Connect with us

ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪ್ರಕರಣ: ಭಾನುವಾರ ಮೃತಪಟ್ಟ ಮಹಿಳೆಯ ಅತ್ತೆಗೆ ಕೊರೊನಾ ಪಾಸಿಟಿವ್..!

Published

on

ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪ್ರಕರಣ: ಭಾನುವಾರ ಮೃತಪಟ್ಟ ಮಹಿಳೆಯ ಅತ್ತೆಗೆ ಕೊರೊನಾ ಪಾಸಿಟಿವ್..!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಇದೀಗ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಬಂಟ್ವಾಳದ ಮೃತ ಮಹಿಳೆಯ ಅತ್ತೆ 75 ವರ್ಷದ ವೃದ್ಧೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಎಪ್ರಿಲ್ 19 ರಂದು ಬಂಟ್ವಾಳದ ಮಹಿಳೆ ಮೃತರಾಗಿದ್ದು, ಇದೀಗ ಮಹಿಳೆಯ ಅತ್ತೆಗೆ ಕೊರೋನಾ ಪಾಸಿಟಿವ್ ಬಂದಿದ್ದು, ಬಂಟ್ವಾಳದ ಜನತೆಗೆ ಮತ್ತಷ್ಟು ಆತಂಕ ತಂದೊಡ್ಡಿದೆ.

75 ವರ್ಷದ  ಈ ವೃದ್ಧ ಮಹಿಳೆಯಲ್ಲಿ ಕೊರೋನಾ ಸೋಂಕು ಧೃಡಪಟ್ಟಿದ್ದು ಮಂಗಳೂರಿನ ಕೊವೀಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ.

ಪಾರ್ಶ್ವವಾಯು ಪೀಡಿತೆಯಾಗಿದ್ದ ಈಕೆ ಎಪ್ರಿಲ್‌ 18ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೇ ಸಂದರ್ಭ ಮನೆಯ ಸೊಸೆ ಕೊರೊನಾ ಸೋಂಕು ಉಲ್ಭಣಗೊಂಡು ಕಳೆದ ಭಾನುವಾರ ಮಂಗಳೂರಿನ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಬಳಿಕ ಆಕೆಯ ಮನೆಯ ಪಕ್ದ 67 ವರ್ಷದ ಹಿರಿಯ ಮಹಿಳೆಯಲ್ಲೂ ಕೊರೊನಾ ಸೋಂಕು ಧೃಡಪಟ್ಟಿದ್ದು ಅವರೂ ಮಂಗಳೂರಿನ ವೆನ್ಲಾಕ್‌ ಕೊರೊನಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮೃತಪಟ್ಟ ಮಹಿಳೆ ಯ ಪತಿ, ಮಗ,ಮತ್ತು ಸುತ್ತಮುತ್ತಲ 32 ಮಂದಿಯನ್ನು ಮೂಜಾಗೃತಾ ಕ್ರಮವಾಗಿ ಕ್ವಾರಂಟೈನ್ ಮಾಡಲಾಗಿತ್ತು.

ಅವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ರವಾನಿಸಲಾಗಿತ್ತು. ಆದರೆ ಇದೀಗ ಮಹಿಳೆಯ ಪತಿ ಮತ್ತು ಮಕ್ಕಳ ವರದಿ ನೆಗೆಟಿವ್ ಬಂದಿದೆ. ಇನ್ನು ಉಳಿದವರ ಪರೀಕ್ಷಾ ರಿಪೋರ್ಟ್ ನಿರೀಕ್ಷಿಸಲಾಗುತ್ತಿದೆ.

ಬಂಟ್ವಾಳ ಒಂದೇ ಪ್ರಧೇಶದಲ್ಲಿ ಮೂರು ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಇಡಿ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ.

ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿತ ಪ್ರಕರಣ 17 ಕ್ಕೇರಿಕೆಯಾಗಿದೆ.

 

 

Advertisement
Click to comment

Leave a Reply

Your email address will not be published. Required fields are marked *

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page