Connect with us

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಣದ ಜೊತೆಗೆ ಹಸಿರು ಕ್ರಾಂತಿ

Published

on

ವಿದ್ಯಾರ್ಥಿಗಳಿಗೆ ಸಾವಯವ ಕೃಷಿ ಪಾಠ: ಆರೋಗ್ಯದ ಜೊತೆಗೆ ಕೃಷಿ ಮಾರ್ಗದರ್ಶನ ಪಡೆಯುವ ವಿದ್ಯಾರ್ಥಿಗಳು

ಮಂಗಳೂರು: ಶಾಲೆ ಎನ್ನುವುದು ಮಕ್ಕಳಿಗೆ ಕೇವಲ ಪುಸ್ತಕದ ಬದನೆಕಾಯಿಯಲ್ಲ. ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸಿದರೆ ಮಕ್ಕಳು ಮುಂದೆ ಒಂದೊಳ್ಳೆ ಹೆಸರು ತರಲು ಸಾಧ್ಯವಾಗುತ್ತೆ.

ಇದಕ್ಕೆ ಉತ್ತಮ ಉದಾಹರಣೆಯಾಗಿ ನಿಲ್ಲುತ್ತೆ ಮಂಗಳೂರಿನ ಈ ಶಾಲೆ.

ಈ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡೋದ್ರಲ್ಲೂ ಸೈ, ಮಕ್ಕಳ ಆರೋಗ್ಯ ಕಾಪಾಡುವಲ್ಲೂ ಒಂದು ಹೆಜ್ಜೆ ಮುಂದು.

ಹೌದು, ಈ ಶಾಲೆಯೊಳಗೆ ಪಠ್ಯದ ಚಟುವಟಿಕೆಗಳು ನಡೆದ್ರೆ, ಹೊರಗಡೆ ಕೃಷಿ ಚಟುವಟಿಕೆಗಳು ನಡೆಯುತ್ತೆ.

ಎಸ್.. ಇದು ಕರಾವಳಿಯ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮಂಗಳೂರಿನ ಶಕ್ತಿ ರೆಸಿಡೆನ್ಸಿಯಲ್ ಶಿಕ್ಷಣ ಸಂಸ್ಥೆ.

ಈ ಸಂಸ್ಥೆ ಶಿಕ್ಷಣದ ಜೊತೆ-ಜೊತೆಗೆ ಶಾಲಾ ಅಂಗಳದಲ್ಲೇ ತರಕಾರಿ ತೋಟವನ್ನ ಬೆಳೆಸಿ ವಿದ್ಯಾರ್ಥಿಗಳಿಗೆ ಸಾವಯುವ ತರಕಾರಿಗಳ ಕೃಷಿ ಪಾಠವನ್ನ ಹೇಳುತ್ತಿದೆ.

ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿರುವ ತರಕಾರಿಗಳ ಬೆಳೆದು ಇದರಿಂದ ವಿದ್ಯಾರ್ಥಿಗಳು ಸಾರ್ಥಕತೆ ಕಂಡಿದ್ದಾರೆ.

ಸೊಂಪಾಗಿ ಬೆಳೆದ ಬಸಳೆ, ಪುಷ್ಟಿಯಾಗಿ ಬೆಳೆದ ಬದನೆ, ಪದಾರ್ಥಕ್ಕೆ ಸಜ್ಜಾದ ಹೀರೇಕಾಯಿ, ತೊಂಡೆಕಾಯಿ, ಸೋರೆಕಾಯಿ, ತರೇಹಾವಾರಿ ಸೊಪ್ಪುಗಳು, ಮೆಣಸು, ಟೊಮೆಟೋ ಮುಂತಾದ ಹಸಿರು ತರಕಾರಿಗಳು.…

ಹೌದು ಈ ಹಚ್ಚಹಸಿರಿನ ತರಕಾರಿ ತೋಟವನ್ನ ಕಂಡೊಡನೆ ಕಣ್ಣು ಕೋರೈಸದೆ ಬಿಡೋದಿಲ್ಲ.

ವಿಭಿನ್ನವಾಗಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಕೃಷಿಪಾಠಕ್ಕೆ ಒತ್ತು ನೀಡಲು ಸಂಸ್ಥೆಯು ಈ ರೀತಿಯ ಯೋಜನೆ ಮಾಡಿದೆ.

ಶಿಕ್ಷಣ ಕ್ಷೇತ್ರದಲ್ಲಿ  ಮೆಚ್ಚುಗೆ ಪಡೆದಿರುವ ಶಕ್ತಿ ರೆಸಿಡೆನ್ಶಿಯಲ್ ಸಂಸ್ಥೆ ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಪಾಠವನ್ನು ಹೇಳಿಕೊಡುತ್ತಿದೆ.

ಹಸಿರು ತರಕಾರಿಗಳನ್ನ ಹೇಗೆ ಬೆಳೆಯುತ್ತಾರೆ. ಅವುಗಳ ಮಹತ್ವವೇನು..?? ಎಂಬುದರ ಮಾರ್ಗದರ್ಶನವನ್ನು ಕೂಡ ಶಾಲೆಯ ಅಂಗಳದಲ್ಲೇ ನೀಡ್ತಾ ಇರೋದು ವಿಶೇಷ.

ಅಂದಹಾಗೆ ಈ ಸೊಂಪಾಗಿ ಬೆಳೆದಿರುವ ಹಸಿರು ತರಕಾರಿಗಳ ಗಿಡಗಳಿಗೆ ರಾಸಾಯನಿಕ ಗೊಬ್ಬರ ಉಪಯೋಗಿಸೋದಿಲ್ಲ ಅನ್ನೋದು ಮತ್ತೊಂದು ವಿಶೇಷ.

ಕೊಳೆತ ತರಕಾರಿ, ಇತರ ವಸ್ತುಗಳನ್ನು ಕಾಂಪೋಸ್ಟ್ ಮಾಡಿ ಸಾವಾಯವ ಗೊಬ್ಬರ ತಯಾರಿಸಿ, ಈ ತೋಟಗಳಿಗೆ ಬಳಸಲಾಗುತ್ತೆ.

ಇನ್ನು ವಿದ್ಯಾರ್ಥಿಗಳ ಊಟಕ್ಕೂ ಇದೇ ತರಕಾರಿಯನ್ನ ಬಳಸುತ್ತಿದ್ದು, ಹಸಿರು ತರಕಾರಿಯನ್ನು ತಿಂದು ಆರೋಗ್ಯ ವೃದ್ಧಿಸಿಕೊಳ್ಳುವ ಖುಷಿ ಹಂಚಿಕೊಳ್ಳುತ್ತಾರೆ ವಿದ್ಯಾರ್ಥಿಗಳು.

ಒಟ್ನಲ್ಲಿ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಕೇವಲ ಪಾಠ ಮಾಡೋದಷ್ಟೇ ತಮ್ಮ ಕೆಲಸವಲ್ಲ.

ಅದರಾಚೆಗೂ ಕೆಲಸ ಮಾಡಿದರೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುತ್ತೆ ಅನ್ನೋ ದೃಷ್ಟಿಯಲ್ಲಿ ಕೆಲಸ ಮಾಡುತ್ತಿರುವ ಶಕ್ತಿ ರೆಸಿಡೆನ್ಶಿಯಲ್ ಸಂಸ್ಥೆಯ ಕಾರ್ಯ ಮೆಚ್ಚಲೇಬೇಕು.

 

video

 

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page