Connect with us

LATEST NEWS

2 ಸಾವಿರ ರೂಪಾಯಿಗಾಗಿ ಯುವತಿಯ ಹ*ತ್ಯೆ ಮಾಡಿದ್ದ ಅಪ್ರಾಪ್ತ ಅರೆಸ್ಟ್!

Published

on

ಮಂಗಳೂರು/ ಬೆಂಗಳೂರು : ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಯುವತಿ ಪ್ರಭುದ್ಯಾ ಆತ್ಮಹ*ತ್ಯೆ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದೆ. ಕೇವಲ 2 ಸಾವಿರ ರೂಪಾಯಿ ವಿಚಾರಕ್ಕೆ ಅಪ್ರಾಪ್ತ ಬಾಲಕನೊಬ್ಬ ಯುವತಿಯ ಕೊಲೆ ಮಾಡಿದ್ದಾನೆ ಎಂಬ ವಿಚಾರ ತನಿಖಯಿಂದ ಹೊರಬಿದ್ದಿದೆ.

 

 

ಏನಿದು ಘಟನೆ?

ಮೇ 15 ರಂದು 20 ವರ್ಷದ ಪ್ರಭುದ್ಯಾ ಮೃ*ತದೇಹ ಮನೆಯ ಬಾತ್‍ರೂಂನಲ್ಲಿ ಪತ್ತೆ ಆಗಿತ್ತು. ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಶ*ವ ಪತ್ತೆಯಾಗಿತ್ತು. ಇದು ಆತ್ಮಹ*ತ್ಯೆ ಎಂದೇ ಪೊಲೀಸರು ಪರಿಗಣಿಸಿದ್ದರು. ಮಗಳ ಸಾ*ವಿನ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದರು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು. ಇದೀಗ ಸತ್ಯ ಬಯಲಾಗಿದೆ.

 

ಹಣ ಕದಿಯಲು ಬಂದ ಬಾಲಕನಿಂದ ಕೃತ್ಯ :

ಆರೋಪಿ ಬಾಲಕ ತನ್ನ ಸ್ನೇಹಿತನ ಕನ್ನಡಕ ಡ್ಯಾಮೇಜ್ ಮಾಡಿದ್ದ. ಇದನ್ನು ರಿಪೇರಿ ಮಾಡಿಸಿಕೊಡುವಂತೆ ಸ್ನೇಹಿತ ಪಟ್ಟು ಹಿಡಿದಿದ್ದ. ಹಾಗಾಗಿ ಅಪ್ರಾಪ್ತ, ಪ್ರಬುದ್ಧ್ಯಾ ಮನೆಗೆ ಬಂದಿದ್ದ. ಹೀಗೆ ಬಂದವನೇ ಪ್ರಭುದ್ಯಾ ಪರ್ಸ್‍ನಿಂದ 2 ಸಾವಿರ ರೂ. ಎಗರಿಸಿದ್ದಾನೆ.
ಇದು ಪ್ರಭುದ್ಧ್ಯಾ ಗಮನಕ್ಕೆ ಬಂದಿದ್ದು, ಆಕೆ ಬಾಲಕನನ್ನು ಪ್ರಶ್ನೆ ಮಾಡಿದ್ದಾಳೆ. ಆಗ ಬಾಲಕ, ತಪ್ಪಾಯ್ತು ಕ್ಷಮಿಸಿಬಿಡು ಎಂದು ಕಾಲು ಹಿಡಿದುಕೊಂಡಿದ್ದಾನೆ. ಹೀಗೆ ಕಾಲು ಹಿಡಿದಾಗ ಪ್ರಭುದ್ಧ್ಯಾ ಆಯತಪ್ಪಿ ಬಿದ್ದಿದ್ದಾಳೆ.

ಇದನ್ನೂ ಓದಿ : ಮದುವೆ ಗೌನ್ ನಲ್ಲಿ ಮಿಂಚಬೇಕಿದ್ದ ಯುವತಿ ಗ್ಯಾಸ್ಟ್ರಿಕ್ ಬಲೂನ್ ಸರ್ಜರಿಯಿಂದ ಸಾ*ವು!

ಕೆಳಗಡೆ ಬಿದ್ದ ಕಾರಣ ಆಕೆಯ ತಲೆಗೆ ಬಲವಾದ ಪೆಟ್ಟು ಬಿದ್ದು ಮೂರ್ಛೆ ಹೋಗಿ ಪ್ರಜ್ಞೆ ತಪ್ಪಿದ್ದಾಳೆ. ಇದರಿಂದ ಭಯಗೊಂಡ ಬಾಲಕ ಆತ್ಮಹ*ತ್ಯೆ ಎಂಬಂತೆ ಬಿಂಬಿಸಲು ಯುವತಿ ಕೈ ಕುಯ್ದಿದ್ದಾನೆ. ಇದರಿಂದ ರಕ್ತಸ್ರಾವ ಆಗಿ ಪ್ರಬುದ್ಧ್ಯಾ ಸಾ*ವನ್ನಪ್ಪಿದ್ದಾಳೆ ಎಂಬ ವಿಚಾರ ಬಹಿರಂಗವಾಗಿದೆ.

 

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

LATEST NEWS

ಭೀ*ಕರ ರಸ್ತೆ ಅಪ*ಘಾತ; ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾ*ವು

Published

on

ಮಂಗಳೂರು/ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾ*ವನ್ನಪ್ಪಿರುವ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್‌ನಲ್ಲಿ ನಡೆದಿದೆ.


ಮೃ*ತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್ (22) ಮತ್ತು ಕುರುಬರಹಳ್ಳಿ ನಿವಾಸಿ ಸಹನಾ(21) ಎಂದು ಗುರುತಿಸಲಾಗಿದೆ.

ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್​ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್​​ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್​​ ಒಂದನ್ನು ಮುಗಿಸಿಕೊಂಡು ಕುಣಿಗಲ್​ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಬೈಕ್​ಗೆ ಡಿ*ಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.

READ IN ENGLISH :https://www.nammakudlaenglish.com/horrific-road-accident-two-dancers-die-on-the-spot/

ಇದನ್ನೂ ಓದಿ: ಬೆಳ್ತಂಗಡಿ: ಹಿಟಾಚಿಗೆ ಖಾಸಗಿ ಬಸ್ ಡಿ*ಕ್ಕಿ; ಓರ್ವ ಸಾ*ವು, ಹಲವರಿಗೆ ಗಾಯ

ಅಪ*ಘಾತದ ಬೆನ್ನಲ್ಲೇ ಲಾರಿ ಸಮೇತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page