Connect with us

DAKSHINA KANNADA

ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?

Published

on

ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?

ಅಶ್ವಿನಿ ದೇವತೆಗಳು ಯಾರು.?

ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್‌ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.

ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?

ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.

ಅಶ್ವಿನಿ ದೇವತೆಗಳ ಮಹತ್ವ:

ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.

ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

DAKSHINA KANNADA

ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

Published

on

ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

ಉಷಾ ಅಶೋಕ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತಕ್ಕೊಳಗಾಗಿದೆ. ಮನೆಯ ಹಲವು ಸಾಮಾಗ್ರಿಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಜನರಿದ್ದ ವೇಳೆ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದ್ದರೂ ಮನೆ ಮಂದಿ ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page