ಆರೋಪಿಗಳ ಕಾರು ಮಾರಾಟ ಮಾಡಿದ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು..!
ಮಂಗಳೂರು: ಆರೋಪಿಗಳ ಜಾಗ್ವಾರ್ ಕಾರನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್ಐ ಆಗಿರುವ, ಮಂಗಳೂರಿನಲ್ಲಿ ಹಿಂದೆ ಸಿಸಿಬಿ ಎಸ್ಐ ಆಗಿದ್ದ ಕಬ್ಬಾಳ್ ರಾಜ್ ಮತ್ತು ಮಂಗಳೂರಿನ ನಾರ್ಕೊಟಿಕ್ ಠಾಣಾ ಇನ್ಸ್ಪೆಕ್ಟರ್ ರಾಮಕೃಷ್ಣ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳಾಗಿದ್ದಾರೆ.
ಪ್ರಕರಣದಲ್ಲಿ ಕಬ್ಬಾಳ್ ರಾಜ್ ನೇರವಾಗಿ ಶಾಮೀಲಾದ ಆರೋಪದಲ್ಲಿದ್ದರೆ, ರಾಮಕೃಷ್ಣ ಅವರು ಪ್ರಕರಣ ಗಂಭೀರವಾಗಿ ತನಿಖೆ ಮಾಡಿ ಮೇಲಾಧಿಕಾರಿಗಳಿಗೆ ವರದಿ ನೀಡದ್ದ ಆರೋಪದ ಎದುರಿಸುತ್ತಿದ್ದಾರೆ.
ಕಬ್ಬಾಳ್ ರಾಜ್ ಅವರು ಇತ್ತೀಚೆಗಷ್ಟೇ ಮುಖ್ಯಮಂತ್ರಿ ಪದಕ ಪಡೆದುಕೊಂಡಿದ್ದರು.
ಮಂಗಳೂರಿನಲ್ಲಿ ನಡೆದ ಬಿಲ್ಡರ್ ಗಳ ವಂಚನೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ ವಶಪಡಿಸಿಕೊಂಡಿದ್ದ ದುಬಾರಿ ಜಾಗ್ವಾರ್ ಕಾರನ್ನು, ಮಂಗಳೂರು ಸಿಸಿಬಿಯಲ್ಲಿ ಎಸ್ಐ ಆಗಿದ್ದ ಕಬ್ಬಾಳ್ ರಾಜ್ ಮತ್ತು ಇತರರು ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಬಳಿಕ ಎಡಿಜಿಪಿ ಪ್ರತಾಪ್ ರೆಡ್ಡಿ, ಮಂಗಳೂರು ಪೊಲೀಸ್ ಕಮೀಷನರ್ ಅವರಲ್ಲಿ ತನಿಖೆ ಮಾಡಿ ವರದಿ ನೀಡಲು ಸೂಚಿಸಿದ್ದರು.
ಅವರು ನೀಡಿದ ವರದಿ ಬಳಿಕಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು.
ಸಿಐಡಿ ಅಧಿಕಾರಿಗಳು ನೀಡಿದ ವರದಿಯ ಹಿನ್ನೆಲೆಯಲ್ಲಿ ಪ್ರಸ್ತುತ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.
ಏನಿದು ಪ್ರಕರಣ..?
ರಮ್ಯಾ ಎಂಬ ಮಹಿಳೆ ನಾಲ್ಕು ಲಕ್ಷ ರೂಪಾಯಿ ವಂಚನೆಯಾಗಿರುವ ಕುರಿತು ಕೇರಳ ಮೂಲದ ಕನ್ ಸ್ಟ್ರಕ್ಷನ್ ಕಂಪೆನಿ ವಿರುದ್ದ ಸಿಇಎನ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆಗೆ ಇಳಿದ ಸಿಸಿಬಿ ಪಿಎಸ್ ಐ ಕಬ್ಬಾಳ್ ರಾಜ್ ನೇತೃತ್ವದ 9 ಮಂದಿ ಅಧಿಕಾರಿಗಳ ತಂಡ ಆರೋಪಿಗಳಿಗೆ ಸೇರಿದ ಬ್ಯಾಂಕ್ ಖಾತೆಯನ್ನು ಸೀಝ್ ಮಾಡಿತ್ತು.
” alt=”” aria-hidden=”true” />
ನಂತರದಲ್ಲಿ ಆರೋಪಿಗಳಿಗೆ ಸೇರಿದ ಪೋರ್ಷ್ ಕಾರನ್ನು ಬೆಳ್ತಂಗಡಿ, ಬಿಎಂಡಬ್ಲ್ಯೂ ಕಾರನ್ನು ಕಂಕನಾಡಿ ಹಾಗೂ ಜಗ್ವಾರ್ ಕಾರನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿತ್ತು.
ಆದರೆ ಕಾರನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳನ್ನು ಕಾರಿನ ಕೀಯನ್ನು ತನಿಖಾಧಿಕಾರಿ ರಾಮಕೃಷ್ಣ ಅವರ ಮುಂದೆ ಹಾಜರು ಪಡಿಸಿರಲಿಲ್ಲ. ಅಲ್ಲದೇ ಐಶಾರಾಮಿ ಕಾರನ್ನು ಕಳೆದ ಅಕ್ಟೊಬರ್ ವರೆಗೂ ಸ್ವಂತಃಕ್ಕೆ ಬಳಕೆ ಮಾಡಿಕೊಂಡಿದ್ದರು.
ಅಷ್ಟೇ ಅಲ್ಲದೇ ಸುಮಾರು 80 ಲಕ್ಷ ಬೆಲೆ ಬಾಳುವ ಜಾಗ್ವಾರ್ ಕಾರನ್ನು ಬೆಂಗಳೂರು ಮೂಲದ ತೇಜ್ ಬಹದ್ದೂರ್ ಸಿಂಗ್ ಎಂಬವರಿಗೆ ಸುಮಾರು 18 ಲಕ್ಷ ರೂಪಾಯಿಗೆ ಮಧ್ಯವರ್ತಿ ದಿವ್ಯದರ್ಶನ್ ಎಂಬಾತನ ಮೂಲಕ ಮಾರಾಟ ಮಾಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರು ನಗರ ವ್ಯಾಪ್ತಿಯ ಕೇಸುಗಳ ಕಡತ ಪರಿಶೀಲನೆಯ ವೇಳೆಯಲ್ಲಿ ಈ ವಿಷಯ ಬಯಲಿಗೆ ಬಂದಿತ್ತು.
ಕಾರುಗಳ ಬಗ್ಗೆ ಮಾಹಿತಿ ಕೇಳಿದಾಗ ಪೋರ್ಷ್ ಹಾಗು ಬಿಎಂಡಬ್ಲ್ಯು ಕಾರು ಮಂಗಳೂರಲ್ಲಿ ಪತ್ತೆಯಾಗಿತ್ತು. ಆದರೆ ಜಾಗ್ವಾರ್ ಕಾರು ನಾಪತ್ತೆಯಾಗಿದ್ದು, ಈ ಬಗ್ಗೆ ತನಿಖೆಗೆ ಮುಂದಾಗುತ್ತಿದ್ದಂತೆಯೇ ಕಾರು ಮಾರಾಟ ವಾಗಿರುವುದು ಬೆಳಕಿಗೆ ಬಂದಿತ್ತು.
ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ತನಿಖಾಧಿಕಾರಿ ರಾಮಕೃಷ್ಣ, ಪಿಎಸ್ಐ ಕಬ್ಬಾಳ್ ರಾಜ್ ಸೇರಿದಂತೆ ನಾಲ್ವರು ಪೊಲೀಸರು ಹಾಗೂ ಮಧ್ಯವರ್ತಿಯ ವಿರುದ್ದ ವರದಿ ಸಲ್ಲಿಕೆಯಾಗಿದ್ದು, ಸಿಐಡಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಮಂಗಳೂರು/ ಮದೀನಾ ಮುನವ್ವರ : ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಭಾರತದಿಂದ ಬಂದ ಹಜ್ಜಾಜಿಗಳ ಮೊದಲ ಎರಡು ವಿಮಾನವು ಮದೀನಾ ಮುನವ್ವರದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಇಂಟರ್ನ್ಯಾಷನಲ್ ಏರ್ಪೋರ್ಟ್ ತಲುಪಿದೆ. ಇಂದು(ಎ.29) ಭಾರತದ ಹೈದರಾಬಾದ್ ಹಾಗೂ ಲಕ್ನೋದಿಂದ 578 ಹಾಜಿಗಳು ಆಗಮಿಸಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್‌ನ ಹಜ್ಜ್ ವಾಲೇಂಟಿಯರ್ ಕೋರ್‌ನ ಸದಸ್ಯರು ಹಜ್ಜಾಜಿಗಳನ್ನು ಆತ್ಮೀಯತೆಯಿಂದ ಬರಮಾಡಿಕೊಂಡರು.
ಇಂಡಿಯನ್ ಅಂಬಾಸಿಡರ್ ಡಾ.ಸುಹೇಲ್ ಅಜಾಝ್ ಖಾನ್, ಇಂಡಿಯನ್ ಕೌನ್ಸಿಲ್ ಜನರಲ್(ಜಿದ್ದಾ) ಫಹದ್ ಅಹ್ಮದ್ ಖಾನ್ ಸುರಿ ಸೇರಿದಂತೆ ಇಂಡಿಯನ್ ಎಂಬಸಿಯ ವಿವಿಧ ಅಧಿಕಾರಿಗಳು ಹಜ್ಜಾಜಿಗಳನ್ನು ಸ್ವಾಗತಿಸಿದರು.
ಕೆಸಿಎಫ್ ಹೆಚ್.ವಿ.ಸಿ ಸದಸ್ಯರು ಹಜ್ಜಾಜಿಗಳನ್ನು ಮದೀನಾ ವಿಮಾನ ನಿಲ್ದಾಣ ಹಾಗೂ ಅವರು ತಂಗುವ ಹೋಟೆಲ್‌ಗೆ ತೆರಳಲು ಸಹಕರಿಸಿದರು. ಹಾಜಿಗಳಿಗೆ ಹೆಚ್.ವಿ.ಸಿ ವೆಲ್ಕಂ ಕಿಟ್, ಖರ್ಜೂರ ನೀಡಿ ಸತ್ಕರಿಸಿದರು. ಈ ವೇಳೆ ಮದೀನಾ ಮುನವ್ವರದ ಸಾಂಪ್ರದಾಯಿಕ ಶೈಲಿಯಲ್ಲಿ ಝಂಝಂ ವಿತರಿಸಲಾಯಿತು. ಹಜ್ಜಾಜಿಗಳ ಮೇಲೆ ಹೂವಿನ ಎಸಲುಗಳನ್ನು ಸುರಿಸುವ ಮೂಲಕ ಭವ್ಯವಾಗಿ ಸ್ವಾಗತಿಸಲಾಯಿತು. ಅಶಕ್ತ ಹಜ್ಜಾಜಿಗಳನ್ನು ವೀಲ್ ಚೇರ್ ಮೂಲಕ ಕೆ.ಸಿ.ಎಫ್ ಹೆಚ್.ವಿ.ಸಿ ಕಾರ್ಯಕರ್ತರು ಹೋಟೆಲ್ ತಲುಪಿಸಿದರು.
ಇಂದು ರಾತ್ರಿ 7.30 ವೇಳೆಗೆ ಮುಂಬೈಯಿಂದ 442ಹಾಜಿಗಳು ಆಗಮಿಸಲಿದ್ದಾರೆ. ರಾಜ್ಯದ 956 ಹಜ್ಜಾಜಿಗಳು ನಾಳೆ ಪವಿತ್ರ ನಗರ ಮದೀನಾ ಮುನವ್ವರ ತಲುಪಲಿದ್ದು, 378 ಹಾಜಿಗಳು ನಾಳೆ ಬೆಳಗ್ಗಿನ ವೇಳೆ, 289 ಹಾಜಿಗಳು ಮಧ್ಯಾಹ್ನ ವೇಳೆ, ಹಾಗೂ ಸಂಜೆ 289 ಹಾಜಿಗಳು ಮದೀನಾ ಮುನವ್ವರ ತಲುಪಲಿದ್ದು, ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ವಾಲೆಂಟಿಯರ್ ಕೋರ್ ಸದಸ್ಯರು ಮಕ್ಕತುಲ್ ಮುಕರ್ರಮ ಹಾಗೂ ಮದೀನಾ ಮುನವ್ವರದಲ್ಲಿ ಹಜ್ಜಾಜಿಗಳಿಗೆ ಸಹಕರಿಸಲು ಸನ್ನದ್ಧರಾಗಿದ್ದಾರೆ.
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಮಹಿಳೆಯನ್ನು ಕಾಡಾನೆ ಬಲಿ ಪಡೆದುಕೊಂಡ ಜಾಗಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದ್ದಾರೆ.
ಇಂದು ಮುಂಜಾನೆ ಕಾರ್ಮಿಕ ಮಹಿಳೆ ರಬ್ಬರ್ ಟ್ಯಾಪಿಂಗ್ ಮಾಡಲು ಹೋಗಿದ್ದ ವೇಳೆ ಕಾಡಾನೆ ದಾಳಿ ನಡೆಸಿತ್ತು. ಕೆಎಪ್‌ಡಿಸಿ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆಯ ಕುಟುಂಬವನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದಾರೆ. ಅರಣ್ಯ ಇಲಾಖೆಯಿಂದ ಮಹಿಳೆಯ ಕುಟುಂಬಕ್ಕೆ 15 ಲಕ್ಷ ಪರಿಹಾರ ಕೊಡಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.
ಕೆಎಫ್‌ಡಿಸಿ ಯಿಂದಲೂ ಪರಿಹಾರ ಒದಗಿಸುವುದಾಗಿ ಹೇಳಿದ ಶಾಸಕರು ತಮ್ಮ ವ್ಯಯಕ್ತಿಕ ನೆಲೆಯಲ್ಲಿ ಹತ್ತು ಸಾವಿರ ರೂಪಾಯಿ ನೀಡಿದ್ದಾರೆ. ಈ ವೇಳೆ ಕಾಡಾನೆ ಹಾವಳಿಯ ಬಗ್ಗೆ ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಆನೆಯನ್ನು ಓಡಿಸುವ ಅಥವಾ ಸೆರೆ ಹಿಡಿಯುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಶಾಸಕರಲ್ಲಿ ಆಗ್ರಹಿಸಿದ್ದಾರೆ.
ಮಂಗಳೂರು : ಏಪ್ರಿಲ್ 27 ರಂದು ಕುಡುಪು ಸಮೀಪದ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಅದೊಂದು ಕೊಲೆ ಎಂಬುದು ಸಾಬೀತಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು 15 ಯುವಕರನ್ನು ಕೊಲೆ ಪ್ರಕರಣದ ಅಡಿಯಲ್ಲಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಸುಮಾರು 25 ಕ್ಕೂ ಹೆಚ್ಚು ಮಂದಿ ಆರೋಪಿಗಳಿದ್ದು ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಅಪರಚಿತ ವ್ಯಕ್ತಿಯನ್ನು ಭೀಕರವಾಗಿ ಥಳಿಸಿ ಕಾಲಿನಿಂದ ತುಳಿದು ಸಾಯಿಸಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಅಲ್ಲಿದ್ದ ಕೆಲವರು ತಡೆಯಲು ಯತ್ನಿಸಿದ್ರೂ ಬಿಡದೆ ಯುವಕನನ್ನು ಹೊಡೆದು ಸಾಯಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರು ತಿಳಿಸಿದ್ದಾರೆ.
ಮೃತನ ಗುರುತು ಪತ್ತೆ ಹಚ್ಚುವ ಸಲುವಾಗಿ, ಮೃತನ ಫೋಟೋಗಳನ್ನು ವ್ಯಾಪಕವಾಗಿ ಹಂಚಲಾಗಿತ್ತು. ಘಟನೆಯ ಸಮಯದಲ್ಲಿ ಸ್ಥಳದಲ್ಲಿದ್ದ ಸಾಕ್ಷಿದಾರರು ಮತ್ತು ಅನುಮಾನಿತ ವ್ಯಕ್ತಿಗಳನ್ನು ವಿಚಾರಣೆ ಮಾಡುವ ಮತ್ತು ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಹಾಗೂ ಮೊಬೈಲ್/ಟವರ್ ಡಂಪ್ ಡೇಟಾ ಸಂಗ್ರಹಿಸಿ ವಿಶ್ಲೇಷಿಸಲು ಹಲವು ತಂಡಗಳನ್ನು ರಚಿಸಲಾಯಿತು.
ತನಿಖೆ ವೇಳೆ ಲಭ್ಯವಾದ ಮಾಹಿತಿ ಹಾಗೂ ಸ್ಥಳೀಯ ವ್ಯಕ್ತಿಗಳ ಭಾಗವಹಿಸಿರುವ ಬಗ್ಗೆ ಅನುಮಾನಗೊಂಡು ಅಪರಿಚಿತ ಮೃತದೇಹದ ಶವ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ನೀಡಿದ ಪ್ರಾಥಮಿಕ ವರದಿ ಪ್ರಕಾರ, ಮೃತನ ಬೆನ್ನು ಭಾಗದಲ್ಲಿ ಬಹಳಷ್ಟು ಬಲವಾದ ಹೊಡೆತದ ಗಾಯಗಳ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿದೆ.
ಸುಮಾರು 25 ಕ್ಕೂ ಹೆಚ್ಚು ವ್ಯಕ್ತಿಗಳು ಭಾಗವಹಿಸಿರುವ ಸಂಶಯವಿದ್ದು, ಈಗಾಗಲೇ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ತಿರುವೈಲ್ ಗ್ರಾಮದ ಸಚಿನ್ ಟಿ, ದೇವದಾಸ್, ಮಂಜುನಾಥ್, ನೀರು ಮಾರ್ಗದ ಸಾಯಿದೀಪ್, ಕುಡುಪುವಿನ ನಿತೇಶ್ ಕುಮಾರ್ ಅಲಿಯಾಸ್ ಸಂತೋಷ್, ದೀಕ್ಷಿತ್ ಕುಮಾರ್, ವಾಮಂಜೂರಿನ ಸಂದೀಪ್, ವಿವಿಯನ್ ಆಳ್ವಾರೀಸ್, ಶ್ರೀದತ್ತ, ಬಿಜೈಯ ರಾಹುಲ್, ಪ್ರದೀಪ್ ಕುಮಾರ್, ಪದವು ಗ್ರಾಮದ ಮನೀಷ್ ಶೆಟ್ಟಿ, ಧನುಷ್, ದೀಕ್ಷಿತ್, ಕಿಶೋರ್ ಕುಮಾರ್ ಬಂಧಿತರು. ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡಿ ಬಂಧಿಸಲಾಗುವುದು ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.