Connect with us

DAKSHINA KANNADA

ಸರ್ಕಾರಿ ಜಾಗದಲ್ಲಿ ಅಕ್ರಮ ನಿವೇಶನ ನಿರ್ಮಾಣ ಯತ್ನ ಆರೋಪ-ಪಚ್ಚನಾಡಿ ಕಾರ್ಪೋರೇಟರ್‌ ತರಾಟೆಗೆತ್ತಿಕೊಂಡ ಸ್ಥಳೀಯರು

Published

on

ಮಂಗಳೂರು: ಮಂಗಳೂರಿನ ಪಚ್ಚನಾಡಿಯ ಕಾರ್ಮಿಕ ನಗರದಲ್ಲಿರುವ ಸರ್ಕಾರಿ ಜಾಗದಲ್ಲಿ ಅಕ್ರಮ ನಿವೇಶನ ನಿರ್ಮಾಣ ಯತ್ನ ನಡೆದಿದೆ ಎನ್ನುವ ಆರೋಪದಲ್ಲಿ ಪಚ್ಚನಾಡಿ ಕಾರ್ಪೋರೇಟರ್‌ ಸಂಗೀತಾ ಆರ್ ನಾಯಕ್ ಹಾಗೂ ಸ್ಥಳೀಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.


ಇದೇ ವೇಳೆ ಘಟನಾ ಸ್ಥಳಕ್ಕೆ ಆಗಮಿಸಿದ ಪಚ್ಚನಾಡಿಯ ಕಾರ್ಪೋರೇಟರ್‌ ಸಂಗೀತಾ ಆರ್‌ ನಾಯಕ್ ಅವರ ಪತಿ ಕೂಡಾ ಸ್ಥಳೀಯರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿದೆ. ಮಂಗಳೂರು ನಗರ ಪಾಲಿಕೆ ಸದಸ್ಯೆ ಪತಿ ಸಹಕಾರದಿಂದಲೇ ಅಕ್ರಮ ನಿವೇಶನ ನಿರ್ಮಾಣ ಮಾಡಲಾಗುತ್ತಿದೆ ಎಂದೂ ಸ್ಥಳೀಯರು ಆರೋಪಿಸಿದ್ದಾರೆ.


2.45 ಎಕರೆ ಸರ್ಕಾರಿ ಗ್ರೇಜಿಂಗ್ ಗ್ರೌಂಡ್ ನ ಜಾಗವಾಗಿದ್ದು, ಈ ಜಾಗದಲ್ಲಿ ಆಟದ ಮೈದಾನ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದರು. ಆದರೆ ರಾತ್ರೋ ರಾತ್ರಿ ಜಾಗದಲ್ಲಿ ಮನೆ ನಿರ್ಮಾಣ ಸಲಕರಣೆ ತಂದಿಟ್ಟು ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.


ಈ ಹಿನ್ನೆಲೆಯಲ್ಲಿ ಸ್ಥಳೀಯರು ಕಾರ್ಪೋರೇಟರ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಗುರುಪುರ ಹೋಬಳಿ ಡೆಪ್ಯುಟಿ ತಹಶಿಲ್ದಾರ್ ಶಿವಪ್ರಸಾದ್, ವಿ.ಎ ಮೆಹಬೂಬ್ ಭೇಟಿ ನೀಡಿದ್ದಾರೆ.

ಸ್ಥಳ ಸರ್ಕಾರಿ ಆಸ್ತಿಯಾಗಿದ್ದು, ಇಲ್ಲಿ ನಿವೇಶನ ನಿರ್ಮಾಣ ಯತ್ನ‌ ಕಾನೂನು ಬಾಹಿರ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

DAKSHINA KANNADA

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ

Published

on

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಪರಸ್ಪರ ವಾಗ್ವಾದ ನಡೆದು ಚೂರಿ ಇರಿತ ಸಂಭವಿಸಿದ ಘಟನೆ ವಿಟ್ಲದ ಖಾಸಗಿ ಐಟಿಐ ಕಾಲೇಜೊಂದರಲ್ಲಿ ಇಂದು ನಡೆದಿದೆ.


ವಿಟ್ಲದ ಖಾಸಗಿ ಐಟಿಐ ಒಂದರಲ್ಲಿ ವಿದ್ಯಾರ್ಥಿಗಳ ನಡುವೆ ಚೂರಿ ಇರಿತ ನಡೆದಿದೆ. ಆರಂಭದಲ್ಲಿ ಇಬ್ಬರ ಮಧ್ಯೆ ವಾಗ್ವಾದ ನಡೆದು ಬಳಿಕ ಚೂರಿ ಇರಿತ ಸಂಭವಿಸಿದ್ದು, ಘಟನೆಯಿಂದಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಜೋರಾಗಿ ಕೆಮ್ಮಿದ ಎಂಬ ಕಾರಣಕ್ಕೆ ನೆರೆಮನೆಯವರಿಂದಲೇ ಯುವಕನ ಕೊಲೆ

ಇದೇ ವೇಳೆ ಗಲಾಟೆ ಬಿಡಿಸಲು ಹೋದ ವಿದ್ಯಾರ್ಥಿಗೂ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ. ಈ ಪೈಕಿ ಇಬ್ಬರು ವಿದ್ಯಾರ್ಥಿಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.

Continue Reading

DAKSHINA KANNADA

ಪುತ್ತೂರು: ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

Published

on

ಪುತ್ತೂರು: ಉಪ್ಪಿನಂಗಡಿ ಗ್ರಾಮದ ಪಂಜಳ ಎಂಬಲ್ಲಿ ಮಾದಕ ದ್ರವ್ಯ ಎಂ.ಡಿ.ಎಂ.ಎ. ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಮೂರು ಸಾವಿರ ರೂಪಾಯಿ ಮೌಲ್ಯದ 2.16 ಗ್ರಾಂ ಎಂ.ಡಿ.ಎಂ.ಎ., 45 ಸಾವಿರ ರೂಪಾಯಿ ಮೌಲ್ಯದ ಐಪೋನ್ ಮತ್ತು ಒಂದು ಸಾವಿರ ರೂಪಾಯಿ ಮೌಲ್ಯದ ಸ್ಯಾಮ್ಸಂಗ್ ಕೀ-ಪ್ಯಾಡ್ ಮೊಬೈಲ್ ಸೇರಿದಂತೆ ಒಟ್ಟು 49 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಕೊಕ್ಕಡ ನಿವಾಸಿ ಯಾಹ್ಯಾ (48) ಬಂಧಿತ ಆರೋಪಿಯಾಗಿದ್ದಾನೆ. ಉಪ್ಪಿನಂಗಡಿ ಪೊಲೀಸರು ಪಂಜಳ ಎಂಬಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ಕಂಡು ಬಂದಿದ್ದ ಯಾಹ್ಯಾ ಕೊಕ್ಕಡನನ್ನು ವಿಚಾರಿಸಿದಾಗ ಆತ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಜೋರಾಗಿ ಕೆಮ್ಮಿದ ಎಂಬ ಕಾರಣಕ್ಕೆ ನೆರೆಮನೆಯವರಿಂದಲೇ ಯುವಕನ ಕೊಲೆ

ಉಪ್ಪಿನಂಗಡಿ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಫೆ.11-14: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ-ಕುಂಭ ಮಹೋತ್ಸವ

Published

on

ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಕುಂಭ ಮಹೋತ್ಸವ ಫೆ.11ರಿಂದ ಆರಂಭಗೊಂಡು ಫೆ.14ರವರೆಗೆ ಜರುಗಲಿದೆ.

ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ಇವರ ಆಶೀರ್ವಾದದೊಂದಿಗೆ ಕ್ಷೇತ್ರದ ತಂತ್ರಿ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಜನಾರ್ದನ ಭಟ್ಟರ ಉಪಸ್ಥಿತಿಯಲ್ಲಿ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು.

ಫೆ.11ರಂದು ದೀಪಪ್ರಜ್ವಲನೆ ಮೂಲಕ ಭಜನಾ ಸಂಕೀರ್ತಣೆ ಸಂಜೆ 3 ಗಂಟೆಗೆ ಆರಂಭಗೊಳ್ಳಲಿದೆ. ಫೆ.12ರಂದು ಬೆಳಿಗ್ಗೆ ಗಣಪತಿ ಹೋಮ, ಕಲಶಾಭಿಷೇಕ ಇತ್ಯಾದಿ ನಡೆದು ಮಧ್ಯಾಹ್ನ ಮಹಾರಥೋತ್ಸವ ಬಳಿಕ ಮಹಾಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯ ಆಯೋಜನೆ ಮಾಡಲಾಗಿದೆ. 

6 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ ಭಾಗವಹಿಸಲಿದ್ದು, ವಿವಿಧ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಆಗಮಿಸಲಿರುವರು ಎಂದು ಕ್ಷೇತ್ರದ ಆಡಳಿತ ಸಮಿತಿ ಪ್ರಕಟಣೆ ತಿಳಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page