Connect with us

ತಿರುಪತಿಯಲ್ಲಿ ಮತ್ತೊಂದು ಅವಘಡ; ಲಡ್ಡು ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ !

Published

on

ಮಂಗಳೂರು/ತಿರುಪತಿ : ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ.

ದೇವರ ದರ್ಶನದ ಬಳಿಕ ಲಡ್ಡು ಪ್ರಸಾದ ಪಡೆಯುವುದು ವಾಡಿಕೆ. ಆದರೆ ಇಂದು ದೇವಸ್ಥಾನದ ಲಡ್ಡು ಕೌಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡವನ್ನು ಕಂಡು ಭಕ್ತರು ಭಯಭೀತರಾಗಿ, ಓಡಿಹೋಗುತ್ತಿದ್ದರು.

ಇದನ್ನೂ ಓದಿ: ಮಹಾ ಕುಂಭಮೇಳದಿಂದ ಉತ್ತರಪ್ರದೇಶ ಸರ್ಕಾರ ಗಳಿಸುವ ಆದಾಯ ಎಷ್ಟು ?

ತಿರುಮಲ ದೇವಸ್ಥಾನದ ಲಡ್ಡು ಕೌಂಟರ್ ಸಂಖ್ಯೆ 47ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೌಂಟರ್ ನಲ್ಲಿರುವ ಕಂಪ್ಯೂಟರ್ ನ ಯುಪಿಎಸ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಇದ್ದಕಿದ್ದಂತೆ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣವೇ ದೇವಾಲಯದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಇತ್ತೀಚೆಗೆ ವೈಕುಂಠ ದ್ವಾರದ ದರ್ಶನ ಟೋಕನ್ ವಿತರಣೆ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಘಟನೆಯಲ್ಲಿ 6 ಜನ ಸಾವನ್ನಪ್ಪಿದ್ದರು.

 

Advertisement
1 Comment

Leave a Reply

Your email address will not be published. Required fields are marked *

LATEST NEWS

ಮೆಕ್ಸಿಕೊದಲ್ಲಿ ಟ್ರಕ್‌ ಮತ್ತು ಬಸ್ಸು ಢಿಕ್ಕಿಯಾಗಿ 41 ಜನ ಸಜೀವ ದಹನ

Published

on

ಮೆಕ್ಸಿಕೊ: ಬಸ್‌ಗೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 41 ಮಂದಿ ಸಜೀವ ದಹನಗೊಂಡ ಘಟನೆ ದಕ್ಷಿಣ ಮೆಕ್ಸಿಕೊ ನಗರದ ತಬಾಸ್ಕೊ ಎಂಬಲ್ಲಿ ನಡೆದಿದೆ.

ಬಸ್ಸಿನಲ್ಲಿ ಒಟ್ಟು 48 ಮಂದಿ ಪ್ರಯಾಣಿಕರಿದ್ದರು. ಮೃತ ಪಟ್ಟವರಲ್ಲಿ ಬಸ್ಸು ಮತ್ತು ಟ್ರಕ್‌ ನ ಇಬ್ಬರು ಚಾಲಕರೂ ಸೇರಿದ್ದಾರೆ. ಬಸ್ ಬೆಂಕಿಗೆ ಆಹುತಿಯಾದಾಗ, 39 ಪ್ರಯಾಣಿಕರು ಮತ್ತು ಇಬ್ಬರು ಚಾಲಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು. ಬಳಿಕ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.

ಘಟನಾ ಸ್ಥಳದಲ್ಲಿ ಇದುವರೆಗೆ 18 ಜನರ ಅವಶೇಷಗಳನ್ನು ಗುರುತಿಸಲಾಗಿದೆ. 7 ಮಂದಿ ಗಾಯಾಳುಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಾವು- ನೋವು ಹೆಚ್ಚಾಗುವ ಸಾಧ್ಯತೆ ಇದೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ.

Continue Reading

BIG BOSS

ಮಾನ್ಸಿ ಜೋಶಿಯ ಅರಶಿಣ ಶಾಸ್ತ್ರದಲ್ಲಿ ಮಿಂಚಿದ ಮೋಕ್ಷಿತಾ ಪೈ

Published

on

ಪಾರು ದಾರಾವಾಹಿಯ ನಟಿ ಮೋಕ್ಷಿತಾ ಪೈ ಬಿಗ್‌ಬಾಸ್ ಸೀಸನ್ 11 ರಲ್ಲಿ ತಮ್ಮ ನಡೆ-ನುಡಿ, ಆಟದ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದರು. ಬಿಗ್‌ಬಾಸ್‌ನಿಂದ ಬಂದ ಬಳಿಕ ಇದೀಗ ತನ್ನ ಸ್ನೇಹಿತೆ ಮಾನ್ಸಿ ಜೋಶಿಯ ಅರಶಿಣ ಶಾಸ್ತ್ರದಲ್ಲಿ ಮಿಂಚಿದ್ದಾರೆ.

ಓಪನ್ ಹೇರ್ ಬಿಟ್ಕೊಂಡು, ಕಟ್ಟಿಗೆ ಗ್ಲಾಸ್ ಹಾಕೊಂಡು, ಹಳದಿ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಡಿಫ್ರೆಂಟ್ ಲುಕ್‌ನಲ್ಲಿ ಬಂದಂತಹ ಮೋಕ್ಷಿತಾಳನ್ನು ನೋಡಿ ಅಲ್ಲಿಯ ಅತಿಥಿಗಳು ಖುಷಿ ಪಟ್ಟಿದ್ದಾರೆ.

ಇನ್ನು ಮಾನ್ಸಿ ಹಾಗೂ ಮೋಕ್ಷಿತಾ ಪಾರು ಸೀರಿಯಲ್‌ನಲ್ಲಿ ನಟಿಸುತ್ತಿದ್ದರು. ಅಂದಿನಿಂದ ಇಂದಿನವರೆಗೆ ಇವರ ನಡುವಿನ ಗೆಳೆತನ ಮುಂದುವರಿದಿದೆ. ರಾಘವ್ ಎಂಬುವವನನ್ನು ಮಾನ್ಸಿ ವಿವಾಹವಾಗಲಿದ್ದು, ಫೆಬ್ರವರಿ 16 ರಂದು ಈ ಜೋಡೆಯ ಕಲ್ಯಾಣ ನಡೆಯಲಿದೆ.

ಬಿಗ್‌ಬಾಸ್ ಕನ್ನಡ ಸೀಸನ್ 11 ರಲ್ಲಿ ಸ್ಫರ್ಧಿಯಾಗಿ ಭಾಗವಹಿಸಿ, ಫಿನಾಲೆ ಸುತ್ತಿನವರೆಗೂ ಆಗಮಿಸಿದ ಮೋಕ್ಷಿತಾ, ಮೂರನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಇವರಿಗೆ ಅಪಾರ ಅಭಿಮಾನಿಗಳೂ ಇದ್ದಾರೆ.

Continue Reading

LATEST NEWS

ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಇಂದು ರಾಜೀನಾಮೆ

Published

on

ಮಂಗಳೂರು/ಬೆಂಗಳೂರು : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಆಡಳಿತರೂಢ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ, ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ  ಗೆಲುವು ಸಾಧಿಸುವ ಮೂಲಕ ಕಲ್ಕಾಜಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರು.  ದೆಹಲಿ ಸಿಎಂ ಗೆಲುವು ಕಂಡಿದ್ದರೂ ಈ ಬಾರಿಯ ಸಿಎಂ ಅಭ್ಯರ್ಥಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಹೀನಾಯವಾಗಿ ಸೋಲನ್ನಪ್ಪಿದ್ದಾರೆ. ಈ ಬಾರಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದ ಆಮ್ ಆದ್ಮಿ ಪಕ್ಷವನ್ನು ದೆಹಲಿ ಮತದಾರರು ತಿರಸ್ಕರಿಸಿದ್ದಾರೆ. ಬಿಜೆಪಿಯ ರಮೇಶ್ ಬಿಧುರಿ ಎದುರು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅತಿಶಿ ಗೆಲುವು ಕಂಡಿದ್ದಾರೆ. ಆದರೆ, ದೆಹಲಿಯಾದ್ಯಂತ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, 27 ವರ್ಷಗಳ ಬಳಿಕ ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಪಕ್ಷ ಅಧಿಕಾರ ಹಿಡಿಯಲಿದೆ.

ಹೀಗಾಗಿ ಅತಿಶಿ ಅವರು ಇಂದು ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಸಿಎಂ ಕಾರ್ಯಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಇದನ್ನೂ ಓದಿ: ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಮಾಯವಾದ ಭೂತ

ಇದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಆಡಳಿತ ಕೊನೆಗೊಳ್ಳಲಿದ್ದು, ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲಿದೆ. 2015 ಹಾಗೂ 20220ರಲ್ಲಿ ಎಎಪಿ ಭರ್ಜರಿ ಗೆಲುವು ಸಾಧಿಸಿತ್ತು.

ಈ ಬಾರಿ ದೆಹಲಿಯಲ್ಲಿ ಆಡಳಿತ ವಿರೋಧಿ ಅಲೆಗೆ ಸಿಲುಕಿದ ಎಎಪಿ ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ 48 ಸ್ಥಾನ ಗೆದ್ದುಕೊಂಡಿದೆ. ಅಧಿಕಾರ ಕಳೆದುಕೊಂಡಿರುವ ಎಎಪಿ 22 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಕಾಂಗ್ರೆಸ್ ಸತತ ಮೂರನೇ ಸಲವೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಎಎಪಿಯ ಘಟಾನುಘಟಿ ನಾಯಕರಿಗೆ ಹೀನಾಯ ಸೋಲು ಎದುರಾಗಿದೆ. ಬಿಜೆಪಿಯಿಂದ ಯಾರು ಸಿಎಂ ಆಗಲಿದ್ದಾರೆ ಎಂಬುದು ಕುತೂಹಲವೆನಿಸಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page