Connect with us

LATEST NEWS

ಡಿ.13ರಂದು ಉಡುಪಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

Published

on

ಉಡುಪಿ: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಡಿ.13ರಂದು ಸಂಜೆ 5.45ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.

ಉಡುಪಿಯ ಕಿದಿಯೂರು ಹೊಟೇಲಿನ ಸಭಾಂಗಣದಲ್ಲಿ ನಡೆದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಮನರಂಜನೆ ಜೊತೆ ಸಂದೇಶ ಸಾರುವ ಕಾರ್ಯ ಮಾಡಲಾಗುವುದು. ನಮ್ಮ ದೇಶದಲ್ಲಿರುವಷ್ಟು ಸಾಂಸ್ಕೃತಿಕ ಕಲೆ ಬೇರೆ ಯಾವ ದೇಶದಲ್ಲೂ ಇಲ್ಲ. ಅದೇ ರೀತಿ ಮಾನವ ಸಂಪತ್ತಿನಲ್ಲಿ 52 ಕೋಟಿ 25ವರ್ಷದೊಳಗಿನ ಯುವಜನತೆ ಇದ್ದಾರೆ. ಈ ರೀತಿಯ ಮಾನವ ಸಂಪತ್ತು ಜಗತ್ತಿನಲ್ಲಿ ಎಲ್ಲೂ ಇಲ್ಲ. ಇವರನ್ನು ಬಳಸಿಕೊಂಡು ನಮ್ಮ ಕಲೆಯನ್ನು ಮತ್ತಷ್ಟು ಶ್ರೀಮಂತಗೊಳಿಸಬಹುದು ಎಂದರು.

ಆಳ್ವಾಸ್ ಸಂಸ್ಥೆಯಲ್ಲಿ ದತ್ತು ಸ್ವೀಕರಿಸಿದ 3,000 ಮಕ್ಕಳ ಪೈಕಿ 500 ಮಕ್ಕಳಿಗೆ ದೇಶದ ವಿವಿಧ ಕಲೆಗಳ ಬಗ್ಗೆ ತರಬೇತಿ ನೀಡಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಆಳ್ವಾಸ್ ನುಡಿಸಿರಿ ವಿರಾಸತ್‌ನ 88 ಘಟಕಗಳನ್ನು ದೇಶ ವಿದೇಶಗಳಲ್ಲಿ ಆರಂಭಿಸಲಾಗಿದೆ. ಈ ವರ್ಷ 50 ಕಡೆಗಳಲ್ಲಿ ಈ ಸಾಂಸ್ಕೃತಿಕ ವೈಭವವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕೃಷಿ ವಿಜ್ಞಾನ ಮತ್ತು ಆಹಾರ ತಂತ್ರಜ್ಞಾನ ಪದವಿ ಕೋರ್ಸ್ ಆರಂಭ

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಸಂಘಟಕ ದಾಮೋದರ್ ಶರ್ಮ, ವೈದ್ಯ ಡಾ.ಕಿರಣ್ ಆಚಾರ್ಯ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ ರಾವ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

LATEST NEWS

ಭೀಕರ ಅಪಘಾತ; ಟೋಲ್ ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್!

Published

on

ಉತ್ತರ ಪ್ರದೇಶ: ಟೋಲ್‌ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಟೋಲ್‌ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಶನಿವಾರ(ಜ.17) ಮಧ್ಯಾಹ್ನ ನಡೆದಿದೆ.


ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂಬ ಕಾರಣಕ್ಕೆ ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು. ಟೋಲ್ ಸಿಬ್ಬಂದಿ ಟ್ಯಾಗ್​ ಸ್ಕ್ಯಾನ್ ಮಾಡುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಟ್ರಕ್ ನಿಂತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ರಸ್ತೆ ವಿಭಜಕಕ್ಕೆ ಎಸ್ ಯುವಿ ಡಿ*ಕ್ಕಿ; 5 ಮಂದಿ ಸಾ*ವು

ಡಿಕ್ಕಿಯ ರಭಸಕ್ಕೆ ಸಿಬ್ಬಂದಿ ಕಾರಿನ ಬಾನೆಟ್ ಮೇಲೆ ಬಿದ್ದಿದ್ದು, ಟ್ರಕ್ ಅವರನ್ನು ಸುಮಾರು 50 ಮೀಟರ್‌ಗಳಿಗಿಂತಲೂ ಹೆಚ್ಚು ದೂರ ಎಳೆದೊಯ್ದಿದೆ. ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Continue Reading

BIG BOSS

ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

Published

on

BBK12 : ಬಿಗ್ ಬಾಸ್ ಸೀಸನ್ 12 ಕೊನೆಯ ಹಂತಕ್ಕೆ ಬಂದು ನಿಂತಿದೆ. ಸದ್ಯ ಯಾರಿಗೆ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ ಅನ್ನೋ ಕುತೂಹಲ ಬಿಗ್ ಬಾಸ್ ವೀಕ್ಷಕರದ್ದು.  ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಈಗಾಗಲೇ ಬಹುತೇಕ ಮಂದಿ ವೋಟ್ ಮಾಡಿದ್ದು, ಫಿನಾಲೆಯತ್ತ ದೃಷ್ಟಿ ನೆಟ್ಟಿದ್ದಾರೆ.

ಬಿಗ್ ಬಾಸ್‌ 11ರಲ್ಲಿ ವೈಲ್ಡ್ ಕಾರ್ಡ್ ಪಡೆದಿದ್ದವರು ಗಾಯಕ ಹನುಮಂತ ಲಮಾಣಿ. ಆ ಸೀಸನ್‌ನ ವಿಜೇತರಾಗಿ ಹೊರಬಂದು ಇತಿಹಾಸ ಸೃಷ್ಟಿಸಿದ್ದರು. ವೈಲ್ಡ್ ಕಾರ್ಡ್ ಮೂಲಕ ಒಳಗೆ ಹೋದವರು ಗೆದ್ದು ತೋರಿಸಬಹುದೆಂದು ತೋರಿಸಿಕೊಟ್ಟಿದ್ದರು ಹನುಮಂತ. ಇದೀಗ ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರು ಅನ್ನೋ ಭವಿಷ್ಯ ನುಡಿದಿದ್ದಾರೆ.

ಯಾರು ವಿನ್ನರ್ ?

ಗಿಲ್ಲಿ ಅಣ್ಣ ನನ್ನ ಫೇವರಿಟ್, ಅವರೇ ವಿನ್ನರ್ ಆಗ್ತಾರೆ ಎಂದು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಹನುಮಂತ ಹೇಳಿದ್ದಾರೆ.

ಈ ಬಾರಿಗೆ ಗಿಲ್ಲಿ ಚೆನ್ನಾಗಿ ಆಟವಾಡಿದ್ದಾರೆ. ಅವರು ಗೆಲ್ಲುವ ವಿಶ್ವಾಸ ನನಗೆ ಇದೆ. ಬಿಗ್ ಬಾಸ್ ಮನೆಯಲ್ಲಿ ಯಾವುದೇ ಭೇದ ಭಾವ ಮಾಡುವುದಿಲ್ಲ. ಈ ಬಾರಿ ಅತಿ ಹೆಚ್ಚು ವೋಟಿಂಗ್ ಆಗಿದೆ. ಅತಿ ಹೆಚ್ಚು ವೋಟು ಗಿಲ್ಲಿನಟ ತೆಗೆದುಕೊಂಡಿದ್ದಾರೆ. ನಾನು ಸಹ ಗಿಲ್ಲಿ ನಟನಿಗೆ ವೋಟ್ ಮಾಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ನನ್ನ ಫೇವರಿಟ್ ಗಿಲ್ಲಿ ಅಣ್ಣ. ಎಲ್ಲರಿಗೂ ಆಲ್ ದಿ ಬೆಸ್ಟ್. ಸೋತೋರು ಬೇಜಾರ್ ಮಾಡ್ಕೋಬೇಡಿ. ಎಲ್ಲರಿಗೂ ಆಲ್ ದಿ ಬೆಸ್ಟ್, ಗಿಲ್ಲಿ ಅಣ್ಣನಿಗೆ ವಿಶೇಷ ಆಲ್ ದಿ ಬೆಸ್ಟ್. ಸುದೀಪ್ ಸರ್ ಮುಂದೆ ನಿಲ್ಲೋದೆ ಪುಣ್ಯ. ಫೈನಲ್ ವರೆಗೂ ಹೋಗೋದೆ ಪುಣ್ಯ  ಎಂದಿದ್ದಾರೆ.

Continue Reading

LATEST NEWS

ಹಾರಿಸಿದ್ದ ಗಾಳಿಪಟ ಹಿಡಿಯಲು ಹೋಗಿ ಯುವಕ ಸಾ*ವು

Published

on

ಮಂಗಳೂರು/ಬೀದರ್ : ಹಾರಿಸಿದ್ದ ಗಾಳಿಪಟ ಹಿಡಿಯಲು ಹೋಗಿ ಕಟ್ಟಡದ ಮೇಲಿಂದ ಬಿ*ದ್ದು ಯುವಕ ಮೃ*ತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ನಡೆದಿದೆ.

19 ವರ್ಷದ ಶಶಿಕುಮಾ‌ರ್ ಶಿವಾನಂದ ಮೃ*ತ ಯುವಕ. ಶಶಿ ಕುಮಾರ್ ಖಾಸಗಿ ಕಾಲೇಜಿನ ಕಟ್ಟಡದ ಮೇಲೆ ಗಾಳಿಪಟ ಹಾರಿಸಲು ಹೋಗಿದ್ದ. ಗಾಳಿಪಟ ಹಾರಿಸುವಾಗ ದಾರ ತುಂ*ಡಾಗಿದ್ದು. ಈ ವೇಳೆ ಹಾರಿ ಹೋಗುತ್ತಿದ್ದ ಗಾಳಿಪಟ ಹಿಡಿಯಲು ಹೋಗಿ, ಕಟ್ಟಡದ ಮೇಲಿಂದ ಬಿ*ದ್ದಿದ್ದಾನೆ.

ಇದನ್ನೂ ಓದಿ : ಗಿಲ್ಲಿ ಫ್ಯಾನ್ಸ್ ಅಬ್ಬರ ಕಂಡು ಬೆಚ್ಚಿಬಿದ್ದ ಬಿಗ್ ಬಾಸ್ ಮನೆ ಮಂದಿ; ಸುದೀಪ್ ಕೊಟ್ಟ ಸುಳಿವೇನು?

ಪರಿಣಾಮ ಸ್ಥಳದಲ್ಲೇ ಕೊನೆ*ಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page