Connect with us

LATEST NEWS

ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಸಿಂಹದ ಭೀಕರ ದಾಳಿ: ಕೂದಲೆಳೆ ಅಂತರದಲ್ಲಿ ಬಚಾವ್!

Published

on

ಬೋನ್ ಬಳಿ ನಿಂತಿದ್ದ ಬಾಲಕಿಯ ಮೇಲೆ ಸಿಂಹ ದಾಳಿ ಮಾಡಿರುವ ಭೀಕರ ಘಟನೆ ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದ ಶಾಂಟೌ ಝಾಂಗ್‌ಶಾನ್ ಪಾರ್ಕ್ ಮೃಗಾಲಯದಲ್ಲಿ ನಡೆದಿದೆ.


10 ವರ್ಷದ ಬಾಲಕಿಯೊಬ್ಬಳು ನಿಷೇಧಿತ ಪ್ರದೇಶಕ್ಕೆ ತೆರಳಿ ಪಂಜರದ ಸಲಾಕೆಗಳ ಮೂಲಕ ಸಿಂಹಕ್ಕೆ ಆಹಾರ ನೀಡಲು ಪ್ರಯತ್ನಿಸಿದಳು. ಈ ವೇಳೆ ಸಿಂಹವು ಏಕಾಏಕಿ ತನ್ನ ಪಂಜವನ್ನು ಹೊರಚಾಚಿ ಬಾಲಕಿಯ ಕಾಲನ್ನು ಹಿಡಿದು ಒಳಕ್ಕೆ ಎಳೆಯಲು ಪ್ರಯತ್ನಿಸಿತು.

ಬಾಲಕಿ ಕಿರುಚಾಡುತ್ತಿದ್ದು, ಅದರಿಂದ ಬಿಡಿಸಿಕೊಳ್ಳಲು ಹರಸಾಹಸ ಪಡುತ್ತಿರುವಾಗ ಆಕೆಯ ತಂದೆ ಕೂಡಲೇ ಓಡಿ ಬಂದು ಹೇಗೋ ಆಕೆಯನ್ನು ಕಾಪಾಡಿದ್ದಾರೆ. ಅದೃಷ್ಟವಶಾತ್ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಈ ಪೋಸ್ಟ್ ಅನ್ನು ‘ಕ್ಲಿಪ್ಸ್ ಯೂನಿವರ್ಸ್’ ಹ್ಯಾಂಡಲ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ: ಪ್ರೇಯಸಿಯಿಂದ ಫೋನು ಇಲ್ಲ, ಮೆಸೇಜು ಇಲ್ಲ; ಮಂಗಳೂರಿನ ಯುವಕ ವಿದೇಶದಲ್ಲಿ ಆತ್ಮಹತ್ಯೆ

ಮುನ್ನೆಚ್ಚರಿಕಾ ಕ್ರಮವಾಗಿ ಆಕೆಗೆ ರೇಬಿಸ್ ಲಸಿಕೆ ನೀಡಲಾಗಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವನ್ಯಜೀವಿಗಳ ಬಳಿ ತೆರಳುವಾಗ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.

kerala

ಮದ್ವೆಗೆ ಬಲವಂತ ಆರೋಪ-ಠಾಣೆ ಮೆಟ್ಟಿಲೇರಿದ ನೀಲಿ ಕಂಗಳ ಚೆಲುವೆ ಮೊನಾಲಿಸಾ

Published

on

ತಿರುವನಂತಪುರ: 2024ರಲ್ಲಿ ನಡೆದಿದ್ದ ಮಹಾಕುಂಭಮೇಳದಲ್ಲಿ  ರುದ್ರಾಕ್ಷಿ ಮಾರುತ್ತ ತನ್ನ ಸುಂದರ ಕಣ್ಣುಗಳ ಮೂಲಕವೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಹವಾ ಸೃಷ್ಟಿಸಿದ್ದ ಮೊನಾಲಿಸಾ ಬೋಂಸ್ಲೆ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ತನ್ನ ತಂದೆ ತೋರಿಸಿದ ಹುಡುಗನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಮೊನಾಲಿಸಾ ತನ್ನ ಗೆಳೆಯನ ಜೊತೆ ಬಂದು ತಂದೆ ವಿಜಯ್ ಸಿಂಗ್ ಭೋಸ್ಲೆ ವಿರುದ್ಧ ದೂರು ನೀಡಿದ್ದಾರೆ. ಯಾವುದೇ ದೈಹಿಕ ಕಿರುಕುಳ ನಡೆದಿಲ್ಲ. ಪ್ರಾಥಮಿಕವಾಗಿ ಬಲವಂತದ ವಿವಾಹ ಪ್ರಸ್ತಾಪವಾಗಿದೆ. ಮೊನಾಲಿಸಾ ತಂದೆ ತನ್ನ ಮೇಲೆ ಒತ್ತಡ ಹೇರುತ್ತಲೇ ಇದ್ದುದರಿಂದ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ನಾವು ಇನ್ನೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್ ಆದ ಬಳಿಕ ಮೊನಾಲಿಸಾ ಅವರ ಬದುಕೇ ಬದಲಾಗಿದೆ. ಸಾಲು ಸಾಲು ಸಿನಿಮಾ ಆಫರ್ ಗಳು ಬರುತ್ತಿದೆ. ಪ್ರಸ್ತುತ ಶೂಟಿಂಗ್ ಗಾಗಿ ತಿರುವನಂತಪುರಕ್ಕೆ ಬಂದಿದ್ದ ಮೊನಾಲಿಸಾ ಇದೀಗ ಗೆಳೆಯನ ಜೊತೆ ಬಮದು ದೂರನ್ನು ನೀಡಿದ್ದಾರೆ.

Continue Reading

bangalore

6 ತಿಂಗಳಿನಿಂದ ಒಂದೇ ಮನೆಗೆ ಸ್ಕೆಚ್, 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಯುವಕ ಅರೆಸ್ಟ್

Published

on

ಬೆಂಗಳೂರು: ಮನೆಯವರು ಅಮೇರಿಕಾದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ  ಕಳ್ಳನೋರ್ವ ಸುಮಾರು 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿನಿಮೀಯ ಶೈಲಿಯಲ್ಲಿಕಳ್ಳತನಗೈದ ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ದಂಪತಿ ಅಮೇರಿಕಾದಲ್ಲಿ ಸೆಟಲ್ ಆಗಿರೋದನ್ನು ಖಚಿತಪಡಿಸಿಕೊಂಡು  ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ.

ಲಾಕರ್ ಓಪನ್ ಮಾಡಿ 1.8 ಕೆಜಿಯ ಚಿನ್ನಾಭರಣ, ಡೈಮಂಡ್ ಹಾಗೂ ನಗದು ಎಲ್ಲವನ್ನು ದೋಚಿಕೊಂಡು ಹೋಗಿದ್ದ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಚಿನ್ನಾಭರಣ ಸಿಕ್ಕ ಖುಷಿಗೆ ಯಾರಿಗೂ ಹೇಳದೆ ಕೇಳದೆ ನೇರವಾಗಿ ರಾಜಸ್ಥಾನಕ್ಕೆ ಚಿನ್ನಾಭರಣ ಕೊಂಡೊಯ್ದು, ಮನೆಯಲ್ಲಿ ಬಚ್ಚಿಟ್ಟಿದ್ದ.

ಮನೆಯ ಸಿಸಿಟಿವಿಯನ್ನ ಅಮೆರಿಕದಲ್ಲಿದ್ದ ದಂಪತಿ ಮೊಬೈಲ್ ನಲ್ಲಿ ಪರಿಶೀಲಿಸಿದ ಸಂದರ್ಭ ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಸಿಸಿಟಿವಿ ಆಧರಿಸಿ ಆರೋಪಿ ವೇಲಾರಾಮ್‌ ನನ್ನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

Continue Reading

LATEST NEWS

ಸೆಕೆ ತಾಳಲಾರದೆ ತಂಪಾಗಲು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

Published

on

ಹುಬ್ಬಳ್ಳಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಈಜಲು ಹೋಗಿ ನೀರಿನ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.


ಮೃತಪಟ್ಟ ವಿದ್ಯಾರ್ಥಿಗಳನ್ನು ಸಮರ್ಥ್ ಮತ್ತು ಹರೀಶ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗೋಪನಕೊಪ್ಪದ ಸರ್ಕಾರಿ ಪದವಪೂರ್ವ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ವಿದ್ಯಾರ್ಥಿಗಳು, ಪ್ರಥಮ ಪಿಯುಸಿ ಪರೀಕ್ಷೆ ಮುಗಿದಿರುವ ಕಾರಣ ಮನೆಯಲ್ಲಿದ್ದರು ಎನ್ನಲಾಗಿದೆ.

ಬೇಸಿಗೆಯ ಸೆಕೆ ತಾಳಲಾರದೆ ತಂಪಾಗಲು ಇಬ್ಬರು ಸ್ನೇಹಿತರು ಮನೆ ಸಮೀಪ ಇರುವ ನಿರ್ಮಾಣ ಹಂತದ RNS ಗಾಲ್ಫ್​​ ಮೈದಾನದಲ್ಲಿರೋ ಹೊಂಡಕ್ಕೆ ಈಜಲು ತೆರಳಿದ್ದರು. ಮಧ್ಯಾಹ್ನ ಮನೆಯಿಂದ ಹೋದವರು, ಸಂಜೆಯಾದರೂ ಮನೆಗೆ ಮರುಳಲಿಲ್ಲ. ಆ ವೇಳೆ ಇಬ್ಬರು ಹೊಂಡದಲ್ಲಿ ಬಿದ್ದಿರೋದನ್ನು ಗಮನಿಸಿದ ಅಲ್ಲಿನ ಕೆಲಸಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದರು ಎನ್ನಲಾಗಿದೆ. ಘಟನನಾ ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆಯಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page