Connect with us

LATEST NEWS

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಶಾಲೆಗಳ ದತ್ತು ಸ್ವೀಕಾರ.. 

Published

on

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಶಾಲೆಗಳ ದತ್ತು ಸ್ವೀಕಾರ 

ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ  ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಸುರೇಂದ್ರ ಕುಮಾರ್ ಅವರು ಉದ್ಘಾಟಿಸಿದರು.ಈ ಸಂದರ್ಭ ಎಸ್‌ಡಿಎಂ ವಿಶ್ವವಿದ್ಯಾನಿಲಯ ಧಾರವಾಡ  ವತಿಯಿಂದ 10 ಶಾಲೆಗಳನ್ನು ದತ್ತು ಸ್ವೀಕರಿಸಿ ಅದನ್ನು ಅಭಿವೃದ್ಧಿ ಪಡಿಸುವ ಸಂಬಂಧ ರೂಪುರೇಷೆಗಳ ಬಗ್ಗೆ  ಚರ್ಚಿಸಲಾಯಿತು.ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುತ್ತಿರುವ ಹತ್ತು ಹಲವು ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶ್ಲಾಘಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌, ಆರೋಗ್ಯ ಸಚಿವ ಶ್ರೀರಾಮುಲು ಉಪಸ್ಥಿತರಿದ್ದರು..

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page