Connect with us

LATEST NEWS

ಉಡುಪಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲವಾರು ದಾಳಿ

Published

on

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಯುವಕನೊಬ್ಬನ ಮೇಲೆ ತಲವಾರು ಹಾಗೂ ಕಬ್ಬಿಣದ ಚಯರ್‌ನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯಲ್ಲಿ ನಡೆದಿದೆ.


ತೀವ್ರ ಹಲ್ಲೆಗೊಳಾಗದ ಯುವಕನನ್ನು ಉಡುಪಿ ಕಾಂಗ್ರೆಸ್ ನ NSUI ಉಪಾಧ್ಯಕ್ಷ ಚಿಟ್ಟಾಡಿ ಬೈಲೂರು ನಿವಾಸಿ ಶರತ್ ಕುಂದರ್ (25) ಎಂದು ತಿಳಿದುಬಂದಿದೆ.
ಶರತ್ ಕುಂದರ್ ಜ.30 ರಂದು ಸಂಜೆ 9 ಗಂಟೆ ಸುಮಾರಿಗೆ ಸ್ನೇಹಿತನ ಗ್ರಾಂಡ್ ವಿಟಾರಾ ಕಾರಿನಲ್ಲಿ ಮಣಿಪಾಲದ ಹೋಟೆಲ್‌ಗೆ ಊಟಕ್ಕೆ ತೆರಳಿದ್ದರು. ಈ ವೇಳೆ ಹೋಟೆಲ್‌ನಲ್ಲಿ ಶರತ್ ಕುಂದರ್ ಅವರ ಕೈ ಆರೋಪಿಗಳ ಪೈಕಿ ಒಬ್ಬರ ಕೈಗೆ ತಾಗಿದ ಹಿನ್ನೆಲೆಯಲ್ಲಿ ಮಾತಿನ ವಾಗ್ವಾದ ನಡೆದಿತ್ತು.

ಬಳಿಕ ಮನೆಗೆ ಹೋಗಲು ಕಲ್ಸಂಕ ಬಳಿ ತಲುಪುವಾಗ ಅಕ್ಷತ್ ಪೈ ಎಂಬಾತ ಫೋನ್ ಮಾಡಿ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಬಗ್ಗೆ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ಬರುವಂತೆ ತಿಳಿಸಿದ್ದಾನೆ.

ಅದರಂತೆ ಶರತ್ ಕುಂದರ್ ಹಾಗೂ ಸ್ನೇಹಿತರಾದ ಧ್ರುವಾ, ಸಿಲಾನ್ ಗಗನ್, ರೋಹಿತ್ ಜೊತೆಗೆ ಪಿಪಿಸಿ ಕ್ರಾಸ್ ಸಮೀಪದ ರಸ್ತೆ ಬದಿಯಲ್ಲಿ ನಿಂತು ಮಾತನಾಡುತ್ತಿದ್ದರು. ಆಗ ರಾತ್ರಿ 11.30ರ ಸುಮಾರಿಗೆ ಟಾಟಾ ಸಫಾರಿ ಹಾಗೂ ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಅಕ್ಷತ್ ಪೈ, ಶಶಾಂಕ್, ರಾಧಾಕೃಷ್ಣ ಜನರಲ್ ಸ್ಟೋರ್‌ನ ಮಾಲಕ ಸೇರಿದಂತೆ ಇನ್ನೂ 6-7 ಮಂದಿ ಏಕಾಏಕಿ ವಾಹನಗಳಿಂದ ಇಳಿದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು; ರೌಡಿಶೀಟರ್ ಹ*ತ್ಯೆ

ಆರೋಪಿಗಳು ತಲವಾರಿನಂತಹ ಆಯುಧ ಹಾಗೂ ಕಬ್ಬಿಣದ ಚಯರ್ ಬಳಸಿ ಕೊಲೆ ಮಾಡುವ ಉದ್ದೇಶದಿಂದ ಶರತ್ ಕುಂದರ್ ಮೇಲೆ ದಾಳಿ ನಡೆಸಿದ್ದು, ತಲೆಗೆ ಬೀಸಿದಾಗ ತಪ್ಪಿಸಿಕೊಳ್ಳಲು ಕೈಗಳನ್ನು ಮುಂದಿಟ್ಟ ಶರತ್ ಅವರಿಗೆ ಬಲ ಅಂಗೈ, ಮಧ್ಯ ಬೆರಳು ಹಾಗೂ ಎಡ ಕೈ ಮಣಿಕಟ್ಟು ಭಾಗದಲ್ಲಿ ರಕ್ತದ ಗಾಯಗಳಾಗಿವೆ. ಹಲ್ಲೆಯ ವೇಳೆ “ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿರುವ ಬಗ್ಗೆ ದೂರಿನಲ್ಲಿ ತಿಳಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page