Connect with us

LATEST NEWS

ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ನೇಮಕ

Published

on

ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕೃತ ನಿರ್ಧಾರ ಪ್ರಕಟಿಸಿದ್ದಾರೆ.

ಮಾಜಿ ರಾಜ್ಯ ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಬುಧವಾರ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಿಗೆ ನೂತನ ಅಧ್ಯಕ್ಷರಾಗಿ ಕೆ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿ ಪೊಲೀಸ್ ಸೇವೆಯಲ್ಲಿದ್ದ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ 2020ರ ಆಗಸ್ಟ್‌ನಲ್ಲಿ ಬಿಜೆಪಿ ಸೇರಿದ್ದರು. ಬೆನ್ನಿಗೇ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

ಅಣ್ಣಾಮಲೈ ಬಿಜೆಪಿಯ ಹೈಕಮಾಂಡ್ ಜತೆ ಉತ್ತಮ ಸಂಬಂಧ ಹೊಂದಿದ್ದಾರೆ. ಅದರಲ್ಲೂ ಮುಖ್ಯವಾಗಿ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಜತೆ ಅವರ ಒಡನಾಟ ಚೆನ್ನಾಗಿದೆ. ಕೆಲ ತಿಂಗಳ ಹಿಂದೆ ತಮಿಳುನಾಡು ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಅಣ್ಣಾಮಲೈ ಅರವರಕುರುಚಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.ಇದೀಗ ಅಣ್ಣಾಮಲೈ ಅವರನ್ನು ನೇಮಕ ಮಾಡುವ ಮೂಲಕ ಚಾರ್ಮ್ ಇರುವ ನಾಯಕರಿಗೆ ಜವಾಬ್ದಾರಿ ನೀಡಿ 2024ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುವ ಸೂಚನೆಯನ್ನು ಬಿಜೆಪಿ ನೀಡಿದೆ.

Advertisement
Click to comment

Leave a Reply

Your email address will not be published. Required fields are marked *

FILM

ಕುಟುಂಬ ಸಮೇತರಾಗಿ ಕಾಪು ಕ್ಷೇತ್ರಕ್ಕೆ ನಟಿ ಶ್ರುತಿ ಭೇಟಿ

Published

on

ಕಾಪು : ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶ್ರುತಿ ಕುಟುಂಬ ಸಮೇತರಾಗಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ದ ದೇಗುಲಗಳಿಗೆ ಭೇಟಿ ನೀಡಿದರು. ಈ ಸಂದರ್ಭ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.

ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ಬಳಿಕ ಮಾತನಾಡಿದ ನಟಿ, ನಾನು ಇಲ್ಲಿನ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುವುದಿತ್ತು. ಜೊತೆಗೆ ಇಲ್ಲಿನ ಕಾಪು ಮಾರಿಯಮ್ಮ ದೇವಸ್ಥಾನದ ಬಗ್ಗೆ ಕೇಳಿದ್ದೆ. ದೇಗುಲ ಬಹಳ ಸುಂದರವಾಗಿ ಮೂಡಿ ಬಂದಿದೆ. ಕರಾವಳಿ ಭಾಗಕ್ಕೆ ಭೇಟಿ ನೀಡುವ ಯಾತ್ರಿಗಳು, ಪ್ರವಾಸಿಗರು ಇಲ್ಲಿಗೆ ಒಮ್ಮೆಯಾದರೂ ಭೇಟಿ ನೀಡಿ ಎಂದರು.

ಇದನ್ನೂ ಓದಿ : ರಿಲೀಸ್ ಗೆ ಮೊದಲೇ ‘ಕಾಂತಾ’ ವಿರುದ್ಧ ದೂರು! ಸಂಕಷ್ಟದಲ್ಲಿ ನಿರ್ಮಾಪಕ ದಗ್ಗುಬಾಟಿ

ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕುದ್ರೋಳಿ ಕ್ಷೇತ್ರದಲ್ಲಿ ಇಂದು ಭೈರವಾಷ್ಟಮಿ

Published

on

ಮಂಗಳೂರು : ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಇಂದು(ನ.12) ಭೈರವಾಷ್ಟಮಿ ಪ್ರಯುಕ್ತ ಬೆಳಿಗ್ಗೆ ಭೈರವ ದೇವರಿಗೆ ಅಭಿಷೇಕ, ಮಹಾಪೂಜೆ ನೆರವೇರಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಹೆಚ್ ಸೋಮಸುಂದರಂ ಮತ್ತು ಕಾರ್ಯದರ್ಶಿ ಮಾಧವ ಸುವರ್ಣ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕಟೀಲು ಏಳನೇ ಮೇಳದ ಪದಾರ್ಪಣೆ ಸಂಭ್ರಮ; ನ.15ರಂದು ನಡೆಯಲಿದೆ ವೈಭವದ ಮೆರವಣಿಗೆ

ಕ್ಷೇತ್ರದಲ್ಲಿ ಇಂದು(ನ.12) ಸಂಜೆ 7.30 ಕ್ಕೆ ಭೈರವ ತರ್ಪಣ ಮತ್ತು ಮಹಾಪೂಜೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಯಲ್ಲಿ ಆಗಮಿಸಿ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗುವಂತೆ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಸಮಿತಿ ವಿನಂತಿಸಿಕೊಂಡಿದೆ.

Continue Reading

DAKSHINA KANNADA

ನಂದಿಗುಡ್ಡೆಯಲ್ಲಿ ಕೊರಗಜ್ಜ ಚಿತ್ರ ತಂಡದಿಂದ ಹರಕೆಯ ಕೋಲ ಸೇವೆ

Published

on

ಮಂಗಳೂರು: ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ ಮೂಡಿ ಬಂದಿರುವ 6 ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿರುವ ಕೊರಗಜ್ಜ ಸಿನೆಮಾ ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಾದ್ಯಂತ ತೆರೆ ಕಾಣಲಿದೆ. ಅದಕ್ಕೂ ಮುನ್ನ ಚಿತ್ರ ತಂಡ ಮಂಗಳೂರಿನ ನಂದಿಗುಡ್ಡೆ ಕೊರಗಜ್ಜನ ಸಾನಿಧ್ಯದಲ್ಲಿ ಹರಕೆಯ ಕೋಲ ಸೇವೆ ಮಾಡಿ ಚಿತ್ರದ ಯಶಸ್ವಿಗೆ ಪ್ರಾರ್ಥನೆ ಮಾಡಿದೆ.


ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶ್ರುತಿ, ಭವ್ಯ, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಶ್ರುತಿ ತಂದೆ, ತಾಯಿ ಸಹಿತ ಚಿತ್ರರಂಗದ ಹಲವು ಮಂದಿ ಸೇರಿ ಸುಮಾರು 1500 ಅಧಿಕ ಮಂದಿ ಭಕ್ತರು ಕೊರಗಜ್ಜನ ಕೋಲದಲ್ಲಿ ಭಾಗಿಗಳಾಗಿದ್ದರು.

ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಸಕ್ಸಸ್ ಫಿಲ್ಮ್ಸ್’ ಹಾಗೂ ‘ತ್ರಿವಿಕ್ರಮ ಸಿನಿಮಾಸ್’ ಮೂಲಕ ಈ ಸಿನಿಮಾ ನಿರ್ಮಾಣವಾಗಿದ್ದು, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಕೆಲಸ ಮಾಡಿದ್ದಾರೆ.


ತುಳು, ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಗೊಳ್ಳಲಿದೆ. ಇನ್ನು ಸಿನೆಮಾದಲ್ಲಿ ನಟಿಸಿರುವ ಖ್ಯಾತ ನಟಿ ಶ್ರುತಿ ಅವರು ಚಿತ್ರದ ಅಭಿನಯದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page