Connect with us

DAKSHINA KANNADA

ವಾಯುಭಾರ ಕುಸಿತ : ಕರಾವಳಿಯ ಅನೇಕ ಕಡೆಗಳಲ್ಲಿ ಮಳೆ- ಯೆಲ್ಲೋ ಅಲರ್ಟ್ ಘೋಷಣೆ..!

Published

on

ಮಂಗಳೂರು : ಅಂಡಮಾನ್‌ ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದರಿಂದ ಇಂದು ಸಂಜೆ ಕರಾವಳಿ ಕರ್ನಾಟಕದ ಅನೇಕ ಭಾಗಗಳಲ್ಲಿ ಮಳೆ ಸುರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ಸಂಜೆ ಉತ್ತಮ ಮಳೆಯಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆ ಮುಂದುವರಿಯುವ ನಿರೀಕ್ಷೆ ಇದೆ.

ಮೂರು ದಿನಗಳಿಂದ ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮೈಸೂರು, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ..

ಗುಡುಗು ಸಹಿತ ಚಂಡಮಾರುತದ ಕಾರಣದಿಂದ ಮಾರ್ಚ್ 24ರವರೆಗೆ ದಕ್ಷಿಣ ಒಳಭಾಗ ಮತ್ತು ಕರಾವಳಿ ಕರ್ನಾಟಕದಾದ್ಯಂತ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading

DAKSHINA KANNADA

ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

Published

on

ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮೇ 20 ರಂದು ಮತ್ತೆ ಕೈದಿಗಳ ನಡುವೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ.

ಅಡುಗೆ ಕೆಲಸ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ ಕೈದಿ ಮುನೀರ್ ಹೊಡೆದಿದ್ದಾನೆ. ಇದರಿಂದ, ಆಕ್ರೋಶಗೊಂಡ ಇತರ ಕೈದಿಗಳು ಮುನೀರ್ ಮೇಲೆ ಹಲ್ಲೆಗೆ ಮುಂದಾದರು.

ಇದನ್ನೂ ಓದಿ: ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

ತಕ್ಷಣ ಜಾಗೃತರಾದ ಜೈಲಿನ ಅಧಿಕಾರಿಗಳು ಮುನೀರ್ ಮೇಲೆ ಹಲ್ಲೆ ಮಾಡುವುದನ್ನು ತಪ್ಪಿಸಿದರು. ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ.

ಬರ್ಕೆ ಪೊಲೀಸರು ಜೈಲು ಆವರಣಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರಸ್ತುತ ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

DAKSHINA KANNADA

ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

Published

on

ಮಂಗಳೂರು: ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ “ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಚಿತ್ರ ನಿರ್ಮಾಪಕರು, ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಸಿನಿಪೋಲಿಸ್ ಪಿವಿ ಆರ್ ,ರೂಪವಾಣಿ , ಉಡುಪಿಯಲ್ಲಿ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್ ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್ ಹಾಗೂ ಸಿನಿ ಗ್ಯಾಲಕ್ಸಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.

ಇದನ್ನೂ ಓದಿ: 35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

ತುಳು ಚಿತ್ರರಂಗದ ಖ್ಯಾತ ನಟರು ಇದರಲ್ಲಿ ನಟಿಸಿದ್ದಾರೆ ಎಂದು ವಿವರಿಸಿದರು. ವೇದಿಕೆಯಲ್ಲಿ ರಾಕೇಶ್ ಆಚಾರ್ಯ, ಸುಧಾಕರ್, ಪ್ರಶಾಂತ್ ಆಚಾರ್ಯ, ತಮ್ಮ ಲಕ್ಷ್ಮಣ ಮೊದಲಾದವರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page