Connect with us

LATEST NEWS

ತಮಿಳುನಾಡು ಬಿಜೆಪಿಗೆ ಆಘಾತ; ಚುನಾವಣೆ ಹೊಸ್ತಿಲಲ್ಲಿ ಅಣ್ಣಾಮಲೈ ಅಚ್ಚರಿ ನಿರ್ಧಾರ!

Published

on

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ. ತಮಿಳುನಾಡಿನ 6 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳ ಬಳಿಕ ಕೆ. ಅಣ್ಣಾಮಲೈ ಅವರು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ.


ತಮಿಳುನಾಡು ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ಎಲೆಕ್ಷನ್ ಗೆದ್ದೇ ಗೆಲ್ಲಬೇಕು ಎಂಬ ಗುರಿಯೊಂದಿಗೆ ಬಿಜೆಪಿ ನಾಯಕರು ಮುಂದೆ ನುಗ್ಗಿದ್ದಾರೆ. ಈ ಪೈಕಿ ಘಟಾನುಘಟಿ ನಾಯಕರೇ ತಮಿಳುನಾಡು ರಾಜ್ಯದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿ ಮತಬೇಟೆ ಶುರು ಮಾಡಲು ಸಜ್ಜಾಗಿದ್ದಾರೆ. ಅದರಲ್ಲೂ ದಕ್ಷಿಣ ಭಾರತದ ಶಕ್ತಿಶಾಲಿ ರಾಜ್ಯದಲ್ಲಿ ಅಧಿಕಾರ ಹಿಡಿದೇ ತೀರಬೇಕು ಎಂಬುದು ಬಿಜೆಪಿ ನಾಯಕರ ಶಪಥ. ಹೀಗಿದ್ದಾಗ ಪ್ರಬಲವಾಗಿರುವ ನಾಯಕನ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಎಲ್ಲಾ ರೀತಿ ತಯಾರಿ ನಡೆದಿತ್ತು.

ಆದರೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ತಮ್ಮ ತಂದೆಯ ಅನಾರೋಗ್ಯದ ಕಾರಣ ನೀಡಿ ಮಂಗಳವಾರ ತಮಗೆ ನೀಡಿದ್ದ ಜವಾಬ್ದಾರಿಯಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ. ತಂದೆಯ ಆರೈಕೆಗಾಗಿ ಕೊಯಮತ್ತೂರಿನಲ್ಲಿ ಇರಬೇಕಾಗಿರುವುದರಿಂದ ಚುನಾವಣಾ ಕೆಲಸದ ಜವಾಬ್ದಾರಿಯನ್ನು ನಿರಾಕರಿಸಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ರಾಜೀನಾಮೆ ಕುರಿತು ಸುದ್ದಿಗೋಷ್ಠಿ ನಡೆಸಿದ ಅಣ್ಣಾಮಲೈ, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಆದರೆ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೆ ಮುಖ್ಯ ಕಾರಣ ನನ್ನ ತಂದೆಯ ಅನಾರೋಗ್ಯ. ಹೀಗಾಗಿ ತಂದೆಯ ಆರೈಕೆ, ಆರೋಗ್ಯ ಕಾಳಜಿ ಪ್ರಮುಖ ಆದ್ಯತೆಯಾಗಿರುವ ಕಾರಣ ಕೊಯಂಬತ್ತೂರಿನಲ್ಲಿ ಉಳಿಯಬೇಕಾಗಿದೆ. ಆದ್ದರಿಂದ ನನಗೆ ನೀಡಲಾಗಿದ್ದ 6 ಕ್ಷೇತ್ರಗಳಿಗೆ ಪ್ರವಾಸ ಮಾಡುವುದು, ಅಲ್ಲಿನ ಜವಾಬ್ದಾರಿಗಳನ್ನು ನಿರ್ವಹಿಸುವುದು ಅಸಾಧ್ಯವಾಗಿದೆ. ಈ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಸಂವಿಧಾನವನ್ನು ಅನುಸರಿಸಲು ಸಾಧ್ಯವಿಲ್ಲದಿದ್ದರೆ ಭಾರತದಿಂದ ನಿರ್ಗಮಿಸಿ; ವಾಟ್ಸಪ್‌ಗೆ ಸುಪ್ರೀಂ ಎಚ್ಚರಿಕೆ

ವಿಧಾನಸಭೆ ಚುನಾವಣೆಗೆ ಅಣ್ಣಾಮಲೈ ಸ್ಪರ್ಧಿಸುತ್ತಾರಾ?
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಕಂಡಿರುವ ಅಣ್ಣಾಮಲೈ ಈ ಬಾರಿ ವಿಧಾನಸಭಾ ಚುನಾವಣೆಗೆ ಅಣ್ಣಾಮಲೈ ಸ್ಪರ್ಧಿಸುತ್ತಾರಾ? ಇಲ್ವಾ ಎನ್ನುವ ಬಗ್ಗೆ ಚರ್ಚೆಗಳು ನಡೆದಿದ್ದವು. ಕೆಲವರು ಸ್ಪರ್ಧೆ ಮಾಡುತ್ತಾರೆ, ಇನ್ನೂ ಕೆಲವರು ಸ್ಪರ್ಧೆ ಮಾಡಲ್ಲ ಎನ್ನುವ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ಇದೀಗ ಅದಕ್ಕೂ ಸಹ ಅಣ್ಣಾಮಲೈ ಸ್ಪಷ್ಟನೆ ನೀಡಿದ್ದು, ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇದೇ ವೇಳೆ ಪಕ್ಷದ ನಿರ್ಧಾರ ನೋಡಿಕೊಂಡು ಘೋಷಿಸುವುದಾಗಿ ತಿಳಿಸಿದ್ದಾರೆ.

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading

DAKSHINA KANNADA

ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

Published

on

ಬೆಳ್ತಂಗಡಿ : ಅಜ್ಜಿಯ ತಿಥಿಗೆ ಆಮೆಯನ್ನು ಸಾರು ಮಾಡಿ ಬಡಿಸಲು ನದಿಯಲ್ಲಿ ಅ*ಕ್ರಮವಾಗಿ ಆಮೆಗಳನ್ನು ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದ ನಾಲ್ವರನ್ನು  ಆಮೆಗಳ ಸಹಿತ ಬೆಳ್ತಂಗಡಿ ಠಾಣೆಯ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರ್ಡಾಲ ನೀರ್ಚಾಲಿನ ನಿವಾಸಿ ಮಣಿಕಂಠ(42), ಮಂಗಳೂರು ಮೂಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ(54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಘ್ನೇಶ್(32), ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್(35)  ಬಂಧಿತರು.

ದಾ*ಳಿ ವೇಳೆ ಆರೋಪಿಗಳಿಂದ ನಾಲ್ಕು ಸುಟ್ಟ ಆಮೆಯನ್ನು ಜಪ್ತಿ ಮಾಡಿ ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ : ಕೋಟ : ಗೂಗಲ್ ಮ್ಯಾಪ್ ಎಡವಟ್ಟು; ಕೊಲ್ಲೂರಿಗೆ ಹೊರಟವರು ತಲುಪಿದ್ದೆಲ್ಲಿಗೆ ಗೊತ್ತಾ?

ಫೆ.13 ರಂದು ಆರೋಪಿಗಳು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ, ದೇವಮ್ಮ ಎಂಬವರ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಆಗಮಿಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page