Connect with us

BANTWAL

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..!

Published

on

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..!

ಬಂಟ್ವಾಳ :ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ ಮುಂದುವೆರೆದಿದೆ. ಫೋಟೋ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು ಫೋಟೊ ಗ್ರಾಫರ್ ಮೇಲೆ ತಲವಾರು ದಾಳಿ ನಡೆಸಿದ್ದಾರೆ. 

ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಈ ಘಟನೆ ಸಂಭವಿಸಿದೆ. ಫರಂಗಿಪೇಟೆಯಲ್ಲಿರುವ ಸ್ಟುಡಿಯೋ ಮಾಲಕ ದಿನೇಶ ದಿನೇಶ್ ಕೊಟ್ಟಿಂಜ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗ ದಾಳಿ ನಡೆಸಿದ್ದಾರೆ.

ಅಂಗಡಿಗೆ ನುಗ್ಗಿ ತಲವಾರು ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ದಿನೇಶನನ್ನು ಮಂಗಳೂರು ಆಸಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.

ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ.ಸೋಜ, ವೃತ್ತ ನಿರೀಕ್ಷಕ ಟಿ‌.ಡಿ.ನಾಗರಾಜ್ , ಎಸ್. ಐ.ಪ್ರಸನ್ನ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

BANTWAL

ಬಂಟ್ವಾಳ: ಅಪಘಾತಕ್ಕೊಳಗಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಸಾವು

Published

on

ಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ನಡೆದಿದೆ.

ಅಡ್ಯಾರು ನಿವಾಸಿ 65 ವರ್ಷದ  ಜಯರಾಮ  ಮೃತಪಟ್ಟ ವ್ಯಕ್ತಿ. ಎರಡು ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಬಡಗುಂಡಿ ಎಂಬಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಸವಾರನಿಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ‌ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.  ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ

Published

on

ಬಂಟ್ವಾಳ: ದಿ. ಕಾಂತಪ್ಪ ಪೂಜಾರಿ ಕುಟುಂಬಸ್ಥರ ಧರ್ಮದೈವಗಳ ಧರ್ಮಚಾವಡಿಯ ಶಿಲಾನ್ಯಾಸ ಕಾರ್ಯಕ್ರಮ ಸರಪಾಡಿ ಗ್ರಾಮದ ಮುದಿಮರ ಬರ್ಕೆಯಲ್ಲಿ ಫೆ.28ರಂದು ನಡೆಯಿತು.

ಧಾರ್ಮಿಕ ವಿದಿವಿಧಾನವನ್ನು ಸದಾಶಿವ ಮುಚ್ಚಿಣ್ಣಾಯ ಕಾರಿಂಜ ಅವರು ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಗುತ್ತಿನ ಮನೆತನದವರು, ಕುಟುಂಭಸ್ಥರು ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯೋಗಿಶ್‌ ಕೆ ಸುವರ್ಣ ಮುದಿಮರ ಸ್ವಾಗತಿಸಿ, ಪ್ರಕಾಶ್ ಅಂಚನ್‌ ಕಾರ್ಯಕ್ರಮ ನಿರೂಪಿಸಿದರು.

ಇದನ್ನೂ ಓದಿ: ಮಂಗಳೂರು: ಅರ್ತಿವೊಡಲು ವಿಷ್ಣುಮೂರ್ತಿ ದೇವಳದ ಬ್ರಹ್ಮಕಲಶೋತ್ಸವ ಸಿದ್ಧತೆ; ಆಮಂತ್ರಣ ಪತ್ರಿಕೆ ಬಿಡುಗಡೆ

Continue Reading

BANTWAL

ಬಂಟ್ವಾಳ ಪರಿಸರದಲ್ಲಿ ಚಿನ್ನದ ಸರ ಕಳವು ಪ್ರಕರಣ

Published

on

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣದ ಶಂಕಿತ ಆರೋಪಿಯ ಮುಖಚಹರೆ ಪತ್ತೆಯಾಗಿದ್ದು, ಆದನ್ನು ಪೊಲೀಸರು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಿದ್ದಾರೆ.

ಇದನ್ನು ಓದಿ: ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಕೆಲವು ದಿನಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಸರ ಕಳ್ಳತನ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಶಂಕಿತ ವ್ಯಕ್ತಿಯ ವ್ಯಕ್ತಿಯ ಗುರುತು ಅಥವಾ ಇರುವಿಕೆ ಕಂಡು ಬಂದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ಅಥವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕಾಗಿ ಸಾರ್ವಜನಿಕರಲ್ಲಿ ಪೊಲೀಸರು ಕೋರಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page