Connect with us

DAKSHINA KANNADA

ಬ್ಯೂಟಿ ಪಾರ್ಲರ್‌ನಲ್ಲಿದ್ದ ಯುವತಿ ಮೇಲೆ ಆ್ಯಸಿಡ್‌ ಎರಚಿದ ಪ್ರಕರಣ: ಜು.15ರಂದು ಶಿಕ್ಷೆ ಪ್ರಕಟ

Published

on

ಚಿಕ್ಕಮಗಳೂರು: ಆರು ವರ್ಷದ ಹಿಂದೆ ಶೃಂಗೇರಿ ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಯುವತಿಯ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ನಾಲ್ವರು ಆರೋಪಿಗಳ ಮೇಲಿದ್ದ ಆರೋಪ ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಜು.15ರಂದು ಶಿಕ್ಷೆಯ ಪ್ರಮಾಣ ತೀರ್ಪು ಹೊರಬೀಳಲಿದೆ.


ಘಟನೆ ವಿವರ
2015ರ ಎಪ್ರಿಲ್ 18ರಂದು ಶೃಂಗೇರಿಯಲ್ಲಿ ಯುವತಿಯೊಬ್ಬಳ ಮೇಲೆ ಗಣೇಶ್, ಕಬೀರ್, ಮಜೀದ್ ಹಾಗೂ ಪಾಲ್ ಪಿಂಟೋ ಎಂಬವರು ಆ್ಯಸಿಡ್ ಎರಚಿರುವ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದ್ದಾರೆ. ಸದ್ಯ ಆರೋಪಿಗಳು ಪೊಲೀಸರ ವಶದಲ್ಲಿದ್ದು, ಜು.15ರಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದ್ದಾರೆ. ಸರಕಾರಿ ಅಭಿಯೋಜಕಿ ಮಮತಾ ವಾದ ಮಂಡಿಸಿದ್ದರು.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾರಾಟ ಯತ್ನ; ಮೂವರ ಬಂಧನ

Published

on

ಮಂಗಳೂರು : ಬೆಂಗಳೂರು ನಗರದಿಂದ ಎಂಡಿಎಂಎ ಮಾ*ದಕ ವಸ್ತುವನ್ನು ಖರೀದಿಸಿಕೊಂಡು ಬಂದು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 11 ಲಕ್ಷದ 90 ಸಾವಿರ ರೂಪಾಯಿ ಮೌಲ್ಯದ 118.13 ಗ್ರಾಂ ತೂಕದ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್ ಮತ್ತು ಒಂದು ಸ್ವಿಫ್ಟ್‌ ಕಾರು ಸಹಿತ ಒಟ್ಟು 17 ಲಕ್ಷದ 95 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಉಳ್ಳಾಲದ ಬಸ್ತಿಪಡ್ಪು ನಿವಾಸಿ 34 ವರ್ಷದ ಮುಸ್ತಫಾ ಸೀದಿಯಬ್ಬ, ಉಳ್ಳಾಲ ಮಾಸ್ತಿಕಟ್ಟೆಯ ನಿವಾಸಿ 28 ವರ್ಷದ ಮೈಯದ್ದಿ ಮತ್ತು ಮುಕ್ಕಚ್ಚೇರಿಯ 28 ವರ್ಷದ ಮೊಹಮ್ಮದ್ ಶಿಫಾನ್ ಬಂಧಿತ ಆರೋಪಿಗಳು. ಈ ಮೂವರು ಸೇರಿಕೊಂಡು ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ : ತ್ರಿಕೋನ ಪ್ರೇಮಕಥೆ… ಮುಖಕ್ಕೆ ಗುಂ*ಡು ಹಾ*ರಿಸಿ ಯುವತಿಯ ಕೊ*ಲೆ!

ಆರೋಪಿ ಮುಸ್ತಫಾ ಸೀದಿಯಬ್ಬನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಈ ಮಾ*ದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮೂಡುಬಿದಿರೆ: ಖ್ಯಾತ ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಹಿಂಬದಿ ಸವಾರ ಸಾವು

Published

on

ಮೂಡುಬಿದಿರೆ: ಕಾಮಗಾರಿ ಹಂತದಲ್ಲಿರುವ ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಗುರುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ.

ಖ್ಯಾತ ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಚಲಾಯಿಸುತ್ತಿದ್ದ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಹಿಂಬದಿ ಸವಾರ, ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಕೋಟೆ ಬಾಗಿಲಿನ ಶ್ರವಣ್ ಎಸ್. ಸುವರ್ಣ (17)  ಸಾವನ್ನಪ್ಪಿದ್ದಾನೆ.

ಸದಾನಂದ ಸುವರ್ಣ – ರಾಜಶ್ರೀ ದಂಪತಿಯ ಪುತ್ರನಾಗಿರುವ ಶ್ರವಣ್ ಮೂಡುಬಿದಿರೆಯ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇನ್ನು ಅಪಘಾತದಲ್ಲಿ ಸೂರಜ್ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: ಉಡುಪಿ: ಪಿಕಪ್ ವಾಹನ ಚಲಿಸಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಸಾವು

ಕಂಟೆಂಟ್ ಕ್ರಿಯೇಟರ್ ಆಗಿ ಹೆಸರುವಾಸಿಯಾಗಿರುವ ಸೂರಜ್ ಅಂಚನ್ ಹಾಗೂ ಅವರ ಸಂಬಂಧಿ ಶ್ರವಣ್ ಬೈಕ್‌ ನಲ್ಲಿ ತೆರಳುತ್ತಿದ್ದಾಗ ಕಾರ್ಕಳ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ಶ್ರವಣ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Continue Reading

DAKSHINA KANNADA

ಮಂಗಳೂರು: ಆನ್ ಲೈನ್ ಇನ್ಶೂರೆನ್ಸ್‌ ಹೆಸರಿನಲ್ಲಿ ವಂಚನೆ ಪ್ರಕರಣ; ಆರೋಪಿ ಅರೆಸ್ಟ್

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನಿವಾಸಿಯೋರ್ವರಿಗೆ ವಿಮೆ ಮಾಡಿಸುವುದಾಗಿ ನಂಬಿಸಿ ಕ್ರೆಡಿಟ್ ಕಾರ್ಡ್‌ ನಂಬರ್ ಮತ್ತು ಒಟಿಪಿ ಪಡೆದು ಕ್ರೆಡಿಟ್ ಕಾರ್ಡ್ ನಿಂದ 2.37 ಲಕ್ಷ ರೂಪಾಯಿ ಡ್ರಾ ಮಾಡಿ ವಂಚಿಸಿದ ಘಟನೆಯೊಂದು ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿದ ಜಿಲ್ಲಾ ಸೈಬರ್‌ ಅಪರಾಧ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.


ಮಹಾರಾಷ್ಟ್ರ ಮೂಲದ ಹಾಗೂ ಪ್ರಸ್ತುತ ಮಂಡ್ಯ ಕೃಷ್ಣರಾಜ ಪೇಟೆಯಲ್ಲಿ ವಾಸಿಸುತ್ತಿರುವ ಅವಿನಾಶ್‌ ರಮೇಶ್‌ ಗೌಡ (24) ಬಂಧಿತ ಆರೋಪಿಯಾಗಿದ್ದಾನೆ.

ಪುತ್ತೂರು ನಿವಾಸಿ ಯಶೋಧರ ಎಂಬವರಿಗೆ ಅಪರಿಚಿತ ವ್ಯಕ್ತಿಯೋರ್ವ ವಿವಿಧ ಮೊಬೈಲ್‌ ನಂಬರ್ ಗಳಿಂದ ದೂರವಾಣಿ ಕರೆ ಮಾಡಿ, ತಾನು ವಿಮಾ ಕಂಪೆನಿಯೊಂದರಿಂದ ಕರೆ ಮಾಡುತ್ತಿರುವುದಾಗಿ ಹೇಳಿ ವಿಮೆ ಮಾಡಿಸಿ ಕೊಡುವುದಾಗಿ ಹಾಗೂ ಆ ಬಗ್ಗೆ ಹಣ ಪಾವತಿಸುವಂತೆ ತಿಳಿಸಿರುತ್ತಾನೆ. ಆಗ ಯಶೋಧರ ಅವರು ತನಗೆ ವಿಮೆ ಬೇಡ ಎಂದು ನಿರಾಕರಿಸಿದ್ದಾರೆ.

ಆ ಬಳಿಕ ಕರೆ ಮಾಡಿದ ಅಪರಿಚಿತ ವ್ಯಕ್ತಿ ಇನ್ಸುರೆನ್ಸ್‌ ಕ್ಯಾನ್ಸಲ್‌ ಮಾಡುವುದಾಗಿ ತಿಳಿಸಿ, ಯಶೋಧರ ಅವರ ಕ್ರೆಡಿಟ್ ಕಾರ್ಡ್‌ ನಂಬರ್‌ ಮತ್ತು ಒಟಿಪಿ ಪಡೆದು ಕ್ರೆಡಿಟ್ ಕಾರ್ಡ್ ನಿಂದ 2,37,036 ರೂಪಾಯಿ ಹಣವನ್ನು ಬೇರೆ ಖಾತೆಗೆ ವರ್ಗಾಯಿಸಿ ವಂಚನೆ ನಡೆಸಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಗಂಡನಿಗೆ ಗುಲಾಬಿ ಜೊತೆ ಮದ್ಯ ನೀಡಿದ ಮಹಿಳೆ ವಿರುದ್ಧ ಎಫ್‌ಐಆರ್!

ಈ ಬಗ್ಗೆ ಯಶೋಧರ ಅವರು ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮಹಾರಾಷ್ಟ್ರ ಮೂಲದ ಹಾಗೂ ಪ್ರಸ್ತುತ ಮಂಡ್ಯ ಕೃಷ್ಣರಾಜ ಪೇಟೆಯಲ್ಲಿ ವಾಸಿಸುತ್ತಿರುವ ಆರೋಪಿ ಅವಿನಾಶ್‌ ರಮೇಶ್‌ ಗೌಡ ಎಂಬಾತನನ್ನು ಫೆಬ್ರವರಿ 11 ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page