Connect with us

LATEST NEWS

ಡಿ.13ರಂದು ಉಡುಪಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

Published

on

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಜಂಟಿ ಆಶ್ರಯದಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ” ವನ್ನು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಡಿ. 13ರ ಶನಿವಾರ ಸಂಜೆ 5:45ಕ್ಕೆ ಆಯೋಜಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ‌ ಮಾಹಿತಿ ನೀಡಿದ ಅವರು, ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ‌.

ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ- ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ರೋಪ್ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ನೃತ್ಯ- ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ- ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ: ಕೇವಲ 10 ನಿಮಿಷ 8 ಸೆಕೆಂಡುಗಳಲ್ಲಿ 100 ಮೀಟರ್ ಈಜಿ ವಿಶ್ವ ದಾಖಲೆ ಬರೆದ 1ವರ್ಷದ ಮಗು

ಆಳ್ವಾಸ್ ವಿದ್ಯಾರ್ಥಿಗಳಿಂದ ಕಾರ್ಯಕ್ರಮದ ಆರಂಭದಲ್ಲಿ ಸಿಂಗಾರಿ ಮೇಳ ಫ್ಯೂಷನ್ ನಡೆಯಲಿದೆ. ಬೊಂಬೆ ಆಕರ್ಷಕ ಸಿಡಿಮದ್ದಿನ ವಿನೋದಾವಳಿಯೊಂದಿಗೆ ಪ್ರದರ್ಶನವಿರಲಿದೆ. ಪ್ರೇಕ್ಷಕರಿಗಾಗಿ 15000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ ಎಂದು ತಿಳಿಸಿದರು.

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page