Connect with us

DAKSHINA KANNADA

ತಟಸ್ಥವಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ! ಸದನದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

Published

on

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು.

ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ ಕೆಳಕಂಡ ಪ್ರಕಾರ್ಯಗಳನ್ನು ನಿರ್ವಹಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರಾತಿ ನೀಡಿ ಆದೇಶಿಸಿದ್ದಾಗಿ ತಿಳಿಸಿದ್ದಾರೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ರಸ್ತೆ, ನೀರು ಒಳಚರಂಡಿ ಇತ್ಯಾದಿ ಮೂಲ ಸೌಲಭ್ಯಗಳನ್ನು ಒದಗಿಸಲು ಹಾಗೂ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಬಂದರು ಇತ್ಯಾದಿ ಕ್ಷೇತ್ರಗಳ ಸರ್ವೋತ್ತಮ ಅಭಿವೃದ್ಧಿಗಾಗಿ ಹಾಗೂ ಸಮಗ್ರ ಅಭಿವೃದ್ಧಿ ಹಾಗೂ ಸಮನ್ವಯತೆಯನ್ನು ಸಾಧಿಸುವ ಉದ್ದೇಶದಿಂದ ಸರ್ಕಾರಕ್ಕೆ ಸೂಕ್ತ ಸಲಹೆ/ಅಭಿಪ್ರಾಯಗಳನ್ನು ನೀಡಲು ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿತ್ತು.

ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಧನಸಹಾಯ ಮಂಜೂರು ಮಾಡುವುದು, ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ನಗರ/ಗ್ರಾಮೀಣ ಸ್ಥಳೀಯ ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಧನಸಹಾಯ ಮಂಜೂರು ಮಾಡುವುದು ಮತ್ತು ಸಂಪನ್ಮೂಲ ಕ್ರೋಢೀಕರಿಸುವುದು.

ಕರಾವಳಿ ಜಿಲ್ಲೆಗಳಲ್ಲಿ ರಸ್ತೆ ಸಂಪರ್ಕವಿಲ್ಲದ ಪ್ರದೇಶಗಳಿಗೆ ರಸ್ತೆ ನಿರ್ಮಿಸುವುದು. ಪ್ರವಾಸೋದ್ಯಮ ಇಲಾಖೆಯು ಅಭಿವೃದ್ಧಿಪಡಿಸದೇ ಇರುವಂತಹ ಐತಿಹಾಸಿಕ ಹಾಗೂ ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸುವುದು.

ಸರ್ಕಾರದ ಇತರ ಯೋಜನೆಗಳಡಿಯಲ್ಲಿ ಕೈಗೊಳ್ಳದೇ ಇರುವಂತಹ, ಉಳಿದ ಯೋಜನೆಗಳು, ಆದರೆ, ಯಾವುದೇ ವೈಯಕ್ತಿಕ ಲಾಭವನ್ನೊಳಗೊಂಡ ಫಲಾನುಭವಿ ಆಧಾರಿತ ಯೋಜನೆಗಳನ್ನು ಕೈಗೊಳ್ಳತಕ್ಕದ್ದಲ್ಲ ಎಂದು ಇದೇ ಸಂದರ್ಭದಲ್ಲಿ ಉತ್ತರಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಈ ಮೇಲ್ಕಂಡ ಯೋಜನೆಗಳನ್ನು ರೂಪಿಸಿ ಶೇಕಡ 95ರಷ್ಟು ಅನುದಾನವನ್ನು ಪ್ರಾಧಿಕಾರದಿಂದ ಶೇಕಡ 5ರಷ್ಟು ಅನುದಾನವನ್ನು ಸಂಬಂಧಪಟ್ಟ ನಗರ/ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಂದ ಭರಿಸಲು ಅವಕಾಶ ಕಲ್ಪಿಸಲಾಗಿತ್ತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸದಸ್ಯರಾಗಿರುವವರು ಹಾಗೂ ಅಧಿಕಾರಿಗಳು ಮಾತ್ರ ಕ್ರಿಯಾಯೋಜನೆ ರೂಪಿಸುತ್ತಿದ್ದ ಕಾರಣ ಚುನಾಯಿತ ಜನಪ್ರತಿನಿಧಿಗಳೆಲ್ಲರಿಗೂ ಅಧಿಕಾರ, ಅನುದಾನ ಹಾಗೂ ಮಾಹಿತಿ ಲಭ್ಯವಾಗದೇ ಇರುವ ಹಿನ್ನೆಲೆಯಲ್ಲಿ ಚುನಾಯಿತ ಎಲ್ಲಾ ಶಾಸಕರಿಗೂ ಅಧಿಕಾರ ದೊರೆಯುವಂತೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪರಿವರ್ತಿಸಿ ಅಧಿನಿಯಮವನ್ನು ರಚಿಸಿ, ಕರ್ನಾಟಕ ರಾಜ್ಯ ಪತ್ರ ಸಂಖ್ಯೆ: ಸಂವ್ಯಶಾಇ 29 ಶಾಸನ 2023, ದಿನಾಂಕ: 10.06.2024ರಲ್ಲಿ ಹೊರಡಿಸಲಾಗಿದೆ. ಸದರಿ ಕಾಯ್ದೆ ಪ್ರಕಾರ ಮಂಡಳಿ ವ್ಯಾಪ್ತಿಯ ಎಲ್ಲಾ ಚುನಾವಣೆ ಕ್ಷೇತ್ರಗಳನ್ನು ಹೊಂದಿರುವ ಸಂಸತ್ತಿನ ರಾಜ್ಯ ವಿಧಾನ ಸಭೆಯ ಸದಸ್ಯರು ಹಾಗೂ ಮಂಡಳಿ ವ್ಯಾಪ್ತಿಯಲ್ಲಿ ನೋಡಲ್ ಜಿಲ್ಲೆ/ತಾಲ್ಲೂಕನ್ನು ಹೊಂದಿರುವ ರಾಜ್ಯ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು, ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರುಗಳು, ನಾಮ ನಿರ್ದೇಶನಗೊಂಡ 10 ಮಂದಿ ಸದಸ್ಯರಾಗಿದ್ದು, ಯೋಜನೆಗಳನ್ನು ರೂಪಿಸಲು ಅವಕಾಶ ಕಲ್ಪಿಸಲಾಗಿದೆ.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧಿನಿಯಮ 2023 ದಿನಾಂಕ: 10.06.2024ರಲ್ಲಿ ರಾಜ್ಯ ಪತ್ರದಲ್ಲಿ ಪ್ರಕಟವಾದ ಕಾರಣ ಆರ್ಥಿಕ ವರ್ಷದ ಮಧ್ಯಭಾಗವಾದ ಕಾರಣ ಅಧಿಕೃತವಾಗಿ ದಿನಾಂಕ: 01.04.2025 ರಿಂದ ಪ್ರಾಧಿಕಾರದ ಬದಲು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ: ಇಂದೆಂಥ ದುರವಸ್ಥೆ! 108 ಆ್ಯಂಬುಲೆನ್ಸ್ ಸಿಗದೆ ಪರದಾಟ; ಗೂಡ್ಸ್ ಟೆಂಪೋ ಮೂಲಕ ರೋಗಿ ಆಸ್ಪತ್ರೆಗೆ!

ಪ್ರಸ್ತುತ ರಾಜ್ಯ ಸರ್ಕಾರವು ರೂ.12.52ಕೋಟಿಗಳನ್ನು ನಿಗದಿಪಡಿಸಿದ್ದು, 2026-27ನೇ ಸಾಲಿನಿಂದ ಹೆಚ್ಚಿನ ಅನುದಾನವನ್ನು ನಿಗದಿಪಡಿಸಲು ಕ್ರಮವಹಿಸಲಾಗುತ್ತದೆ. ಹೀಗೆ ನಿಗದಿಪಡಿಸಿದ ಅನುದಾನಕ್ಕೆ ಕರಾವಳಿ ಭಾಗದ ಎಲ್ಲಾ ಜನಪ್ರತಿನಿಧಿಗಳು ಮಂಡಳಿಯ ಸಾಮಾನ್ಯ ಸಭೆಯಲ್ಲಿ ಕ್ರಿಯಾಯೋಜನೆ ರೂಪಿಸಬಹುದಾಗಿರುತ್ತದೆ. ಹಿಂದೆ ಪ್ರಾಧಿಕಾರದಲ್ಲಿ ಈ ಅವಕಾಶವಿರಲಿಲ್ಲ ಎಂಬ ಅಂಶವನ್ನು ಸಚಿವರು ತಮ್ಮ ಉತ್ತರದಲ್ಲಿ ವಿವರಿಸಿದ್ದಾರೆ.

DAKSHINA KANNADA

ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಕದ್ರಿ ಶ್ರೀಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ  ಪ್ರಯುಕ್ತ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕದ್ರಿ ಈವೆಂಟ್ಸ್ ಅರ್ಪಿಸುವ  ‘ಕದ್ರಿ ಮ್ಯೂಸಿಕಲ್ ನೈಟ್ಸ್ 2026’ ನಾಳೆ(ಜ.21) ಸಂಜೆ 7 ಗಂಟೆಯಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದೆ.

ಎಂದಿನಂತೆ ಈ ಬಾರಿಯೂ ತಾರಾ ಮೆರುಗು ಇರಲಿದ್ದು, ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಆಗಮಿಸಲಿದ್ದಾರೆ.

ಆಯೋಜಕ ಜಗದೀಶ್ ಕದ್ರಿ ಈ ಬಗ್ಗೆ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಕದ್ರಿ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಿದ್ದೇವೆ. ಸಿನಿಮಾ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಹೆಸರಾಂತ ಗಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ : BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಕನ್ನಡ, ತುಳು ಚಿತ್ರರಂಗದ ಕಲಾವಿದರಾದ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರ್ಜುನ್ ಕಾಪಿಕಾಡ್, ಶನಿಲ್ ಗುರು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ದೀಪಕ್ ರೈ ಪಾಣಾಜೆ, ವಿಜೆ ವಿನೀತ್, ಸಮತಾ ಅಮೀನ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು: ಡ್ರಗ್ಸ್‌ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಾಗಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ ಬಸ್ಸು ಮಾಲಕರ ಸಂಘವೂ ಕೈಜೋಡಿಸಿ ಡ್ರಗ್ ನಿರ್ಮೂಲನೆ ಮಾಡಲು ಬೀದಿ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದು ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರಗ್ ಜಾಲಕ್ಕೆ ಕಡಿವಾಣ, ನಶೆಗೆ ಒಳಗಾಗುವ ವಿದ್ಯಾರ್ಥಿಗಳನ್ನು ಅದರಿಂದ ಹೊರತರುವ ಕೆಲಸ ಮಾಡುತ್ತಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು. ಅಲ್ಲದೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ನಾವು ಕೈಜೋಡಿಸಿದ್ದೇವೆ. ಜನವರಿ 27ರ ಮಂಗಳವಾರ ರೋಶನಿ ನಿಲಯ ಕಾಲೇಜಿನ ಸಹಭಾಗಿತ್ವದೊಂದಿಗೆ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಹಲವು ಕಡೆ ಡ್ರಗ್‌ ವಿರೋಧಿ ಬೀದಿನಾಟಕ ಆಯೋಜನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

ನಗರದ ಸೆಂಟ್ರಲ್‌ ಬಸ್ಸು ನಿಲ್ದಾಣ, ತೊಕ್ಕೊಟ್ಟು ಬಸ್ಸು ನಿಲ್ದಾಣ, ತಲಪಾಡಿ, ಉಳ್ಳಾಲ, ಲಾಲ್‌ಭಾಗ್‌ ಸೇರಿದಂತೆ ಹಲವು ಕಡೆಗಳ ಬಸ್ಸು ನಿಲ್ದಾಣಗಳಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಬಸ್ಸುಗಳಲ್ಲಿ ಸ್ಟಿಕ್ಕರ್‌ ಹಚ್ಚಿ ಜಾಗೃತಿ ಮೂಡಿಸಲಿದ್ದೇವೆ. ಇದಕ್ಕೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ ರಾಮಚಂದ್ರ ನಾಯ್ಕ , ರಾಮಚಂದ್ರ ಪಿಲಾರ್ ಹಾಗೂ ಜೊತೆ ಕಾರ್ಯದರ್ಶಿ ರಾಜೇಶ್ ಟಿ ಯವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ 

Published

on

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026’ ಅಂತಾರಾಜ್ಯ ಪ್ರಶಸ್ತಿಯನ್ನು  ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆರಿಗೆ ಪ್ರದಾನ ಮಾಡಲಾಯಿತು.

ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನುಅವರು  ಸ್ವೀಕರಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ  ಅಂಕಣಕಾರರಾಗಿ ಹಾಗೂ ಕ್ರೀಡಾ  ವಿಮರ್ಶಾತ್ಮಕ ಲೇಖನಗಳ  ಮೂಲಕ ಎಸ್. ಜಗದೀಶ್ಚಂದ್ರ ಅಂಚನ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ.ಕೆ.ವಾಮನ್ ರಾವ್, ನಿರ್ದೇಶಕ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ‌ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು  ಮೊದಲಾದವರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page