Connect with us

LATEST NEWS

ಅಲ್ಲು ಅರ್ಜುನ್ ಗೆ ಮತ್ತೊಂದು ಸಂಕಷ್ಟ; ಪುಷ್ಪ 2 ಕಾಲ್ತುಳಿತದಲ್ಲಿ ಗಾಯಗೊಂಡ 9 ವರ್ಷದ ಬಾಲಕನ ಮೆದುಳು ನಿಷ್ಕ್ರಿಯ !

Published

on

ಮಂಗಳೂರು/ಹೈದರಾಬಾದ್: ಪುಷ್ಪಾ2 ಚಿತ್ರದ ಕಾಲ್ತುಳಿತದಲ್ಲಿ ಅಭಿಮಾನಿ ಮೃತಪಟ್ಟ ಪ್ರಕರಣದಿಂದ ಅಲ್ಲು ಅರ್ಜುನ್ ಜೈಲು ಸೇರಿ ಬಿಡುಗಡೆಯಾಗಿದ್ದಾರೆ. ಆದರೆ ಅಲ್ಲು ಅರ್ಜುನ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕನ ಮೆದುಳು ನಿಷ್ಕ್ರಿಯಗೊಂಡಿದೆ.

ಕಾಲ್ತುಳಿತದಲ್ಲಿ ಸಾವನ್ನಪ್ಪಿರುವ ಮಹಿಳೆಯ 9ವರ್ಷದ ಮಗ ಶ್ರೀತೇಜಾಗೆ ಬ್ರೈನ್ ಡೆಡ್ ಆಗಿದ್ದು, ಬಾಲಕ ದಾಖಲಾಗಿದ್ದ ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಭೇಟಿ ನೀಡಿದ್ದರು. ಬಳಿಕ ಮಾತನಾಡಿದ ಅವರು ಕಾಲ್ತುಳಿತದ ಸಂದರ್ಭದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಲಕ ಶ್ರೀತೇಜ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಇದೀಗ ಬಾಲಕನ ಮೆದುಳು ನಿಷ್ಕ್ರಿಯಗೊಂಡಿದೆ. ಸದ್ಯ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ದೀರ್ಘಾವಧಿಯಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ರೀತೇಜಾ ಅವರ ಆರೋಗ್ಯದ ಕುರಿತು ಶೀಘ್ರದಲ್ಲೇ ವೈದ್ಯಕೀಯ ಬುಲೆಟಿನ್ ಅನ್ನು ಸಹ ವೈದ್ಯರು ಬಿಡುಗಡೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ; ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹ !

ಶ್ರೀ ತೇಜಾ ಚಿಕಿತ್ಸೆ ಹಾಗೂ ಆರೋಗ್ಯ ಪರಿಸ್ಥಿತಿ ಕುರಿತು ಶೀಘ್ರದಲ್ಲೇ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ ಎಂದು ಸಿವಿ ಆನಂದ್ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಆರೋಗ್ಯ ಕಾರ್ಯದರ್ಶಿ ಡಾ.ಕ್ರಿಸ್ಟಿನಾ, ನಾವು ಪ್ರತಿ ದಿನ ಶ್ರೀ ತೇಜಾ ಆರೋಗ್ಯ ಪರಿಸ್ಥಿತಿ ಮಾನಿಟರ್ ಮಾಡುತ್ತಿದ್ದೇವೆ. ಆದಷ್ಟು ಬೇಗ ಶ್ರೀ ತೇಜ ಗುಣಮುಖರಾಗಲಿ ಅನ್ನೋದು ನಮ್ಮ ಬಯಕೆ. ಇದಕ್ಕಾಗಿ ಎಲ್ಲಾ ಪ್ರಯತ್ನ ಮಾಡುತ್ತೇವೆ. ವೈದ್ಯರ ತಂಡ ಸಂಪೂರ್ಣ ನಿಗಾ ವಹಿಸಿದೆ ಎಂದು ಡಾ.ಕ್ರಿಸ್ಟಿನಾ ಹೇಳಿದ್ದಾರೆ. ಶ್ರೀ ತೇಜಾ ಉಳಿಸಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.

ಶ್ರೀ ತೇಜಾ ತಂದೆ ಜೊತೆ ಚರ್ಚಿಸಲಾಗಿದೆ. ಶ್ರೀ ತೇಜಾ ತಂದೆಗೆ ಎಲ್ಲಾ ನೆರವು ನೀಡಲಾಗುತ್ತದೆ. ಶ್ರೀ ತೇಜಾ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ. ಚಿಕಿತ್ಸೆಯ ಮಾಹಿತಿ ನೀಡಲಾಗಿದೆ. ಪ್ರತಿ ಅಪ್‌ಡೇಟ್ ನೀಡಲಾಗಿದೆ ಎಂದು ಕಾರ್ಯದರ್ಶಿ ಹೇಳಿದ್ದಾರೆ.

 

LATEST NEWS

ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ?

Published

on

ಮಂಗಳೂರು: ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಯಾವುದು? ಅಮೆರಿಕ, ಚೀನಾ ಅಥವಾ ರಷ್ಯಾ ಅಲ್ಲ. 2025 ರ ವಿಶ್ವದ ಅತ್ಯಂತ ಸಂತೋಷದಾಯಕ ದೇಶಗಳ ಸೂಚ್ಯಂಕ ಪಟ್ಟಿ ಬಿಡುಗಡೆ ಮಾಡಿದೆ.


ವಲ್ಡ್ ಹ್ಯಾಪಿನೆಸ್ ರಿಪೋರ್ಟ್ 2025 ರ ಪ್ರಕಾರ ಫಿನ್‌ಲ್ಯಾಂಡ್ ಸತತ ಎಂಟನೇ ವರ್ಷವೂ ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಎಂಬ ಕೀರ್ತಿ ಗಳಿಸಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಯೋಗಕ್ಷೇಮ ಕೇಂದ್ರವು ಪ್ರಕಟಿಸಿದ ವಾರ್ಷಿಕ ವರದಿಯಲ್ಲಿ 10 ದೇಶಗಳು ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿವೆ.

ಫಿನ್‌ಲ್ಯಾಂಡ್ ಮೊದಲ ಸ್ಥಾನವನ್ನು ಹೊಂದಿದೆ. ಡೆನ್ಮಾರ್ಕ್, ಐಸ್ಲ್ಯಾಂಡ್ ಮತ್ತು ಸ್ವೀಡನ್ ನಂತರದ ಸ್ಥಾನವನ್ನು ಹೊಂದಿದೆ. ಡೆನ್ಮಾರ್ಕ್, ಐಸ್ಲ್ಯಾಂಡ್ ಮತ್ತು ಸ್ವೀಡನ್ ನಂತರದ ಸ್ಥಾನಗಳಲ್ಲಿವೆ. ಮತ್ತೊಂದೆಡೆ ಭೀಕರ ಅಂತರ್ಯುದ್ಧದಲ್ಲಿ ಕಾದಾಡುತ್ತಿರುವ ಅಫ್ಘಾನಿಸ್ತಾನ ಮತ್ತೊಮ್ಮೆ ಸಂತೋಷದ ರಾಷ್ಟ್ರಗಳ ಪಟ್ಟಿಯಲ್ಲಿ ಕೊನೆಯ ಸ್ಥಾನ ಸೇರಿದ್ದು, 147ನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಪಶ್ಚಿಮ ಆಫ್ರಿಕಾದ ಸಿಯೆರಾ ಲಿಯೋನ್ (146) ಮತ್ತು ಲೆಬನಾನ್ (145) ಹಿಂದಿನ ಸ್ಥಾನದಲ್ಲಿದೆ.

ವಿಚಿತ್ರ ಎಂಬಂತೆ ಹಮಾಸ್ ಜೊತೆ ಭೀಕರ ಯುದ್ದ ನಡೆಸಿದ ಇಸ್ರೇಲ್ ದೇಶವು ಎಂಟನೇ ಸ್ಥಾನದಲ್ಲಿದೆ. ಕೋಸ್ಟಾ ರಿಕಾ ಮತ್ತು ಮೆಕ್ಸಿಕೊ ಕೂಡ ಮೊದಲ ಬಾರಿಗೆ ಅಗ್ರ ಹತ್ತು ಸ್ಥಾನಗಳಲ್ಲಿದ್ದು, ಈ ದೇಶಗಳು ಕ್ರಮವಾಗಿ 6 ​​ಮತ್ತು 10ನೇ ಶ್ರೇಯಾಂಕದಲ್ಲಿವೆ.

ಇದನ್ನೂ ಓದಿ:  ಐಪಿಎಲ್ 2025: ಕೆಕೆಆರ್-ಆರ್ಸಿಬಿ ಉದ್ಘಾಟನಾ ಪಂದ್ಯವೇ ರದ್ದಾಗುವ ಸಾಧ್ಯತೆ?

ದೇಶ ಪ್ರತಿಯಿಂದ ಒಂದರಿಂದ ಮೂರು ಸಾವಿರ ಜನರ ಮಾದರಿ ಗಾತ್ರವನ್ನು ಆಯ್ಕೆ ಮಾಡಲಾಗಿದೆ. ಕೇಳಲಾದ ಪ್ರಶ್ನೆಗಳ ಆಧಾರದ ಮೇಲೆ ಅವರಿಗೆ ರಚಿಸಲಾಗಿದೆ. ಈ ಪ್ರಶ್ನೆಗಳಿಗೆ 0 ರಿಂದ 10 ರ ರೇಟಿಂಗ್‌ನಲ್ಲಿ ಉತ್ತರಿಸಬೇಕು. 0 ಎಂದರೆ ಕೆಟ್ಟದು, 10 ಎಂದರೆ ಅತ್ಯುತ್ತಮ ಅನುಭವ. ಸಂಪತ್ತು ಮತ್ತು ಅಭಿವೃದ್ಧಿ, ಸಂಬಂಧಗಳು, ಜನರ ನಡುವಿನ ನಂಬಿಕೆ, ಆತ್ಮತೃಪ್ತಿ, ಸಾಮಾಜಿಕ ಬೆಂಬಲ, ಜೀವಿತಾವಧಿ, ಸ್ವಾತಂತ್ರ್ಯ, ಔದಾರ್ಯ ಮತ್ತು ಭ್ರಷ್ಟಾಚಾರ ಎಲ್ಲಾ ಈ ಅಂಶಗಳನ್ನು ಪರಿಗಣಿಸಿ ದೇಶಗಳಿಗೆ ಸ್ಥಾನ ನಿಗದಿಪಡಿಸಲಾಗಿದೆ.

ಅಗ್ರ 10 ಅಗ್ರ ಸ್ಥಾನದಲ್ಲಿರುವ ದೇಶಗಳು
1. ಫಿನ್ಲ್ಯಾಂಡ್

2. ಡೆನ್ಮಾರ್ಕ್

3. ಐಸ್ಲ್ಯಾಂಡ್

4. ಸ್ವೀಡನ್

5. ನೆದರ್ಲ್ಯಾಂಡ್

6. ಕೋಸ್ಟಾ ರಿಕಾ

7. ನಾರ್ವೆ

8. ಇಸ್ರೇಲ್

9. ಲಕ್ಷಂಬರ್ಗ್

೧೦. ಮೆಕ್ಸಿಕೋ

ಭಾರತಕ್ಕೆ ಎಷ್ಟನೇ ಸ್ಥಾನ?
2025ರ ಸಂತೋಷದ ವರದಿಯಲ್ಲಿ 147 ದೇಶಗಳನ್ನು ಪರಿಗಣಿಸಿ ವರದಿ ಸಿದ್ದಪಡಿಸಲಾಗಿದೆ. ಇದರಲ್ಲಿ ಭಾರತವು 118ನೇ ಸ್ಥಾನವನ್ನು ಹೊಂದಿದೆ. ಕಳೆದ ವರ್ಷಕ್ಕಿಂತ ಕೊಂಚ ಸುಧಾರಿಸಿದೆ ಎಂದು ಹೇಳಬಹುದು. ಏಕೆಂದರೆ 2024ರ ಹ್ಯಾಪಿನೆಸ್ ರಿಪೋರ್ಟ್‌ನಲ್ಲಿ ಭಾರತವು 126ನೇ ಸ್ಥಾನದಲ್ಲಿತ್ತು. ಆದರೆ 2025ರಲ್ಲಿ ಭಾರತವು 8 ಸ್ಥಾನ ಮೇಲಕ್ಕೇರಿದೆ.

ಶ್ರೇಯಾಂಕದಲ್ಲಿ ಕುಸಿತಕಂಡ ಅಮೆರಿಕ
ಸಂತೋಷ ಸೂಚ್ಯಂಕ ವರದಿಯಲ್ಲಿ ಕಳೆದ ವರ್ಷ 23ನೇ ಸ್ಥಾನದಲ್ಲಿದ್ದ ಅಮೆರಿಕ ಈ ಬಾರಿ ಒಂದು ಸ್ಥಾನ ಕುಸಿದಿದೆ. 2012ರಲ್ಲಿ 11ನೇ ಸ್ಥಾನದಲ್ಲಿದ್ದ ಅಮೆರಿಕ ಈಗ 24ನೇ ಸ್ಥಾನಕ್ಕೆ ಕುಸಿದಿರುವುದು ಗಮನಾರ್ಹ.

Continue Reading

LATEST NEWS

ಫಿನಾಯಿಲ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Published

on

ಗದಗ: ಪ್ರೀತಿ ಪ್ರೇಮದ ಕಾರಣದಿಂದ ಪುರುಷನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಫಿನಾಯಿಲ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡರಗಿ ತಾಲೂಕಿನ ಬೆಟಗೇರಿ ಬಾಲಕಿಯರ ವೃತ್ತಿಪರ ಹಾಸ್ಟೆಲ್‌ನಲ್ಲಿ ನಡೆದಿದೆ.

ವಿರಪಾಪೂರ ತಾಂಡಾದ ನಿವಾಸಿ ವಂದನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. 19 ವರ್ಷದ ವಂದನಾಗೆ ಅದೇ ಗ್ರಾಮದ 42 ವರ್ಷದ ಕಿರಣ್ ಕಾರಬಾರಿ ಎಂಬಾತ ಪ್ರೀತಿಸುತ್ತಿದ್ದ. ಬಳಿಕ ಮದುವೆಯಾಗು ಅಂತ ಒತ್ತಾಯಿಸುತ್ತಿದ್ದ. ಪ್ರತಿದಿನ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ. ಮದುವೆ ಆಗದಿದ್ದರೆ ಫೋಟೋ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾಗೆ ಹಾಕುವುದಾಗಿ ಹೆದರಿಸಿದ್ದ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ.

ಗುರುವಾರ ಹಾಸ್ಟೆಲ್‌ನಲ್ಲಿ ಪಿನಾಯಿಲ್ ಸೇವಿಸಿದ್ದಾಳೆ, ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ.

ಆರೋಪಿಗೆ ತಕ್ಕ ಶಿಕ್ಷೆ ಆಗಬೇಕೆಂದು ಕುಟುಂಬಸ್ಥರ ಆಗ್ರಹವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿ ಕಿರಣ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಗದಗನ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಸದನದಲ್ಲಿ ಗದ್ದಲ; 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು!

Published

on

ಮಂಗಳೂರು/ ಬೆಂಗಳೂರು :  ಇಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿರುವ  ಬಜೆಟ್ ಅಂಗೀಕಾರಗೊಂಡಿದೆ. ಈ ವೇಳೆ ವಿಪಕ್ಷ ಸದಸ್ಯರು ಬಜೆಟ್ ನಲ್ಲಿ ಸೇರಿಸಿರುವ ಕೆಲವೊಂದು ವಿಚಾರಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ಸದನದಲ್ಲಿ ಹನಿಟ್ರ್ಯಾಪ್ ವಿಚಾರವೂ ಸದ್ದು ಮಾಡಿದ್ದು, ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಿಟ್ಟ ನಾಲ್ಕು ಶೇಕಡ ಮೀಸಲಾತಿ ರದ್ದು ಮಾಡುವಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಅಲ್ಲದೇ, ಸ್ಪೀಕರ್ ಪೀಠಕ್ಕೇರಿದ ವಿಪಕ್ಷ ಸದಸ್ಯರು
ಖಾದರ್ ಮೇಲೆ ಪೇಪರ್‌ಗಳನ್ನು ಹರಿದು ಹಾಕಿ ಗಲಾಟೆ ಮಾಡಿದ್ದರು. ಮಧ್ಯಾಹ್ನ ಭೋಜನ ವಿರಾಮದ ಬಳಿಕವೂ ಇದು ಮುಂದುವರಿದಿತ್ತು.

ಹೀಗಾಗಿ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆ ಕರಾವಳಿಯ ಮೂವರು ಸೇರಿದಂತೆ ಒಟ್ಟು 18 ಬಿಜೆಪಿ ಶಾಸಕರನ್ನು 6 ತಿಂಗಳ ವರೆಗೆ ಅಮಾನತುಗೊಳಿಸಿ ಸ್ಪೀಕರ್ ಖಾದರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಗದ್ದಲದ ನಡುವೆ ಅಂಗೀಕಾರವಾದ ಬಜೆಟ್; ಮುಸ್ಲಿಂ ಮೀಸಲಾತಿ ರದ್ಧಿಗೆ ಆಗ್ರಹಿಸಿ ಸ್ಪೀಕರ್ ಪೀಠಕ್ಕೇರಿದ ವಿಪಕ್ಷ ಸದಸ್ಯರು

ಯಾರೆಲ್ಲ ಅಮಾನತು?

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಮೂಡುಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ದೊಡ್ಡಣ್ಣ ಗೌಡ ಪಾಟೀಲ್, ಸಿ ಕೆ ರಾಮಮೂರ್ತಿ, ಅಶ್ವತ್ಥ ನಾರಾಯಣ, ಎಸ್ ಆರ್ ವಿಶ್ವನಾಥ್, ಬೈರತಿ ಬಸವರಾಜ, ಎಂ ಆರ್ ಪಾಟೀಲ್, ಚನ್ನಬಸಪ್ಪ, ಬಿ.ಸುರೇಶ್ ಗೌಡ, ಶರಣು ಸಲಗಾರ್, ಶೈಲೇಂದ್ರ ಬೆಲ್ದಾಳೆ, ಹರೀಶ್ ಬಿಪಿ, ಮುನಿರತ್ನ, ಬಸವರಾಜ ಮತ್ತಿಮೋಡ್, ಧೀರಜ್ ಮುನಿರಾಜು, ಡಾ. ಚಂದ್ರು ಲಮಾಣಿ.

Continue Reading
Advertisement

Trending

Copyright © 2025 Namma Kudla News

You cannot copy content of this page