Connect with us

LATEST NEWS

ರೋಹಿತ್-ಕೊಹ್ಲಿ ಹಿಂದಿಕ್ಕಿ ಟಿ-20 ಕ್ರಿಕೆಟ್‌ನಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ ಬಾಬರ್‌ ಅಝಂ!

Published

on

ನವದೆಹಲಿ: ಟಿ-20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ವಿರುದ್ದದ ಮೂರು ಪಂದ್ಯಗಳ ಟಿ20 ಸರಣಿಯನ್ನು ಪಾಕಿಸ್ತಾನ ಕ್ಲೀನ್‌ ಸ್ವೀಪ್‌ ಮಾಡಿತ್ತು. ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಸ್ಟಾರ್‌ ಆಟಗಾರ ಬಾಬರ್‌ ಅಝಂ ನೂತನ ದಾಖಲೆ ಬರೆದಿದ್ದು, ಈ ಮೂಲಕ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಅವರನ್ನು ಹಿಂದಿಕ್ಕಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಪಾಕ್‌ ಆಟಗಾರ ಬಾಬರ್‌ ಆಝಂ ಅರ್ಧ ಶತಕ ಗಳಿಸುವ ಮೂಲಕ ಬಾಬರ್‌ ಆಝಂ ಹೊಸ ದಾಖಲೆ ಬರೆದಿದ್ದರು. ಇದೀಗ ಮತ್ತೊಂದು ಮೈಲುಗಲ್ಲನ್ನು ಸಹ ದಾಟಿದ್ದಾರೆ. ಅದು ಕೂಡ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿ ದಾಖಲೆ ಬರೆದಿರುವುದು ವಿಶೇಷ.

ಬಾಬರ್‌ ಆಝಂ 36 ಎಸೆತಗಳಲ್ಲಿ ಅಜೇಯ 50 ರನ್‌ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಬಾಬರ್‌ ಟಿ20 ಕ್ರಿಕೆಟ್‌ನಲ್ಲಿ 4500 ರನ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4500 ರನ್‌ಗಳ ಗಡಿದಾಟಿದ ವಿಶ್ವದ ಮೊದಲ ಬ್ಯಾಟರ್‌ ಎಂಬ ವಿಶ್ವ ದಾಖಲೆಯನ್ನು ಬಾಬರ್‌ ಆಝಂ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿ: ಎರಡು ಕಂತುಗಳ ಹಣ ಜಮಾ ಕುರಿತು ಸರ್ಕಾರದಿಂದ ಸಿಹಿ ಸುದ್ದಿ

ಬಾಬರ್​ನನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ 4250 ಕ್ಕಿಂತ ಹೆಚ್ಚಿನ ರನ್​ ಗಳಿಸಿಲ್ಲ. ಈ ಪಟ್ಟಿಯಲ್ಲಿ ಭಾರತ ಟಿ20 ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಹಿಟ್​ಮ್ಯಾನ್ 4231 ರನ್​ ಕಲೆಹಾಕಿದರೆ, ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 4188 ರನ್​ಗಳಿಸಿದ್ದಾರೆ. ಇದೀಗ ಇವರಿಬ್ಬರನ್ನು ಹಿಂದಿಕ್ಕಿ ಬಾಬರ್ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page