Connect with us

bangalore

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಿ ಹಲ್ಲೆ-ವೀಡಿಯೋ ವೈರಲ್

Published

on

ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ರೈತ ಮುಖಂಡರಾದ ರಾಕೇಶ್ ಟಿಕಾಯತ್‌ರ ಮೇಲೆ ಕಿಡಿಗೇಡಿಗಳು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲಿ ಭಾಗವಹಿಸಲು ರಾಕೇಶ್ ಟಿಕಾಯತ್‌ ಮತ್ತು ಯದ್ವೀರ್ ಸಿಂಗ್ ಆಗಮಿಸಿದ್ದರು.

ಆ ವೇಳೆ ಮಾತನಾಡಿದ ಅವರು ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲಿಗರು ಹಾಗೂ ಇವರ ನಡುವೆ ಮಾರಾಮಾರಿ ನಡೆದಿದೆ. ಮಾಧ್ಯಮಗೋಷ್ಠಿಯಲ್ಲಿ ಕೆಲವರು ವಾಗ್ವಾದಕ್ಕಿಳಿದಿದ್ದು, ಕಪ್ಪು ಮಸಿ ಎರಚಿದ್ದಲ್ಲದೆ. ಕುರ್ಚಿಗಳನ್ನು ಮನಬಂದಂತೆ ಎಸೆದ ಘಟನೆಯೂ ನಡೆಯಿತು.

ಇನ್ನು ಘಟನೆ ಹಿನ್ನೆಲೆ ಪ್ರತಿಕ್ರಿಯಿಸಿರುವ ರಾಕೇಶ್‌ ಟಿಕಾಯತ್‌, ಮಸಿ ಬಳಿದವರು ಯಾರು ಎಂಬುದು ಗೊತ್ತಿಲ್ಲ ಎಂದಿದ್ದಾರೆ. ಈ ರೀತಿಯ ಘಟನೆ ನಡೆಯದಂತೆ ನೋಡಿಕೊಳ್ಳುವುದು ಪೊಲೀಸರ ಕರ್ತವ್ಯ ಎಂದಿದ್ದಾರೆ.

ಪೊಲೀಸರ ಮೇಲೆ ಜವಾಬ್ದಾರಿಯನ್ನು ಹೊರಿಸಿದ್ದಾರೆ. ಜೊತೆಗೆ ಯಾವುದೇ ಭದ್ರತೆಯನ್ನು ನೀಡಲಾಗಿಲ್ಲ. ಈ ಘಟನೆಗೆ ಕರ್ನಾಟಕ ಸರ್ಕಾರದ ಬೆಂಬಲವಿದೆ ಎಂದು ಆರೋಪಿಸಿದ್ದಾರೆ.

ಘಟನೆ ಸಂಬಂಧ ಮೂವರನ್ನು ಹೈಗ್ರೌಂಡ್​​ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

bangalore

ಇವಳು ಹೆಣ್ಣೋ…ಹೆಮ್ಮಾರಿಯೋ..! ಸಾಕಿದ ನಾಯಿ ಮರಿಯನ್ನೇ ನೆಲಕ್ಕೆ ಬಡಿದು ಸಾಯಿಸಿದ ಕೇರ್ ಟೇಕರ್..!

Published

on

ಬೆಂಗಳೂರು: ಮಹಿಳೆಯೋರ್ವಉ ಎಸಗಿದ  ಕೃತ್ಯ ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸಿದೆ. ಮನೆಕೆಲಸದಾಕೆಯೊಬ್ಬಳು ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

ಅಕ್ಟೋಬರ್ 31ರಂದು ಕೃತ್ಯ ನಡೆದಿದ್ದು, ಮನೆ ಕೆಲಸದಾಕೆ ನಡೆಸಿರುವ ಅಮಾನವೀಯ ಕೃತ್ಯ ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಯಿ ನೋಡಿಕೊಳ್ಳಲೆಂದೇ ಪುಷ್ಪಾಲತಾಳನ್ನು ನೇಮಿಸಲಾಗಿತ್ತು. ನಾಯಿ ಸಾಯಿಸಿದ ಬಳಿಕ ಲಿಫ್ಟ್ ಹೊರಗೆ ಹೋಗಿ ಪ್ರಜ್ಞೆ ತಪ್ಪಿ ಬಿತ್ತು ಎಂದು ಮಹಿಳೆ ಕಥೆ ಕಟ್ಟಿದ್ದಳು.

ಈ ಬಗ್ಗೆ ಶ್ವಾನದ ಮಾಲಕಿ ಸೆಕ್ಯೂರಿಟಿ ಬಳಿ ವಿಚಾರಿಸಿದಾಗ ಮಾಹಿತಿ ದೊರಕಿದೆ. ಅನುಮಾನ ಬಂದು ಸಿಸಿಟಿವಿ ಪರಿಶೀಲನೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಿಳೆ ವಿರುದ್ಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Continue Reading

bangalore

ಪತಿಯನ್ನೇ ಮುಗಿಸಲು ಸಿನಿಮಾ ಸ್ಟೈಲ್ ನಲ್ಲಿ ಸ್ಕೆಚ್ ಹಾಕಿದ ಪತ್ನಿ, ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್

Published

on

ಮೈಸೂರು: ಸಿನಿಮೀಯ ಶೈಲಿಯಲ್ಲಿ ಪ್ಲ್ಯಾನ್ ರೂಪಿಸಿ ಮಹಿಳೆಯೋರ್ವಳು ತಾಳಿ ಕಟ್ಟಿದ ಗಂಡನನ್ನೇ ಮುಗಿಸಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಸಂಗೀತಾ ಗಂಡನ ಮುಗಿಸಲು ಪ್ಲಾನ್ ಮಾಡಿದ ಆರೋಪಿ. ಈಕೆ ಪತಿಯ ಜೀವ ತೆಗೆಯಲು ಸಹೋದರರನ್ನೇ ಬಳಸಿಕೊಂಡಿರುವ ಆರೋಪ ಇದೆ.

ಪ್ರಕರಣ ಸಂಬಂಧ ಈಕೆಯ ಸಹೋದರ ಸಂಜಯ್, ಸಹೋದರನ ಸ್ನೇಹಿತ ವಿಘ್ನೇಶ್ ಹಾಗೂ ಓರ್ವ ಅಪ್ರಾಪ್ತ ಸೇರಿ ನಾಲ್ವರನ್ನು ನಂಜನಗೂಡು ಪೊಲೀಸರು ಬಂಧಿಸಿದ್ದಾರೆ. ಸಂಗೀತಾ, ರಾಜೇಂದ್ರ ಎಂಬಾತನನ್ನು ಮದುವೆ ಆಗಿದ್ದಳು. ಇಬ್ಬರ ಸಂಸಾರ ಆರಂಭದಲ್ಲಿ ಚೆನ್ನಾಗಿಯೇ ಇತ್ತು. ಕೆಲವು ತಿಂಗಳುಗಳಿಂದ ಕೌಟುಂಬಿಕ ಕಲಹ ಉಂಟಾಗಿತ್ತು. ಅದೇ ಕಾರಣಕ್ಕೆ ಸಂಗೀತಾ ಗಂಡನ ಮುಗಿಸಲು ಪ್ಲಾನ್ ಮಾಡಿದ್ದಾಳೆ.

ಸಹೋದರನ ಜೊತೆ ಸೇರಿಕೊಂಡು ದರೋಡೆ ಪ್ಲಾನ್ ರೂಪಿಸಿ ಹತ್ಯೆ ಮಾಡಲು ನಿರ್ಧರಿಸಿದ್ದಳು. ಅದರಂತೆ ಅಕ್ಟೋಬರ್ 25 ರಂದು ರಾಜೇಂದ್ರ- ಸಂಗೀತಾ ಸ್ಕೂಟರ್​ನಲ್ಲಿ ತೆರಳುತ್ತಿದ್ದರು. ಸ್ಕೂಟರ್​ನಲ್ಲಿ ಹೋಗ್ತಿದ್ದಾಗ ಪ್ಲಾನ್ ಪ್ರಕಾರವೇ ದರೋಡೆ ಗ್ಯಾಂಗ್ ಎಂಟ್ರಿಯಾಗಿತ್ತು. ಸಂಗೀತಾಳ ಚಿನ್ನದ ಸರ ಕಸಿಯಲು ಪ್ರಯತ್ನಿಸುತ್ತಾರೆ.

ಅದನ್ನು ತಡೆಯಲು ರಾಜೇಂದ್ರ ಮುಂದೆ ಬಂದಿದ್ದಾನೆ. ಆಗ ರಾಜೇಂದ್ರನಿಗೆ ಡ್ರ್ಯಾಗರ್​​ನಿಂದ ಓರ್ವ ಇರಿದಿದ್ದಾನೆ. ನಂತರ ದರೋಡೆ ಗ್ಯಾಂಗ್ ಅಲ್ಲಿಂದ ಪರಾರಿ ಆಗಿತ್ತು. ಘಟನೆಯ ನಂತರ ರಾಜೇಂದ್ರ ನಂಜನಗೂಡು ಪೊಲೀಸರಿಗೆ ಮಾಹಿತಿ ನೀಡಿದ್ದ. ಪ್ರಕರಣವನ್ನು ಕೂಲಂಕುಶವಾಗಿ ತನಿಖೆ ಮಾಡಿದಾಗ ಪೊಲೀಸರಿಗೆ ಒಂದಷ್ಟು ಅನುಮಾನ ಬಂದಿದೆ. ಕೊನೆಗೆ ತಮ್ಮದೇ ಶೈಲಿಯಲ್ಲಿ ಸಂಗೀತಾಳನ್ನ ವಿಚಾರಣೆಗೆ ಒಳಪಡಿಸಿದಾಗ ಅಸಲಿ ಸತ್ಯ ಬೆಳಕಿಗೆ ಬಂದಿದೆ.

 

 

 

Continue Reading

bangalore

ನೆಲಮಂಗಲ ಹೈವೇಯಲ್ಲಿ ಭೀಕರ ಅಪಘಾತ-ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

Published

on

ನೆಲಮಂಗಲ: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ ಎರ್ಟಿಗಾ ಕಾರು ಬರುತ್ತಿತ್ತು. ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಶಿವಲಿಂಗ ಗೌಡ(60), ಪ್ರಮೀಳಾ (55) ಮೃತಪಟ್ಟ ದುರ್ದೈವಿಗಳು.

ಕಾರಿನಲ್ಲಿ ಕುಟುಂಬ ಸದಸ್ಯರು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದರು. ಅದೇ ಸಂದರ್ಭ ಈ ದುರಂತ ನಡೆದಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page