Connect with us

bangalore

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ

Published

on

ಬೆಂಗಳೂರು: 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಳವಳ್ಳಿ ಮೂಲದ ಸಿದ್ದು ಅಲಿಯಾಸ್‌ ನಾಗರಾಜ್‌ ಬಂಧಿತ ಆರೋಪಿ.


ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ 19.5 ಲಕ್ಷ ರೂಪಾಯಿ ನಗದು ಮತ್ತು 711 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ನಾಗರಾಜ್‌ ಸುಮಾರು ಏಳೆಂಟು ವರ್ಷಗಳಿಂದ ಕಳ್ಳತನವನ್ನೇ ಮಾಡಿಕೊಂಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ವಿರೋಶ್ ಮದುವೆಯ ಸಂಭ್ರಮ; 44 ಶಾಲೆಗಳ ಮಕ್ಕಳ ಬಾಳಿಗೆ ಬೆಳಕಾದ ವಿಜಯ್-ರಶ್ಮಿಕಾ ಜೋಡಿ!

ಈತ ಮಾದಪ್ಪನ ಬೆಟ್ಟಕ್ಕೆ ದೇವರ ದರ್ಶನ ಪಡೆಯಲು ಹೋಗಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನ ವಿರುದ್ಧ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.

bangalore

6 ತಿಂಗಳಿನಿಂದ ಒಂದೇ ಮನೆಗೆ ಸ್ಕೆಚ್, 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಯುವಕ ಅರೆಸ್ಟ್

Published

on

ಬೆಂಗಳೂರು: ಮನೆಯವರು ಅಮೇರಿಕಾದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ  ಕಳ್ಳನೋರ್ವ ಸುಮಾರು 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿನಿಮೀಯ ಶೈಲಿಯಲ್ಲಿಕಳ್ಳತನಗೈದ ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ದಂಪತಿ ಅಮೇರಿಕಾದಲ್ಲಿ ಸೆಟಲ್ ಆಗಿರೋದನ್ನು ಖಚಿತಪಡಿಸಿಕೊಂಡು  ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ.

ಲಾಕರ್ ಓಪನ್ ಮಾಡಿ 1.8 ಕೆಜಿಯ ಚಿನ್ನಾಭರಣ, ಡೈಮಂಡ್ ಹಾಗೂ ನಗದು ಎಲ್ಲವನ್ನು ದೋಚಿಕೊಂಡು ಹೋಗಿದ್ದ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಚಿನ್ನಾಭರಣ ಸಿಕ್ಕ ಖುಷಿಗೆ ಯಾರಿಗೂ ಹೇಳದೆ ಕೇಳದೆ ನೇರವಾಗಿ ರಾಜಸ್ಥಾನಕ್ಕೆ ಚಿನ್ನಾಭರಣ ಕೊಂಡೊಯ್ದು, ಮನೆಯಲ್ಲಿ ಬಚ್ಚಿಟ್ಟಿದ್ದ.

ಮನೆಯ ಸಿಸಿಟಿವಿಯನ್ನ ಅಮೆರಿಕದಲ್ಲಿದ್ದ ದಂಪತಿ ಮೊಬೈಲ್ ನಲ್ಲಿ ಪರಿಶೀಲಿಸಿದ ಸಂದರ್ಭ ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಸಿಸಿಟಿವಿ ಆಧರಿಸಿ ಆರೋಪಿ ವೇಲಾರಾಮ್‌ ನನ್ನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

Continue Reading

bangalore

ಬೆಂಗಳೂರು ಭೀಕರತೆ: ಕೊಲೆ ಆರೋಪಿಯ ಮೇಲೆ 68 ಬಾರಿ ಮಚ್ಚಿನಿಂದ ದಾಳಿ, ಬದುಕಿದ್ದೇ ಪವಾಡ!

Published

on

ಬೆಂಗಳೂರು: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಭೀಕರ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ.


ಮಾರ್ಚ್ 9ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತೋಷ್ ಎಂಬ ಕೊಲೆ ಆರೋಪಿಯ ಮೇಲೆ ಶರತ್ ಮತ್ತು ಆತನ ಗ್ಯಾಂಗ್ ಮಾರಕಾಸ್ತ್ರಗಳಿಂದ ಸುಮಾರು 68 ಬಾರಿ ಮನಸೋಇಚ್ಛೆ ಕೊಚ್ಚಿ ಹಲ್ಲೆ ನಡೆಸಿದ್ದಾರೆ. ಬರೋಬ್ಬರಿ 68 ಬಾರಿ ಮಚ್ಚಿನಿಂದ ಏಟು ತಿಂದಿದ್ದರೂ ಸಂತೋಷ್ ಬದುಕುಳಿದಿರುವುದು ಪವಾಡವೇ ಸರಿ ಎಂದು ಹೇಳಲಾಗುತ್ತಿದೆ. ಹಲ್ಲೆ ನಡೆಸಿದ ಬಳಿಕ ದುಷ್ಕರ್ಮಿಗಳು ಸ್ಥಳದಲ್ಲೇ ಡ್ಯಾನ್ಸ್ ಮಾಡುವ ಮೂಲಕ ತಮ್ಮ ವಿಕೃತಿಯನ್ನು ಪ್ರದರ್ಶಿಸಿದ್ದಾರೆ.

ಆರೋಪಿಗಳ ಪೈಕಿ ಒಬ್ಬನ ಸಹೋದರನ ಹತ್ಯೆಗೆ ಪ್ರತೀಕಾರವಾಗಿ, ಅಗ್ರಹಾರ ದಾಸರಹಳ್ಳಿ ನಿವಾಸಿ ಸಂತೋಷ್ ಮೇಲೆ ಶರತ್ ಮತ್ತು ಆತನ ಸ್ನೇಹಿತರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. 2024ರಲ್ಲಿ ಸಂತೋಷ್​​ನಿಂದ ಮೋಹನ್ ಎಂಬಾತನ ಕೊಲೆ ನಡೆದಿತ್ತು. ಕಾರಿನ ವಿಚಾರಕ್ಕೆ ನಡೆದ ಗಲಾಟೆ ಬಡೆದಿದ್ದು, ಮಂಡ್ಯದಲ್ಲಿ ಕುಡಿದು ಕೊಳ್ಳೇಗಾಲಕ್ಕೆ ಹೋಗಿ ಗಲಾಟೆ ಮಾಡಿದ್ದ ಸಂತೋಷ್ ಮೋಹನ್‌ಗೆ ಕಾಲಿನಿಂದ ಒದ್ದು ಕೊಲೆ ಮಾಡಿದ್ದಲ್ಲದೇ, ಬಳಿಕ ಕೊಳ್ಳೆಗಾಲದ ಕೆರೆಯಲ್ಲಿ ಮೃತದೇಹವನ್ನು ಬಿಸಾಡಿ ಹೋಗಿದ್ದ ಎನ್ನಲಾಗಿದೆ.

ಇದನ್ನೂ ಓದಿ: ದ್ವಿಚಕ್ರ ವಾಹನಕ್ಕಾಗಿ ಪ್ರೇಯಸಿ ಕುಟುಂಬಕ್ಕೆ ಬೆಂಕಿ ಹಚ್ಚಿದ ಕಿರಾತಕ; ಚಿಕಿತ್ಸೆ ಫಲಿಸದೆ ತಾಯಿ ಸಾವು!

ಈ ಕುರಿತು ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ಯುಡಿಆರ್ ಆಗಿತ್ತು. ನಂತರ ಕೊಲೆ ಪ್ರಕರಣ ದಾಖಲಿಸಿ ಆರೋಪಿ ಸಂತೋಷ್‌ನನ್ನು ಬಂಧಿಸಿ, ಜೈಲಿಗಟ್ಟಿದ್ರು. ಈ ಪ್ರಕರಣದಿಂದ ಜೈಲಿನಲ್ಲಿ ನಾಲ್ಕು ವರ್ಷ ಇದ್ದು, ಇತ್ತೀಚೆಗಷ್ಟೇ ಜಾಮೀನು ಮೇಲೆ ಸಂತೋಷ್ ಹೊರ ಬಂದಿದ್ದ ಎನ್ನಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಆರೋಪಿ ಶರತ್ ಅಂಡ್ ಗ್ಯಾಂಗ್ ಕುಡಿದು ಸಂತೋಷ್‌ ಮೇಲೆ ದಾಳಿ ನಡೆಸಿದ್ದಾರೆ. ಪ್ರಸ್ತುತ ಮಾಗಡಿ ರಸ್ತೆ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Continue Reading

bangalore

ದ್ವಿಚಕ್ರ ವಾಹನಕ್ಕಾಗಿ ಪ್ರೇಯಸಿ ಕುಟುಂಬಕ್ಕೆ ಬೆಂಕಿ ಹಚ್ಚಿದ ಕಿರಾತಕ; ಚಿಕಿತ್ಸೆ ಫಲಿಸದೆ ತಾಯಿ ಸಾವು!

Published

on

ಬೆಂಗಳೂರು: ದ್ವಿಚಕ್ರ ವಾಹನ ನೀಡದಿದ್ದಕ್ಕೆ ಪ್ರೇಯಸಿ ಮತ್ತು ಆಕೆಯ ಪೋಷಕರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ, ಗಂಭೀರ ಗಾಯಗೊಂಡಿದ್ದ ತಾಯಿ ಮಂಜುಳಾ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಮಂಜುಳಾ(43) ಮೃತಪಟ್ಟವರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ತೀವ್ರ ಸುಟ್ಟ ಗಾಯಗಳಿಂದಾಗಿ ಮಾರ್ಚ್ 11ರಂದು ನಿಧನರಾದರು. ಗಂಭೀರವಾಗಿ ಗಾಯಗೊಂಡಿರುವ ಪ್ರೇಯಸಿ ಸುಮಲತಾ(27) ಹಾಗೂ ತಂದೆ ಶ್ರೀರಾಮ್(48)ಗೆ ಚಿಕಿತ್ಸೆ ಮುಂದುವರೆದಿದೆ.

ಈ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಆರೋಪಿ ಮಹಾಲಕ್ಷ್ಮಿ ಲೇಔಟ್‌ನ ಆಟೋ ಚಾಲಕ ಪಾಂಡು ಅಲಿಯಾಸ್ ಚಂದು(32) ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಚಂದು ಮತ್ತು ಸುಮಲತಾ ಮೂರು ವರ್ಷಗಳ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಭೇಟಿಯಾಗಿದ್ದು, ಬಳಿಕ ಪ್ರೀತಿಗೆ ತಿರುಗಿತ್ತು. ಅವರು ಸ್ವಲ್ಪ ಕಾಲ ಒಟ್ಟಿಗೆ ವಾಸಿಸುತ್ತಿದ್ದು, ಕಳೆದ ವರ್ಷ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಬಳಿಕ ಇಬ್ಬರ ಮಧ್ಯೆ ಪದೇ ಪದೇ ಜಗಳವಾಗುತ್ತಿದ್ದರಿಂದ ಸುಮಲತಾ ತವರೂರಿಗೆ ತೆರಳಿದ್ದರು.

ಇದನ್ನೂ ಓದಿ: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್: ಇಬ್ಬರ ದುರ್ಮರಣ

ಚಂದು ಅವರ ಮನೆಗೆ ಬಂದು ಅವರು ನೀಡಿದ್ದ ದ್ವಿಚಕ್ರ ವಾಹನವನ್ನು ಹಿಂತಿರುಗಿಸುವಂತೆ ಒತ್ತಾಯಿಸಿದರು. ಆಕೆಯ ಕುಟುಂಬ ನಿರಾಕರಿಸಿದಾಗ, ಜಗಳ ಭುಗಿಲೆದ್ದಿತು. ಕೋಪದಲ್ಲಿ, ಸುಮಲತಾ ಮತ್ತು ಅವರ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page