Connect with us

LATEST NEWS

ಸುಬ್ರಹ್ಮಣ್ಯದಲ್ಲಿ ಹಿಂದೂ ಹುಡುಗಿ ಜತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿತ…!

Published

on

ಸುಬ್ರಹ್ಮಣ್ಯ: ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದನೆನ್ನಲಾದ ಮುಸ್ಲಿಂ ಯುವಕನನ್ನು ಅರೆ ಬೆತ್ತಲೆಗೊಳಿಸಿ ಗುಂಪೊಂದು ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ.


ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಆತ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಮುಸ್ಲಿಂ ಯುವಕ ಮತ್ತು ಹಿಂದೂ ವಿದ್ಯಾರ್ಥಿನಿ ಮೊದಲು ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದ ಬಳಿ ಕಂಡು ಬಂದಿದ್ದು, ಬಳಿಕ ಕುಮಾರಧಾರ ಬಳಿ ಬಂದಾಗ ಗುಂಪೊಂದು ಯುವಕನನ್ನು ಥಳಿಸಿದೆ ಎನ್ನಲಾಗಿದೆ.


ಹಲ್ಲೆಗೊಳಗಾದ ಯುವಕ ಸುಳ್ಯದ ಕಲ್ಲುಗುಂಡಿಯ ನಿವಾಸಿ ಎಂದು ತಿಳಿದು ಬಂದಿದೆ.
ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

 

Continue Reading

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading

bangalore

ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

Published

on

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಆತ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನ ಕಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ.

ಇದನ್ನೂ ಓದಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page