Connect with us

STATE

ಕಲಬುರಗಿಯಲ್ಲಿ ಪತ್ತೆಯಾದ ವಿಚಿತ್ರ ಕಳ್ಳ! ಕೊನೆಗೂ ಬಂಧಿಸಿದ ಪೊಲೀಸರು

Published

on

ಕಲಬುರಗಿ: ರೈಲಿನಲ್ಲಿ ಟಿಕೆಟ್ ತೆಗೆದುಕೊಳ್ಳದೇ ಮಹಾರಾಷ್ಟ್ರದಿಂದ ಕನ್ಯಾಕುಮಾರಿಗೆ ಪ್ರಯಾಣ ಮಾಡುತ್ತಿದ್ದವನನ್ನು ಕಲಬುರಗಿಯಲ್ಲಿ ರೈಲಿನಿಂದ ಇಳಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ವಿಷ್ಯ ಅದಲ್ಲ, ರೈಲಿನಿಂದ ಇಳಿಸಿದ ಬಳಿಕ ಆತ ಮಾಡಿರುವ ಕುಕೃತ್ಯದಿಂದ ಆತ ಬಂಧನಕ್ಕೊಳಗಾಗಿದ್ದಾನೆ.


ಕಾರವಾರ ಜಿಲ್ಲೆಯ ನಿವಾಸಿ, ನವೀನ್ ಜೋಶಿ ಬಂಧಿತ. ಆತ ಮಹಾರಾಷ್ಟ್ರ ಹೋಟೆಲ್‌ವೊಂದರಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದು, ದುಡಿದ ದುಡ್ಡು ಕುಡಿಯುವುದಕ್ಕೆ ಸಾಕಾಗುತ್ತಿರಲಿಲ್ಲ. ಹಾಗಾಗಿ ತನ್ನ ಕೆಲಸದ ಜತೆ ಕಳ್ಳತನವನ್ನು ಪ್ರವೃತ್ತಿಯಾನ್ನಾಗಿಸಿಕೊಂಡಿದ್ದ. ಕಳ್ಳ ನವೀನ್ ರೈಲಿನಲ್ಲಿ ಟಿಕೆಟ್ ತೆಗೆದುಕೊಳ್ಳದೇ ಉಚಿತವಾಗಿ ಪ್ರಯಾಣಿಸುತ್ತಿದ್ದ. ಕಲಬುರಗಿ ಜಿಲ್ಲೆಯ ಗಾಣಗಾಪುರದ ಬಳಿ ಟಿಸಿ ತಪಾಸಣೆ ಮಾಡಿದ್ದು, ಟಿಕೆಟ್ ಇಲ್ಲದ ಕಾರಣಕ್ಕೆ ಕಲಬುರಗಿಯಲ್ಲಿ ರೈಲಿನಿಂದ ಇಳಿಸಿದರು. ಬಳಿಕ ಜೇಬಲ್ಲಿ ನಯಾ ಪೈಸೆ ದುಡ್ಡು ಇಲ್ಲದೇ ಇರುವ ಕಾರಣ ನವೀನ್ ಕಳ್ಳತನ ಮಾಡುವುದಕ್ಕೆ ಕನ್ಯಾಕುಮಾರಿ ಆದರೇನು, ಕಲಬುರಗಿ ಆದರೇನು ಎಂದು ನಿರ್ಧರಿಸಿದ್ದ.

ಕಲಬುರಗಿ ಗಾಬರೇ ಲೇಔಟ್‌ನಲ್ಲಿರುವ ನಿವೃತ್ತ ಆರ್‌ಎಫ್‌ಓ ಈರಣ್ಣ ಪಟ್ಟೆದಾರ್ ಅವರ ಮನೆಗೆ ಬೀಗ ಹಾಕಿರುವುದನ್ನು ಕಂಡು ಬೀಗ ಮುರಿದು ಮನೆಯಲ್ಲಿದ್ದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದ.

ಇದನ್ನೂ ಓದಿ: ಚೆಕ್ ಡ್ಯಾಂನಲ್ಲಿ ಮುಳುಗಿ ಇಬ್ಬರು ಯುವಕರು ಸಾ*ವು

ಊರಿಗೆ ವಾಪಸ್ ಬಂದ ಈರಣ್ಣ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ. ತನಿಖೆ ಮುಂದುವರೆಸಿದ ಪೊಲೀಸರು ಸಿಸಿಟಿವಿ ದೃಶ್ಯದ ಸಹಾಯದಿಂದ ಕಳ್ಳ ಸೊಲ್ಲಾಪುರದಿಂದ ಪುಣೆಗೆ ತೆರಳಿರುವ ಮಾಹಿತಿ ಸಿಕ್ಕಿತು. ಕೊನೆಗೆ ಮಹಾರಾಷ್ಟ್ರದ ಪುಣೆಯಲ್ಲಿ ಸ್ಟೇಷನ್ ಬಜಾರ್ ಪೊಲೀಸರು ಕಳ್ಳ ನವೀನ್ ಜೋಶಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೀನ್ ಬ್ಯಾಗ್‌ನಲ್ಲಿದ್ದ 20 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

LATEST NEWS

ಅತ್ಯಾಚಾರ ಪ್ರಕರಣಕ್ಕೆ ಸುಂದರ ಹುಡುಗಿಯರೇ ಕಾರಣ-ಕಾಂಗ್ರೆಸ್ ಶಾಸಕನ ಹೇಳಿಕೆಗೆ ವ್ಯಾಪಕ ಆಕ್ರೋಶ

Published

on

ಇಂದೋರ್‌: ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಸುಂದರ ಹುಡುಗಿಯರೇ ಕಾರಣ ಎಂದು ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕ ಫೂಲ್ ಸಿಂಗ್ ಬರೈಯ್ಯಾ ಹೇಳಿಕೆಯೊಂದನ್ನು ನೀಡಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಸಂಘಟನೆಗಳಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ಮಾತನಾಡಿರುವ ಬರೈಯ್ಯಾ, ಯಾವುದೇ ಒಬ್ಬ ಪುರುಷ ರಸ್ತೆಯಲ್ಲಿ ಹೋಗುವಾಗ ಸೌಂದರ್ಯ ಹೆಚ್ಚಿರುವ ಹುಡುಗಿಯನ್ನ ನೋಡಿದ್ರೆ ಅವನ ಮನಸ್ಸು ಚಂಚಲಗೊಳ್ಳುತ್ತದೆ, ಇದರಿಂದ ಅವನು ಹಳಿ ತಪ್ಪುತ್ತಾನೆ. ಅಲ್ಲದೇ ಈ ಚಂಚಲತೆ ಅತ್ಯಾಚಾರಕ್ಕೆ ಪ್ರೇರಣೆ ನೀಡುತ್ತದೆ ಎಂದು ಹೇಳಿದ್ದಾರೆ .

ರುದ್ರಾಮಯಲ್ ತಂತ್ರ ಪುಸ್ತಕದ ವಿವರಣೆಯನ್ನು ಉಲ್ಲೇಖಿಸಿ ಮಾತನಾಡಿದ ಶಾಸಕ, ಕೆಲ ಸಮುದಾಯದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವು ತಮಗೆ ತೀರ್ಥಯಾತ್ರೆಗೆ ಸಮಾನವಾದ ಆಧ್ಯಾತ್ಮಿಕ ಅರ್ಹತೆ ತರುತ್ತದೆ ಎಂದು ಅಪರಾಧಿಗಳು ನಂಬುತ್ತಾರೆ. ಅಲ್ಲದೇ ಅತ್ಯಾಚಾರವನ್ನ ವ್ಯಕ್ತಿಗಳಿಗಿಂತ ಗುಂಪುಗಳು ಹೆಚ್ಚಾಗಿ ಮಾಡುತ್ತವೆ. ಇಂತಹ ಅಪರಾಧಗಳು ವಿಕೃತ ಮನಸ್ಥಿತಿಯಿಂದ ಉಂಟಾಗುತ್ತವೆ.

ಮಹಿಳೆಯೊಂದಿಗೆ ಸಂಭೋಗಿಸಿದರೆ, ನೀವು ತೀರ್ಥಯಾತ್ರೆಯ ಪ್ರತಿಫಲ ಪಡೆಯುತ್ತೀರಿ ಎಂದು ಧರ್ಮಗ್ರಂಥದಲ್ಲಿ ಬರೆಯಲಾಗಿದೆ. ತೀರ್ಥಯಾತ್ರೆಗೆ ಹೋಗಲು ಸಾಧ್ಯವಾಗದವರು ಈ ರೀತಿ ಅತ್ಯಾಚಾರ ಎಸಗುತ್ತಿದ್ದಾರೆ. ಇದು ಮಕ್ಕಳ ಮೇಲೂ ನಡೆಯುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.

ಸೇರಿದಂತೆ ವಿವಿಧ ಸಂಘಟನೆಗಳು ಇವರ ಮಾತನ್ನು ತೀವ್ರವಾಗಿ ಖಂಡಿಸಿವೆ. ಶಾಸಕರ ಹೇಳಿಕೆ ಕ್ರಿಮಿನಲ್‌ ಮತ್ತು ವಿಕೃತ ಮನಸ್ಥಿತಿಯ ಪ್ರತಿಬಿಂಬ. ಮಹಿಳೆಯರನ್ನ ಅಂದದಲ್ಲಿ ತೂಗುವುದು, ದಲಿತ ಮತ್ತು ಬುಡಕಟ್ಟು ಮಹಿಳೆಯರ ಮೇಲಿನ ಘೋರ ಅಪರಾಧಗಳನ್ನ ಪವಿತ್ರ ಕಾರ್ಯವೆಂದು ಬಣ್ಣಿಸುವುದು ಸ್ತ್ರೀದ್ವೇಷಿ ಹಾಗೂ ದಲಿತ ವಿರೋಧಿ ಚಿಂತನೆ ಆಗಿದೆ ಎಂದು ಕಿಡಿಕಾರಿದೆ. ಅಲ್ಲದೇ ಬರೈಯ್ಯಾರನ್ನ ತಕ್ಷಣವೇ ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಒತ್ತಾಯಿಸಿದೆ.

 

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ- ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

Published

on

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಸಿರವಾರ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಶಾಂತಪ್ಪ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದ ಶಾಂತಪ್ಪ ಕಾರು ಚಾಲನೆ ವೇಳೆ ನಿಯಂತ್ರಣ ಕಳೆದುಕೊಂಡ ಹಿನ್ನೆಲೆ ಕಾರು ಪಲ್ಟಿ ಹೊಡೆದು ಮೃತಪಟ್ಟಿದ್ದಾರೆ.

ಮಾರೆಪ್ಪ, ಶಿನು ಪವಾರ್ ಎಂಬವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗದ ಮರಗಮದಿಬ್ಬಿ ತಾಂಡದವರಾದ ಮೂವರು ಅರಕೇರಾದಿಂದ ಸಿರವಾರಕ್ಕೆ ಹೊರಟಿದ್ದ ವೇಳೆ ಕಾರು ಪಲ್ಟಿಯಾಗಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

 

Continue Reading

LATEST NEWS

ನಿಂತಿದ್ದ ಪಿಕ್‌-ಅಪ್‌ಗೆ ಡಿಕ್ಕಿ ಹೊಡೆದ ಶಾಲಾ ಮಕ್ಕಳಿದ್ದ ವಾಹನ; ನಾಲ್ಕು ಮಕ್ಕಳು ಗಂಭೀರ ಗಾಯ

Published

on

ಕಾರವಾರ: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ಬೊಲೆರೊ ಓಮಿನಿ ನಿಂತಿದ್ದ ಪಿಕ್‌-ಅಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್‌ ನಿಲ್ದಾಣದ ಬಳಿ ಸಂಭಿವಿಸಿದೆ.


ತನಿಷ್ಕ (15), ಅದ್ವಿತ್ (12), ಅರ್ಜುನ್ (13), ಆಯಿರಾ (10) ಗಂಭೀರ ಗಾಯಗೊಂಡ ಮಕ್ಕಳು. ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಕೆಎಸ್ಆರ್‌ಟಿಸಿ ಬಸ್‌-ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕನ ಜೀವ ಉಳಿದಿದ್ದೇ ಒಂದು ಪವಾಡ

ಈ ಘಟನೆ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವಾಗ ನಡೆದಿದೆ. ಘಟನಾ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page