Connect with us

LATEST NEWS

ಪಂಜಾಬ್‌ ಚುನಾವಣೆಯಲ್ಲಿ ನಟ ಸೋನು ಸೂದ್‌ ತಂಗಿಗೆ ಸೋಲು

Published

on

ಚಂಡೀಗಡ: ಪಂಜಾಬ್‌ ಚುನಾವಣೆಯಲ್ಲಿ ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಅವರು ಪಂಜಾಬ್‌ನ ‘ಮೊಗಾ’ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ವಿರುದ್ಧ ಸೋಲನುಭವಿಸಿದ್ದಾರೆ.


‘ಮೊಗಾ’ದಲ್ಲಿ ಎಎಪಿಯ ಡಾ. ಅಮನ್‌ದೀಪ್ ಕೌರ್ ಆರೋರ 59,149 ಮತ ಗಳಿಸಿ ಮುನ್ನಡೆ ಕಾಯ್ದುಕೊಂಡಿದ್ದರೆ, ಮಾಳವಿಕಾ ಸೂದ್ 38,234 ಮತ ಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಶಿರೋಮಣಿ ಅಕಾಲಿ ದಳದ ಅಭ್ಯರ್ಥಿಗಳು ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ. ಮಾಳವಿಕಾ ಸೂದ್ ಅವರು ಜನವರಿ 10ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

DAKSHINA KANNADA

ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮ*ಹತ್ಯೆ

Published

on

ಪುತ್ತೂರು: 7 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚಿಕ್ಕಪುತ್ತೂರಿನಲ್ಲಿ ನಡೆದಿದೆ.

 

ರೇಶ್ಮಾ(28) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸುರತ್ಕಲ್ ಮೂಲದ ರೇಶ್ಮಾ ನಾಲ್ಕು ವರ್ಷಗಳ ಹಿಂದೆಯಷ್ಟೇ ಚಿಂತನ್ ಅವರೊಂದಿಗೆ ವಿವಾಹವಾಗಿದ್ದರು. ಅಲ್ಲದೇ ಈ ದಂಪತಿಗೆ ಓರ್ವ ಪುತ್ರಿಯೂ ಇದ್ದಾಳೆ. ಏಳು ತಿಂಗಳ ಗರ್ಭಿಣಿ ಆಗಿದ್ದ ಈಕೆ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಬೈಕಂಪಾಡಿಯಲ್ಲಿ ರಸ್ತೆಗೆ ಉರುಳಿದ ಮರ; ತಪ್ಪಿದ ಅನಾಹುತ

ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Continue Reading

LATEST NEWS

ಅಹಮದಾಬಾದ್ ವಿಮಾನ ದುರಂತ; ಕೊನೆಗೂ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

Published

on

ಮಂಗಳೂರು/ಅಹಮದಾಬಾದ್: ಕಳೆದ ಗುರುವಾರ ಅಹಮದಾಬಾದ್‌ನಲ್ಲಿ ಪತನಗೊಂಡಿದ್ದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನದ ಎರಡನೆಯ ಬ್ಲ್ಯಾಕ್ ಬಾಕ್ಸ್ ಭಾನುವಾರ ಪತ್ತೆಯಾಗಿದೆ.


ಗುಜರಾತ್​​ನ ಅಹಮದಾಬಾದ್​​ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಏರ್​​ಇಂಡಿಯಾ ವಿಮಾನದಲ್ಲಿದ್ದ ಎರಡು ಬ್ಲ್ಯಾಕ್ಸ್​ಬಾಕ್ಸ್​ಗಳ ಪೈಕಿ ಎರಡನೇ ಬ್ಲ್ಯಾಕ್​ಬಾಕ್ಸ್ ಕೂಡ​ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಭಾನುವಾರ ಪತ್ತೆಯಾಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ಮಾಹಿತಿ ನೀಡಿದ್ದಾರೆ. ವಿಮಾನದ ಎರಡೂ ಬ್ಲ್ಯಾಕ್ ಬಾಕ್ಸ್ ಗಳು ದೊರೆತಿರುವುದರಿಂದ ತನಿಖಾಧಿಕಾರಿಗಳಿಗೆ ಅಪಘಾತದ ಕಾರಣವನ್ನು ಕಂಡುಹಿಡಿಯುವುದು ಸುಲಭವಾಗುತ್ತದೆ.

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

ಎರಡನೇ ಬ್ಲ್ಯಾಕ್‌ ಬಾಕ್ಸ್​ನಿಂದ ಘಟನೆಯ ಪ್ರತಿ ಸೆಕೆಂಡ್‌ನಲ್ಲಿ ಏನಾಗಿತ್ತು ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ಇದು ಕಾಕ್‌ಪಿಟ್‌ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ. ಎಲ್ಲಾ ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.

 

Continue Reading

LATEST NEWS

ಬೈಕಂಪಾಡಿಯಲ್ಲಿ ರಸ್ತೆಗೆ ಉರುಳಿದ ಮರ; ತಪ್ಪಿದ ಅನಾಹುತ

Published

on

ಮಂಗಳೂರು: ಭಾರೀ ಗಾಳಿ-ಮಳೆಗೆ ಮಂಗಳೂರು ಮತ್ತು ಹೊರ ವಲಯದಲ್ಲಿ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ.

ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ನಿನ್ನೆ ಸಂಜೆ ಮಳೆಯೊಂದಿಗೆ ಬೀಸಿದ ಗಾಳಿಗೆ ರಸ್ತೆಯ ಬದಿಯ ಮರವೊಂದು ಉರುಳಿ ಬಿದ್ದು, ಸುಮಾರು 20 ನಿಮಿಷಗಳ ಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಇದನ್ನೂ ಓದಿ: ದೇರಳಕಟ್ಟೆ: ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ; 147 ವಿದ್ಯಾರ್ಥಿಗಳು ಅಪಾಯದಿಂದ ಪಾರು

ಸ್ಥಳೀಯರು ರಸ್ತೆಯ ಮೇಲೆ ಬಿದ್ದಿದ್ದ ಮರದ ಗೆಲ್ಲುಗಳನ್ನು ತುಂಡರಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಮರ ಉರುಳುವಾಗ ರಸ್ತೆಯಲ್ಲಿ ವಾಹನಗಳ ಸಂಚಾರ ಕಡಿಮೆ ಇದ್ದ ಕಾರಣ ಭಾರೀ ಅನಾಹುತ ತಪ್ಪಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page