Connect with us

LATEST NEWS

ಆಂಧ್ರಪ್ರದೇಶ: ಭೀಕರ ಬಸ್‌ ಅಪಘಾತ; 9 ಪ್ರಯಾಣಿಕರು ಸಾವು

Published

on

ಅಲ್ಲೂರು: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ, ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿವೆ. ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ಈ ಭೀಕರ ಅಪಘಾತ ನಡೆದಿದೆ. ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಏಳು ಮಂದಿಯನ್ನು ಚಿಂತೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತೀಕ್ಷ್ಣವಾದ ತಿರುವಿನಲ್ಲಿ ಸಾಗುವಾಗ ವಾಹನವು ರಸ್ತೆಯಿಂದ ಪಕ್ಕಕ್ಕೆ ಉರುಳಿ ಕಡಿದಾದ ಇಳಿಜಾರಿನ ಕೆಳಗೆ ಬಿದ್ದಿದೆ ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿವೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿ, ಗಾಯಾಳುಗಳಿಗೆ ನೀಡಲಾಗುವ ಪರಿಹಾರದ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದರು. ಹಿರಿಯ ಅಧಿಕಾರಿಗಳು ತಕ್ಷಣ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಅವರು ಆದೇಶಿಸಿದರು ಮತ್ತು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಲು ಮತ್ತು ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ನೀಡಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ದರೋಡೆಕೋರರ ಕಾರು ಪ*ಲ್ಟಿ; ಓರ್ವ ಕಳ್ಳ ಸಾ*ವು

ಗಾಯಾಳುಗಳನ್ನು ಚಿಕಿತ್ಸೆಗಾಗಿ ಭದ್ರಾಚಲಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಎಸ್ಆರ್ ಜಿಲ್ಲಾಧಿಕಾರಿ ದಿನೇಶ್ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಮತ್ತು ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page