ಪ್ರಯಾಣಿಸು ತ್ತಿದ್ದು, ಈ ರೈಲ್ವೆ ಟ್ರ್ಯಾಕ್‌ನ ಕೆಳಭಾಗದಲ್ಲೇ ನಿಯಮ ಮೀರಿ ಅಕ್ರಮ ಮರಳುಗಾರಿಕೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಘಟನೆ ಕುರಿತು ಪ್ರಕರಣ ದಾಖಲಾಗಿದೆ. 

DAKSHINA KANNADA

ಸುರತ್ಕಲ್‌: ದೇವರಿಗೆ ಕೈಮುಗಿವ ನೆಪದಲ್ಲಿ ಭಕ್ತರೊಬ್ಬರ ಬ್ಯಾಗಿಗೆ ಕನ್ನ ಹಾಕಿದ ಕಳ್ಳ

Published

on

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಬಳಿ ಇರುವ ದೇವಸ್ಥಾನದಲ್ಲಿ ಶನಿವಾರ ಸಂಜೆ ಅಪರಿಚಿತನೊಬ್ಬ ಭಕ್ತನ ನೋಗಿನಲ್ಲಿ ಆಗಮಿಸಿ ಕಳವು ಕ್ಯತ್ಯ ಎಸಗಿದ್ದಾನೆ.

ದೇವಸ್ಥಾನ ಒಳಗೆ ಬಂದಿದ್ದ ಈತ ದೇವಸ್ಥಾನಕ್ಕೆ ಬಂದು ಅಲ್ಲಿ ಭಕ್ತರೊಬ್ಬರು ಇಟ್ಟಿದ್ದ ಬ್ಯಾಗಿನಿಂದ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾನೆ.

ದೇವರಿಗೆ ಕೈಮುಗಿವ ನೆಪದಲ್ಲಿ ಬ್ಯಾಗಿನ ಪಕ್ಕದಲ್ಲೇ ನಿಂತು ಹಣವನ್ನು ಕಳವು ಮಾಡಿದ್ದಾನೆ. ದೇವಸ್ಥಾನದ ಒಳಗಡೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಆತನ ಕಳವು ಕೃತ್ಯದ ದೃಶ್ಯಾವಳಿಗಳು ದಾಖಲಾಗಿವೆ.

ಇದನ್ನೂ ಓದಿ: ಸುರತ್ಕಲ್: ಬಾಲಕನಿಗೆ ಲೈಂ*ಗಿಕ ಕಿರುಕುಳ; ಆರೋಪಿ ಬಂಧನ

ಇದೀಗ ಹಣವನ್ನು ಕಳೆದುಕೊಂಡಿರುವರು ಸುರತ್ಕಲ್‌ ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಸಿಸಿಟಿವಿ ಫೂಟೇಜ್ ಆಧಾರದಲ್ಲಿ ಆರೋಪಿಯನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ.

 

Continue Reading

DAKSHINA KANNADA

ಶಾರದಾ ವಿದ್ಯಾಲಯದ ‘ಹೊನಲು ಬೆಳಕಿನ ಕ್ರೀಡೋತ್ಸವ’ಕ್ಕೆ ಅದ್ದೂರಿ ತೆರೆ

Published

on

ಮಂಗಳೂರು: ಶಾರದಾ ವಿದ್ಯಾಸಂಸ್ಥೆಯಲ್ಲಿ ಅಚ್ಚುಕಟ್ಟು ವ್ಯವಸ್ಥೆಯೊಂದಿಗೆ ಧರ್ಮ ಪಾಲನೆ- ಸಂಸ್ಕೃತಿ ರಕ್ಷಣೆ, ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಲ್ಲಿ ಜಾಗೃತಿ, ದೇಶಾಭಿಮಾನ ಮೂಡಿಸುವ ಕೆಲಸ ನಡೆಯುತ್ತಿರುವುದು ಅಭಿನಂದನಾರ್ಹ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ನಗರದ ಕೊಡಿಯಾಲ್‌ಬೈಲ್‌ ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ಭಾನುವಾರ ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಒಲಂಪಿಕ್‌ ಕ್ರೀಡಾಕೂಟವನ್ನು ಭಾರತದಲ್ಲೇ ನಡೆಸುವ ಸುಯೋಗ ಒದಗಿಬರಲಿ’ ಎಂದ ಯದುವೀರ್‌ ಒಡೆಯರ್‌

ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದ್ದರೂ ಇಂದಿಗೂ ಅನೇಕ ಕಡೆಗಳಲ್ಲಿ ಶಿಕ್ಷಣ ಕ್ಷೇತ್ರ ಮೂಲಸೌಕರ್ಯ ಕೊರತೆಯನ್ನು ಎದುರಿಸುತ್ತಿದೆ. ಕೇಂದ್ರ ಸರ್ಕಾರ ಕ್ರೀಡೆಗೆ ಸರ್ವ ಪ್ರೋತ್ಸಾಹ ನೀಡುತ್ತಿದೆ. ಒಲಿಂಪಿಕ್ಸ್‌ನಲ್ಲಿ ಇನ್ನಷ್ಟು ಪದಕಗಳನ್ನು ಗೆಲ್ಲುವುದರೊಂದಿಗೆ ವಿಶ್ವ ಮಟ್ಟದಲ್ಲಿ ಭಾರತ ಇನ್ನಷ್ಟು ಮುಂದುವರಿಯಬೇಕಿದೆ. ನಮ್ಮ ದೇಶದಲ್ಲಿ ಕಾಮನ್‌ವೆಲ್ತ್‌ ಕ್ರೀಡೆ ಆಯೋಜನೆಗೆ ಈಗಾಗಲೇ ಸಿದ್ಧತೆ ನಡೆಯುತ್ತಿದ್ದು, ಮುಂದೆ ಒಲಂಪಿಕ್‌ ಕ್ರೀಡಾಕೂಟವನ್ನು ಭಾರತದಲ್ಲೇ ನಡೆಸುವ ಸುಯೋಗ ಒದಗಿಬರಲಿ ಎಂದು ಆಶಿಸಿದರು.

ಪ್ರಸ್ತುತ ಆರೋಗ್ಯ ಸಮಸ್ಯೆಗಳಿಗೆ ವ್ಯಾಯಾಮ ರಹಿತ ಜೀವನ ಶೈಲಿಯೇ ಮುಖ್ಯ ಕಾರಣ. ಎಳೆ ವಯಸ್ಸಿನಲ್ಲೇ ಕ್ರೀಡೆಯತ್ತ ಮಕ್ಕಳ ಮನಸ್ಸನ್ನು ಸೆಳೆದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೊಡುಗೆ ನೀಡಬೇಕು ಎಂದು ಯದುವೀರ್ ಕರೆ ನೀಡಿದರು. ರಾಜ್ಯದ ಪರಂಪರೆಗೆ ಮೈಸೂರು ಹೃದಯವಾದರೆ, ಕರಾವಳಿ ಬೆನ್ನೆಲುಬು ಇದ್ದಂತೆ. ಕರಾವಳಿಯಲ್ಲಿ ರಾಜ್ಯದ ಪರಂಪರೆಯ ರಕ್ಷಣೆಯ ಕಾರ್ಯ ನಡೆಯುತ್ತಿದೆ. ನಮ್ಮ ಶಕ್ತಿ ಮೀರಿ ನಾವು ಕೆಲಸ ಮಾಡಿದರೆ ಅದು ರಾಷ್ಟ್ರಕ್ಕೆ ದೊಡ್ಡ ಕೊಡುಗೆಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್‌ ಮಾತನಾಡಿ, ಈ ಕ್ರೀಡೋತ್ಸವದಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭೆ ಪ್ರದರ್ಶಿಸುತ್ತಿದ್ದಾರೆ. ಶಾರದಾ ವಿದ್ಯಾಲಯ ಆರಂಭವಾಗಿ 33 ವರ್ಷಗಳು ಸಂದಿದ್ದು, ಮೆಕಾಲೆ ಶಿಕ್ಷಣ ಪದ್ಧತಿಗೆ ಪರ್ಯಾಯವಾಗಿ ಭಾರತೀಯ ಜೀವನ ಮೌಲ್ಯ, ಸಂಸ್ಕಾರಗಳನ್ನು, ಭಾರತೀಯ ಚಿಂತನೆಗಳಿಗೆ ಅವಕಾಶ ಕೊಡುವ ಕೆಲಸ ಮಾಡಲಾಗುತ್ತಿದೆ. ಶಾರದಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 8 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭ ಶಾರದಾ ಸಮೂಹ ಸಂಸ್ಥೆ ವತಿಯಿಂದ ಯದುವೀರ್‌ ಅವರಿಗೆ ಆರತಿ ಬೆಳಗಿ ಗೌರವಾರ್ಪಣೆ ಸಲ್ಲಿಸಲಾಯಿತು. ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ರಚಿಸಿದ ಕಲಾಕೃತಿಯನ್ನು ಕೊಡುಗೆಯಾಗಿ ನೀಡಲಾಯಿತು.

ಶಾಸಕರಾದ ವೇದವ್ಯಾಸ ಕಾಮತ್‌, ಹರೀಶ್‌ ಪೂಂಜ, ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ ಪೂಜಾರಿ, ಉದ್ಯಮಿ ನಾಗಾರ್ಜುನ್‌, ಶಾರದಾ ವಿದ್ಯಾಸಂಸ್ಥೆಗಳ ನಿರ್ದೇಶಕ ಹಾಗೂ ಟ್ರಸ್ಟಿ ಸಮೀರ್‌ ಪುರಾಣಿಕ್‌, ಕರ್ಣಾಟಕ ಬ್ಯಾಂಕ್‌ ಆಡಳಿತ ನಿರ್ದೇಶಕ ಹಾಗೂ ಸಿಇಒ ರಾಘವೇಂದ್ರ ಭಟ್‌, ಸುನಂದಾ ಪುರಾಣಿಕ್, ಕರ್ನಾಟಕ ಹೈಕೋರ್ಟ್‌ನ ವಕೀಲ ಅರುಣ್ ಶ್ಯಾಮ್, ಪ್ರಮುಖರಾದ ಪ್ರದೀಪ್ ಕುಮಾರ ಕಲ್ಕೂರ, ರಘುನಾಥ ಸೋಮಯಾಜಿ, ಸುಧಾಕರ ರಾವ್ ಪೇಜಾವರ, ಪ್ರೊ. ಲೀಲಾ ಉಪಾಧ್ಯಾಯ, ಸೀತಾರಾಮ ಭಟ್, ಪ್ರಕಾಶ್ ಇಳಂತಿಲ, ಪ್ರಾಂಶುಪಾಲರಾದ ಪ್ರಕಾಶ್ ನಾಯಕ್, ದಯಾನಂದ ಕಟೀಲ್, ಸತ್ಯ ನಾರಾಯಣ ಭಟ್ ವಿದ್ಯಾ ಭಾರತಿಯ ಹಿರಿಯರಾದ ವಸಂತ ಮಾಧವ ಮತ್ತಿತರರು ಉಪಸ್ಥಿತರಿದ್ದರು. ರಮೇಶ್ ಆಚಾರ್ಯ ನೇತೃತ್ವದ ತಂಡ ಕಾರ್ಯಕ್ರಮ ನಿರೂಪಿಸಿತು.

ಮೆರವಣಿಗೆ ಮೂಲಕ ಯದುವೀರ್‌ ಒಡೆಯರ್‌ಗೆ ಭವ್ಯ ಸ್ವಾಗತ
ಕಾರ್ಯಕ್ರಮಕ್ಕೂ ಮೊದಲು ನವಭಾರತ ವೃತ್ತ ಬಳಿಯಿಂದ ಆಕರ್ಷಕ ಮೆರವಣಿಗೆ ಮೂಲಕ ಯದುವೀರ್‌ ಅವರನ್ನು ಕರೆತರಲಾಯಿತು.
ನಮ್ಮ ಪೂರ್ವಜರು ಧರ್ಮ ಪಾಲನೆ ಮಾಡುತ್ತಿದ್ದುದರಿಂದ ಉತ್ತಮ ಕೆಲಸ ಕಾರ್ಯಗಳನ್ನು ಅವರು ಮಾಡುವಂತಾಯಿತು. ರಾಜಪ್ರಭುತ್ವ ಈಗ ಇಲ್ಲದಿದ್ದರೂ ಅವರೆಲ್ಲರ ಹೆಸರು ಶಾಶ್ವತವಾಗಿರಲು ಧರ್ಮ ಪಾಲನೆಯೇ ಮುಖ್ಯ ಕಾರಣ. ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಧರ್ಮದ ತತ್ವಗಳನ್ನು ಅಳವಡಿಸುವ ಕಾರ್ಯ ಆಗಬೇಕಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಧರ್ಮದ ತತ್ವಗಳನ್ನು ಅಳವಡಿಸುವ ಸವಾಲು ದೊಡ್ಡದಿದ್ದರೂ, ಆ ಕಾರ್ಯ ಆಗಲೇಬೇಕಾದ ಅನಿವಾರ್ಯತೆಯಿದೆ ಎಂದು ಯದುವೀರ್ ಪ್ರತಿಪಾದಿಸಿದರು.

ಕ್ರೀಡೋತ್ಸವದಲ್ಲಿ ಕಮಾಲ್ ಮಾಡಿದ ವಿದ್ಯಾರ್ಥಿ- ವಿದ್ಯಾರ್ಥಿನಿಯರು
ಶಾರದಾ ವಿದ್ಯಾಲಯದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪ್ರದರ್ಶಿಸಿದ ಮಲ್ಲಕಂಬ ಕಸರತ್ತು, ಸಮೂಹ ನೃತ್ಯ, ಸಮೂಹ ಗಾಯನ, ಸ್ಕೌಟ್ಸ್‌ ಗೈಡ್ಸ್‌, ತಾಲೀಮು ಪ್ರದರ್ಶನ ಇತ್ಯಾದಿ ನೋಡುಗರ ಮನಸೂರೆಗೊಳಿಸಿತು. ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ದೈಹಿಕ ಕಸರತ್ತುಗಳು ವೀಕ್ಷಕರನ್ನು ರೋಮಾಂಚನಗೊಳಿಸಿತು. ಬೆಂಕಿಯೊಂದಿಗಿನ ಸರಸದ ಆಟಗಳು, ಸಾಹಸ ಪ್ರದರ್ಶನಗಳು ವಿದ್ಯಾರ್ಥಿಗಳ ಕಲಾ ನೈಪುಣ್ಯತೆಗೆ ಸಾಕ್ಷಿಯಾದವು. ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಇಲ್ಲದಂತೆ ನಗರದ ಮಕ್ಕಳು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.

Continue Reading

DAKSHINA KANNADA

ಪುತ್ತೂರು: ಕರ್ನಾಟಕದ ಮೂರನೇ ಅತಿ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

Published

on

ಪುತ್ತೂರು: ಕರ್ನಾಟಕದ ಮೂರನೇ ಅತೀ ಎತ್ತರದ ರಾಷ್ಟ್ರ ಧ್ವಜಸ್ತಂಭವು ಪುತ್ತೂರು ನಗರದ ನೆಲ್ಲಿಕಟ್ಟೆಯಲ್ಲಿ ನಿರ್ಮಾಣಗೊಳ್ಳಲಿದ್ದು, ಶನಿವಾರ ಶಿಲಾನ್ಯಾಸ ನೆರವೇರಿಸಲಾಯಿತು.

ಶಾಸಕರ ಅನುದಾನ ರೂ. 25 ಲಕ್ಷ, ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ 35 ಲಕ್ಷ ಹಾಗೂ ನಗರಸಭೆಯ ರೂ.40 ಲಕ್ಷ ಸೇರಿ ಒಟ್ಟು 1 ಕೋಟಿ ಅನುದಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯ ತುದಿಯಲ್ಲಿ ನೆಲ್ಲಿಕಟ್ಟೆಯ ಪಾರ್ಕ್‍ನಲ್ಲಿ ಈ ರಾಷ್ಟ್ರ ಧ್ವಜ ನಿರ್ಮಾಣವಾಗಲಿದೆ.

ತೆಂಗಿನ ಕಾಯಿ ಒಡೆದ ಬಳಿಕ ಗುದ್ದಲಿ ಪೂಜೆಯನ್ನು ಶಾಸಕ ಆಶೋಕ್ ರೈ ನೆರವೇರಿಸಿದರು. ಪುಡಾ ಅಧ್ಯಕ್ಷ ಅಮಳ ರಾಮಚಂದ್ರ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಮೊದಲಾದವರಿದ್ದರು.

ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್‌

ಧ್ವಜಸ್ತಂಭ 80 ಮೀಟರ್ ಎತ್ತರವಿರಲಿದ್ದು, 60 ಫೀಟ್ ಮತ್ತು 40 ಫೀಟ್‍ನ ರಾಷ್ಟ್ರಧ್ವಜ ಅಳವಡಿಕೆಯಾಗಲಿದೆ. 1270 ಎಂ.ಎಂ. ತಳಪಾಯವಿರಲಿದೆ. ಜೊತೆಗೆ ವಿದ್ಯುತ್ ಚಾಲಿತ ಮೋಟಾರ್ ವ್ಯವಸ್ಥೆ ಸಿಗ್ನಲ್ ಲೈಟ್, ಫೋಕಸ್ ಲೈಟ್ ಅಳವಡಿಕೆಯನ್ನೂ ಮಾಡಲಾಗುತ್ತದೆ.

Continue Reading
Advertisement

Trending

Copyright © 2025 Namma Kudla News

You cannot copy content of this page