Connect with us

BANTWAL

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಾತನ ರಕ್ಷಣೆ ಮಾಡಿದ ಯುವಕರು..!  

Published

on

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಾತನ ರಕ್ಷಣೆ ಮಾಡಿದ ಯುವಕರು..!  

ಬಂಟ್ವಾಳ:  ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಯುವಕರ ತಂಡ ರಕ್ಷಿಸಿದ ಘಟನೆ  ಇಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಪಾಣೆಮಂಗಳೂರಿನ ಹಳೆ ಸೇತುವೆಯಿಂದ  ಈ ವ್ಯಕ್ತಿ ನದಿಗೆ ಹಾರಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಹಾಸನ ಜಿಲ್ಲೆಯ ಕುಮಾರ್ ಎಂದು ಗುರುತಿಸಲಾಗಿದೆ.

ಈತ ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದ.

ಸದ್ಯ ಯುವಕನಿಗೆ ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ತನ್ನ ಖಾಕಿ ಸಮವಸ್ತ್ರ ಧರಿಸಿಕೊಂಡೇ ಕುಮಾರ್ ಪಾಣೆಮಂಗಳೂರು ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.

ಇದನ್ನು ಕಂಡ ಪ್ರತ್ಯಕ್ಷದರ್ಶಿಗಳು ಸ್ಥಳೀಯ ಈಜುಗಾರ ಮಹಮ್ಮದ್ ಅವರಿಗೆ ತಿಳಿಸಿದ್ದಾರೆ. ದೋಣಿಯ ಮೂಲಕ ತೆರಳಿದ ಮಹಮ್ಮದ್ ನೇತ್ರತ್ವದ ತಂಡ ಯುವಕನ್ನು ನೀರಿನಿಂದ ಮೇಲಕ್ಕೆ ತೆಗೆದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

BANTWAL

ವಿಟ್ಲ: ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಮಹಿಳೆ

Published

on

ವಿಟ್ಲ: ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ. 68 ವರ್ಷದ ವಿಟ್ಲ ಮುಳ್ಳೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ ಮೃತ ಮಹಿಳೆ.


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಬೈಕ್ ಸುಮಾರು 50 ಮೀಟರ್ ದೂರ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉಳ್ಳಾಲ: ಎಮ್ ಡಿಎಮ್ ಎ ಮಾರಾಟ ಪ್ರಕರಣ: ಆರೋಪಿ ಬಂಧನ

ಗಾಯಗೊಂಡು ಬಿದ್ದಿದ್ದ ಬೈಕ್ ಸವಾರನನ್ನು ಯಾರೂ ಮುಟ್ಟದೆ ಇದ್ದ ಸಂದರ್ಭ ಕಾಶಿಮಠ ನಿವಾಸಿ ಪ್ರತಾಪ್ ಅವರು ಮಾನವೀಯತೆ ಮೆರೆದಿದ್ದು, ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತ ಸೀತಾ ಶೆಟ್ಟಿ ಅವರು ಪುತ್ರ ರೂಪೇಶ್ ಹಾಗೂ ಪುತ್ರಿ ರೂಪಿತಾರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Continue Reading

BANTWAL

ಇಂದಿನಿಂದ ಫೆ. 10ರ ತನಕ ಸಸಿಹಿತ್ಲು ಸಾರಂತಾಯ ದೈವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ

Published

on

ಮೂಲ್ಕಿ: ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವಕ್ಕೆ ಕ್ಷೇತ್ರ ಸಜ್ಜಾಗಿ ನಿಂತಿದೆ.


ಇಂದಿನಿಂದ ಮೊದಲ್ಗೊಂಡು ಫೆಬ್ರವರಿ 10 ರ ತನಕ ನಿರಂತರ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಿ. ಬಿ. ಕರ್ಕೇರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಸುಮಾರು 3.5 ಕೋಟಿ ರೂಪಾಯಿ ವೆಚ್ಚದಲ್ಲಿ ದೈವಸ್ಥಾನ ಭವ್ಯ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದೆ. ಶ್ರೀ ಉಳ್ಳಾಯ ಮತ್ತು ಪರಿವಾರ ಶಕ್ತಿಗಳಿಗೆ ಪ್ರಧಾನಗೊಂಡ ಕಾಂತಾಬಾರೆ ಬೂದಾಬಾರೆ ಮತ್ತು ಮಾಯಂದಾಲ್ ದೈವಕ್ಕೆ ಪ್ರತ್ಯೇಕ ಗುಡಿ ನಿರ್ಮಿಸಲಾಗಿದ್ದು, ದೈವಸ್ಥಾನದ ಪ್ರಧಾನ ಗೋಪುರವನ್ನು ನವೀಕರಿಸಲಾಗಿದೆ.

ಇದನ್ನೂ ಓದಿ: ಫೆ.7-8 ರಂದು ಈಶ್ವರ ಮಲ್ಪೆ ತಂಡದಿಂದ ಉಚಿತ ಶ್ರವಣ ತಪಾಸಣಾ ಶಿಬಿರ

ಹಳೆಯಂಗಡಿಯ ವೇದಮೂರ್ತಿ ಎಚ್. ರಂಗನಾಥ ಭಟ್ ನೇತೃತ್ವದಲ್ಲಿ ಏಳು ದಿನಗಳ ಕಾಲ ನಿರಂತರ ವೈದಿಕ ವಿಧಿ ವಿಧಾನಗಳು ನಡೆಯಲಿವೆ. ಬ್ರಹ್ಮಕಲಶೋತ್ಸವ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಗೌರವ ಸಲಹೆಗಾರ ಚಂದ್ರಶೇಖರ ನಾನಿಲ್, ಮುಂಬೈ ಸಮಿತಿಯ ಅಧ್ಯಕ್ಷ ಸತೀಶ್ ಎನ್ ಕೋಟ್ಯಾನ್ ಮತ್ತಿತರರು ಇದ್ದರು.

 

Continue Reading

BANTWAL

ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಶ್ರದ್ಧಾಂಜಲಿ ಅರ್ಪಣೆ-ಕಲ್ಲಡ್ಕದಲ್ಲಿ ಬ್ಯಾನರ್ ಕಂಡು ಶಾಕ್ ಆದ ಜನತೆ

Published

on

ಬಂಟ್ವಾಳ: ಇಲ್ಲಿ ಕಸ ತಂದು ಹಾಕುವ ದಿವ್ಯ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ, ಈ ಕಸದಂತೆಯೇ ನಿಮ್ಮ ಜೀವನವೂ ಆದಷ್ಟು ಬೇಗನೇ ಕೊಳೆತು ಹೋಗಲಿ…..ಹೀಗೊಂದು ಬ್ಯಾನರ್ ರಾರಾಜಿಸುತ್ತಿರುವುದು ಕಲ್ಲಡ್ಕ ಪೇಟೆಯಲ್ಲಿ. ಕಲ್ಲಡ್ಕ ಜಂಕ್ಷನ್ ನ ಕಮಲಾ ಕಾಂಪ್ಲೆಕ್ಸ್ ನ ಮುಂಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಇಂಥದ್ದೊಂದು ಬ್ಯಾನರನ್ನು ಕಟ್ಟಿ ಹಾಕಲಾಗಿದೆ.

ಜನನಿಬಿಡ ಪ್ರದೇಶವಾಗಿರುವ ಕಲ್ಲಡ್ಕ ಕಮಲಾ ಕಾಂಪ್ಲೆಕ್ಸ್ ನಲ್ಲಿರುವ ಕೆ.ಟಿ.ಹೋಟೆಲ್ ನ ಮುಂಭಾಗದಲ್ಲಿ ಕಸವನ್ನು ತಂದು ಹಾಕಿ ಹೋಗುತ್ತಿದ್ದರು. ಕಮಲಾ ಕಾಂಪ್ಲೆಕ್ಸ್ ‌ನಲ್ಲಿ ಚಿಕಿತ್ಸಾಲಯ, ಹೋಟೆಲ್, ಬ್ಯಾಂಕ್ ಹಾಗೂ ಹತ್ತಿರದಲ್ಲಿ ಶ್ರೀರಾಮಮಂದಿರ ಇದ್ದು  ನಿತ್ಯ ಬೆಳಿಗ್ಗೆ ಇಲ್ಲಿ ಕಸದ ರಾಶಿ ಕೊಳೆತು ವಾಸನೆ ಬರುತ್ತಿತ್ತು.

ಜನರು ನಿತ್ಯ ಓಡಾಡುವ ಜಾಗದಲ್ಲಿ ಕಸವನ್ನು ಹಾಕಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದನ್ನು ಕಂಡು ಸಾರ್ವಜನಿಕರೇ ಬ್ಯಾನರ್ ಅಳವಡಿಸಿದ್ದಾರೆ. ಕಸ ತಂದು ಹಾಕುವವರನ್ನು ತಡೆಯಲು ಸಾಧ್ಯವಾಗದೆ ಅತ್ಯಂತ ನೋವಿನಿಂದ ಇಲ್ಲಿ‌ನ‌ ಸಾರ್ವಜನಿಕರು ನೋವು ತರುವ ಬರಹವನ್ನು ಬ್ಯಾನರ್ ನಲ್ಲಿ ಮುದ್ರಿಸಿ ಹಾಕಿದ್ದಾರೆ. ಬ್ಯಾನರ್ ಬರಹ ನೋಡಿದ ಜನರು  ಒಂದು ಕ್ಷಣ ನಿಬ್ಬೆಗೆರಗಾಗುವುದು ಮಾತ್ರ ಅಷ್ಟೇ ಸತ್ಯ.

Continue Reading
Advertisement

Trending

Copyright © 2025 Namma Kudla News

You cannot copy content of this page