Connect with us

ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಮಂದಹಾಸ ಮೂಡಿಸುತ್ತಿರುವ ‘ಪ್ರಗತಿ ಸ್ಟಡಿ ಸೆಂಟರ್’..

Published

on

ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಮಂದಹಾಸ ಮೂಡಿಸುತ್ತಿರುವ ‘ಪ್ರಗತಿ ಸ್ಟಡಿ ಸೆಂಟರ್’..

ಪುತ್ತೂರು: ಜೀವನದಲ್ಲಿ ಸೋಲೆಂಬುದು ಹಲವಾರು ಕಾರಣಗಳಿಂದ ಬರಬಹುದು. ಆದರೆ ಅದನ್ನು ಗುರುತಿಸಿ ಸರಿಪಡಿಸಿ, ಮುನ್ನಡೆಸುವವರು ನಮ್ಮೊಂದಿಗೆ ಇದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ.

ಈ ರೀತಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಸಿ ಅವರ ಭವಿಷ್ಯಕ್ಕೆ ಬೆಳಕು ಬೀರುತ್ತಿರುವ ಸಂಸ್ಥೆ ಅಂದ್ರೆ ಅದು ಕರ್ನಾಟಕದಲ್ಲಿ ಮನೆ ಮಾತಾಗಿರುವ ಪುತ್ತೂರಿನ ‘ಪ್ರಗತಿ ಸ್ಟಡಿ ಸೆಂಟರ್’.

9ನೇ ತರಗತಿಯಿಂದ 10ನೇ ತರಗತಿಗೆ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಮೇ 10, 2020 ಆದಿತ್ಯವಾರದಿಂದ ಸೇತುಬಂಧ (ಬ್ರಿಡ್ಚ್ ಕೋರ್ಸ್) ತರಗತಿಗಳು ಆನ್‍ಲೈನ್ ಮೂಲಕ ಆರಂಭಗೊಳ್ಳಲಿರುವುದು.

ನುರಿತ ಶಿಕ್ಷಕರಿಂದ 4 ವಿಷಯಗಳ ಪಠ್ಯವನ್ನು ನಡೆಸಲಾಗುವುದು.

ಆಸಕ್ತ ವಿದ್ಯಾರ್ಥಿಗಳು ಈ ಉತ್ತಮ ಅವಕಾಶವನ್ನು ಬಳಸಿಕೊಳ್ಳಬಹುದು ಹಾಗೆಯೇ ಶೈಕ್ಷಣಿಕ ವರ್ಷ 2020ರಲ್ಲಿ ಪರೀಕ್ಷೆ ಬರೆಯುವ,

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಕಳೆದ 21 ದಿನಗಳಿಂದ ಸುಮಾರು 563 ವಿದ್ಯಾರ್ಥಿಗಳಿಗೆ ಆನ್‍ ಲೈನ್ ಮೂಲಕ ಉಚಿತವಾಗಿ ತರಗತಿಗಳನ್ನು ರಾಜ್ಯದಲ್ಲಿ ಪ್ರಪ್ರಥಮವಾಗಿ ನಡೆಸಿದ ಹೆಗ್ಗಳಿಕೆ ಪ್ರಗತಿ ಸ್ಟಡಿ ಸೆಂಟರ್‍ಗೆ ಸಲ್ಲುತ್ತದೆ.

ಎಸ್.ಎಸ್.ಎಲ್.ಸಿ ಬೋರ್ಡ್ ಮುಂದೆ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮರು ದಿನದಿಂದಲೇ ಆನ್‍ಲೈನ್ ಮೂಲಕವೇ ಉಚಿತವಾಗಿ ಪುನರ್ ಮನನ ತರಗತಿಗಳನ್ನು ನಡೆಸಲಿರುವುದು.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಆನ್‍ಲೈನ್ ತರಗತಿ:

ಪ್ರಥಮ ಪಿಯುಸಿ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ಪ್ರಥಮ ಪಿಯುಸಿ, ವಿಜ್ಞಾನ , ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ,

ಪೂರಕ ಪರೀಕ್ಷೆಗೆ ತಯಾರಾಗಲೂ ಆನ್‍ಲೈನ್ ಮೂಲಕ ಮೇ 15, 2020 ಶುಕ್ರವಾರದಿಂದ ತರಗತಿಗಳು ಆರಂಭಗೊಳ್ಳಲಿದೆ.

ಅಂತೆಯೇ ಉತ್ತೀರ್ಣಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೂ ಮುಂದಿನ ದ್ವಿತೀಯ ಪಿಯುಸಿಯ ಪಠ್ಯವನ್ನು ಸೇತುಬಂಧ ತರಗತಿಗಳನ್ನು ಆನ್‍ಲೈನ್ ಮೂಲಕವೇ ಮೇ 15, 2020 ಶುಕ್ರವಾರದಿಂದ ನಡೆಸಲಾಗುವುದು.

ಬೆಳಗ್ಗೆ 9:30ರಿಂದ ಸಂಜೆ 3:30ರ ವರೆಗೆ ತರಗತಿಗಳು ನಡೆಯಲಿರುವುದು. ಈ ಆನ್‍ಲೈನ್ ತರಗತಿಗಳನ್ನು ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದು.

ವಿದ್ಯಾರ್ಥಿಗಳು ಪ್ರಗತಿಯತ್ತ ಸಾಗಲು ಸೌಕರ್ಯಗಳು:

ಪ್ರಗತಿ ವಿದ್ಯಾ ಸಂಸ್ಥೆಯು ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್ ಮತ್ತು ಮಾಣಿ-ಮೈಸೂರು ಹೆದ್ದಾರಿಯಲ್ಲಿರುವ ಪೋಳ್ಯ ವೆಂಕಟರಮಣ ದೇವಸ್ಥಾನದ ಎದುರು,

2 ಎಕರೆ ವಿಸ್ತೀರ್ಣದಲ್ಲಿ ವಿಶಾಲವಾದ ಕ್ಯಾಂಪಸ್ ಮತ್ತು ಸುಸಜ್ಜಿತ 4 ಅಂತಸ್ತಿನ ‘ತತ್ವಮಸಿ’ ತರಗತಿ ಕೊಠಡಿಗಳನ್ನು ಹೊಂದಿರುತ್ತದೆ.

ಹಚ್ಚ ಹಸುರಿನ ವಾತಾವರಣ ಹೊಂದಿರುವ ಈ ಪರಿಸರದಲ್ಲಿ ಹೊರ ಊರಿನ ಸುಮಾರು 200 ವಿದ್ಯಾರ್ಥಿಗಳಿಗೆ ನೂತನ ಹಾಗೂ ಎಲ್ಲಾ ಸೌಕರ್ಯಗಳನ್ನು ಹೊಂದಿರುವಂತಹ ‘ಕೌಸ್ತುಭಂ’ ವಿದ್ಯಾರ್ಥಿ ನಿಲಯದ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುವುದು.

ಇಲ್ಲಿ ದಿನದ 24 ಗಂಟೆಗಳಲ್ಲಿಯೂ ಲಭ್ಯವಿರುವ ಬೋಧಕ-ಬೋಧಕೇತರ ವೃಂದ, ಮಕ್ಕಳ ಭದ್ರತಾ ದೃಷ್ಟಿಯಿಂದ ಸಿಸಿ ಕ್ಯಾಮರಾ ಅಳವಡಿಕೆ, ಕಂಪ್ಯೂಟರ್ ಲ್ಯಾಬ್,

ವಿಶಾಲವಾದ ಅಡುಗೆ ಕೋಣೆ, ಅನ್ನಪೂರ್ಣ ಉಪಹಾರ ಗೃಹ, ಜನರೇಟರ್ ಸೇವೆ, ಲೈಬ್ರೇರಿ, ಸ್ಟೇಷನರಿ, ಆಟದ ಮೈದಾನ, ಪ್ರತ್ಯೇಕ ವೈದ್ಯರ ಭೇಟಿ ಕೊಠಡಿ,

ಪ್ರಾಯೋಗಿಕ ಕಲಿಕಾ ಕೊಠಡಿಗಳು ಜೊತೆಗೆ ಜೀವನ ಹಾಗೂ ಮಾನವೀಯ ಮೌಲ್ಯ ಮತ್ತು ಶಿಸ್ತನ್ನು ಕಲಿಯಲು ಸಂಸ್ಥೆಯು ತರಬೇತಿ ಒದಗಿಸುತ್ತಿದೆ.

ಇಡೀ ಪ್ರಪಂಚವೇ ಎದುರಿಸುತ್ತಿರುವ ಕೊರೊನಾ ವೈರಸನ್ನು ದೂರವಿಡಲು ಸಂಸ್ಥೆಯು ವಿದ್ಯಾರ್ಥಿಗಳಿಗೆ ರಕ್ಷಣಾ ಕ್ರಮಗಳ ಮಾಹಿತಿಯನ್ನು ನೀಡಲಿರುವುದು. ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

“ಸೋತೆನೆಂದು ದಿಕ್ಕು ತೋಚದೇ ಕುಳಿತ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಕೈ ಹಿಡಿದು ನಡೆಸಿದ ಗುರು ಪ್ರಗತಿ ಸ್ಟಡಿ ಸೆಂಟರ್”, ಎಂಬುದು ಇಲ್ಲಿ ಕಲಿತ ಹಲವು ವಿದ್ಯಾರ್ಥಿಗಳ ಹಾಗು ಅವರ ಪೋಷಕರ ಕೃತಜ್ಞತೆಯ ನುಡಿಗಳು.

ಹೇಗೆ ನದಿಯೊಂದರ ಹುಟ್ಟು ಚಿಕ್ಕದಾಗಿರುತ್ತದೆಯೋ ಅದೇ ರೀತಿ ಪುಟ್ಟದಾಗಿ ಪ್ರಾರಂಭಗೊಂಡು ಬೆಳೆಯುತ್ತಾ,

ಚಿಕ್ಕದೊಂದು ಮೈಲಿಗಲ್ಲನ್ನು ಸಾಧಿಸಿ ಪ್ರಗತಿಯ ಪಥದಲ್ಲಿ ಸಾಗುತ್ತಿರುವ ಸಂಸ್ಥೆ 12 ವರುಷ ಪೂರ್ಣಗೊಳಿಸಿ, ಇದೀಗ 13ನೇ ವರುಷಕ್ಕೆ ಕಾಲಿಟ್ಟಿದೆ.

ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ವಿದ್ಯಾರ್ಥಿಗಳ ಜೀವನದ ಆಶಾಕಿರಣ ಈ ಪ್ರಗತಿ ಸ್ಟಡಿ ಸೆಂಟರ್.

ಪ್ರಗತಿಯೊಂದಿಗೆ ಕೈಜೋಡಿಸಿ, ಪ್ರಗತಿಯ ಪಥದಲ್ಲಿ ಸಾಗಿ, ಜೀವನದಲ್ಲಿ ಪ್ರಗತಿಯನ್ನು ಸಾಧಿಸಿ ಎಂಬುವುದೇ ನಮ್ಮ ಸಂಸ್ಥೆಯ ಮುಖ್ಯ ಧ್ಯೇಯವಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page