Connect with us

ಕ್ಯಾನ್ಸರ್‌ ವಿರುದ್ದ ಹೋರಾಡಿ ಪ್ರಾಣ ತೆತ್ತ ಖ್ಯಾತ ನಟ ಇರ್ಫಾನ್​ ಖಾನ್​..!

Published

on

ಕ್ಯಾನ್ಸರ್‌ ವಿರುದ್ದ ಹೋರಾಡಿ ಪ್ರಾಣ ತೆತ್ತ ಖ್ಯಾತ ನಟ ಇರ್ಫಾನ್​ ಖಾನ್​..!

ಮುಂಬೈ : ನ್ಯೂರೋ ಎಂಡೋಕ್ರೈನ್ ಟ್ಯೂಮರ್ ಎನ್ನುವ ಅಪರೂಪದ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಖ್ಯಾತ ಬಾಲಿವುಡ್‌ ನಟ ಇರ್ಫಾನ್​ ಖಾನ್ ಇಂದು ಬೆಳಗ್ಗೆ ಮುಂಬೈ ಖಾಸಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅವರಿಗೆ 54 ವರ್ಷ ವಯಸ್ಸಾಗಿತ್ತು. ‘ನ್ಯೂರೋ ಎಂಡೋಕ್ರೈನ್ ಟ್ಯೂಮರ್’ ಇದು ಕ್ಯಾನ್ಸರ್​ನ ಒಂದು ಅಪರೂಪದ ವಿಧವಾಗಿದೆ.

ದೇಹದ ವಿವಿಧ ಭಾಗಗಳ ಮೇಲೆ ಪರಿಣಾಮ ಬೀರುವ ಅಪರೂಪದ ಕ್ಯಾನ್ಸರ್ ಇದಾಗಿದ್ದು. ಈ ಕಾಯಿಲೆಗೆ ಇರ್ಫಾನ್ ಖಾನ್ ಲಂಡನ್​ನಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಸ್ವಲ್ಪ ಗುಣಮುಖರಾಗಿದ್ದ ಅವರು ಭಾರತಕ್ಕೆ ವಾಪಾಸಾಗಿದ್ದರು.

ಆದರೆ, ಈಗ ಮತ್ತೆ ಅವರ ಆರೋಗ್ಯ ಗಂಭೀರವಾಗಿತ್ತು. ಹೀಗಾಗಿ ಸೋಮವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಶನಿವಾರವಷ್ಟೇ ಇರ್ಫಾನ್ ಖಾನ್ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು.

ಇರ್ಫಾನ್​ ತಾಯಿಗೆ 95 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ರಾಜಸ್ಥಾನದ ಜೈಪುರದಲ್ಲಿರುವ ಅವರ ತಾಯಿ ಮೃತಪಟ್ಟಿದ್ದರು. ತಾಯಿಯನ್ನು ಕಳೆದುಕೊಂಡ ದಿನ ನಟ ಇರ್ಫಾನ್ ಖಾನ್ ಮುಂಬೈಯಲ್ಲಿ ಉಳಿದಿದ್ದರು.

ಕೊರೋನಾ ಲಾಕ್​​ಡೌನ್​​ನಿಂದಾಗಿ ಜೈಪುರಕ್ಕೆ ತೆರಳಲಾಗದೆ ವಿಡಿಯೋ ಕರೆಯ ಮೂಲಕ ತಾಯಿಯ ಅಂತ್ಯ ಸಂಸ್ಕಾರವನ್ನು ವೀಕ್ಷಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಇರ್ಫಾನ್​ ಮೃತಪಟ್ಟಿದ್ದಾರೆ. ಇನ್ನು ಅಪರೂಪದ ಈ ನಟನ ಅಕಾಲಿಕ ನಿಧನಕ್ಕೆ ಬಾಲಿವುಡ್‌ ಹಿರಿಯ ನಟ ಅಮಿತಾಭ್ ಬಚ್ಚನ್ ಸಹಿತ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page