Connect with us

BANTWAL

ಬಂಟ್ವಾಳ : ಕಾರಿನಲ್ಲಿ ಕುಳಿತ ಸ್ಥಿತಿಯಲ್ಲೇ ಶವವಾದ ಕಲ್ಲಡ್ಕದ ಜಗದೀಶ್..!

Published

on

ಯುವಕನೋರ್ವ ಕಾರಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ.

ಬಂಟ್ವಾಳ :ಯುವಕನೋರ್ವ ಕಾರಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ.

ಇಲ್ಲಿನ ಗೋಳ್ತ ಮಜಲು ಗ್ರಾಮದ ಹೊಸೈಮಾರ್ ನಿವಾಸಿಯಾಗಿರುವ ಜಗದೀಶ್ ಕಾರಿನಲ್ಲಿ ಕುಳಿತು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಯುವಕನಾಗಿದ್ದಾನೆ.

ಇನ್ನು ಮೃತ ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಭಾನುವಾರ ಬೆಳಿಗ್ಗೆ ಬಾವನ ಜೊತೆ ತರವಾಡು ಮನೆಯಲ್ಲಿ ದೈವದ ಕಾರ್ಯಕ್ಕೆ ಮಕ್ಕಳ ಜೊತೆ ಈತ ಹೋಗಿದ್ದ.

ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದ್ದಾಗ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿದ್ದು… ನಾನು ಮತ್ತೆ ಮನೆಗೆ ಬರುತ್ತೇನೆ…. ನೀವು ಮಕ್ಕಳ ಜೊತೆ ಮನೆಗೆ ಹೋಗಿ …. ಎಂದು ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದ ಎನ್ನಲಾಗಿದೆ.

ಆದರೆ ರಾತ್ರಿ 7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಜಗದೀಶ್ ಕಂಡು ಬಂದಿದ್ದಾರೆ.

ಬಳಿಕ ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

ಕಾರಿನ ಕಿಟಕಿ , ಬಾಗಿಲನ್ನು ಮುಚ್ಚಿ ಮಲಗಿದ್ದರಿಂದ ಗಾಳಿ ಇಲ್ಲದೆ ಸಾವನ್ನಪಿದ್ದಾರ…? ಅಥವಾ ಸಾವಿಗೆ ಹೃದಯಾಘಾತ ಕಾರಣವಾ ಎಂಬುವುದು ವೈದ್ಯಕೀಯ ರಿಪೋರ್ಟ್ ಹಾಗೂ ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

BANTWAL

ಎರಡು ಕಾರುಗಳ ನಡುವೆ ಭೀಕರ ಅಪಘಾತ

Published

on

ಬಂಟ್ವಾಳ : ಮುಖ್ಯರಸ್ತೆಯಿಂದ ಅಡ್ಡ ರಸ್ತೆಗೆ ತಿರುವು ಪಡೆದುಕೊಳ್ಳುತ್ತಿದ್ದ ಕಾರೊಂದಕ್ಕೆ ಮುಖ್ಯರಸ್ತೆಯಲ್ಲಿ ಇನ್ನೊಂದು ದಿಕ್ಕಿನಿಂದ ಕಾರು ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ಸಮೀಪ ನಡೆದಿದೆ.

ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಕಾವಳಕಟ್ಟೆ ಸಮೀಪ ಅಡ್ಡರಸ್ತೆಗೆ ತಿರುವು ಪಡೆಯುತ್ತಿರುವಾಗ ಈ ಅಪಘಾತ ಸಂಭವಿಸಿದೆ.

ಇನ್ನೋವಾ, ಡಿಕ್ಕಿ ಹೊಡೆದ ಕಾರು ರಸ್ತೆಯಲ್ಲಿ ಉರುಳಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Continue Reading

BANTWAL

ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾ*ವು

Published

on

ಬಂಟ್ವಾಳ : ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ.

ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟವರು. ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್ ತನ್ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಆನ್ಲೈನ್ ವಂಚನೆ ; ಕೊನೆಗೂ ಪೊಲೀಸರ ಕೈವಶವಾದ ಖದೀಮ

ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

BANTWAL

ಬಂಟ್ವಾಳ: ಕಾಂಗ್ರೆಸ್ ನಾಯಕನೊರ್ವನ ಕಾಲಿಗೆ ಗುಂಡೇಟು.!

Published

on

ಬಂಟ್ವಾಳ: ಗುಂಡೇಟಿನಿಂದ ಕಾಂಗ್ರೆಸ್ ಮುಖಂಡರೊಬ್ಬರು ಗಾಯ ಗೊಂಡಿದ್ದಾರೆ. ಇಂಟಕ್ ನಲ್ಲಿ ಸಕ್ರೀಯವಾಗಿದ್ದ ಚಿತ್ತರಂಜನ್ ಶೆಟ್ಟಿ ಗಾಯಗೊಂಡವರಾಗಿದ್ದಾರೆ.

ಬಂಟ್ವಾಳ ‌ತಾಲೂಕಿನ‌ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಗುಂಡು ಹಾರಿದ್ದು, ಅಸಲಿಗೆ ಚಿತ್ತರಂಜನ್ ಶೆಟ್ಟಿ ಅವರ ಕಿಸೆಯಲ್ಲಿದ್ದ ಪಿಸ್ತೂಲ್ ನಿಂದಲೇ ಈ ಫೈರಿಂಗ್ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಸ್ವಂತ ಭದ್ರತೆಗಾಗಿ ಇರಿಸಿಕೊಂಡಿದ್ದ ಪಿಸ್ತೂಲ್ ಸರಿಯಾಗಿ ಲಾಕ್ ಮಾಡದ ಕಾರಣ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು. ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page