Connect with us

BANTWAL

Bantwala: ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

Published

on

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕ ಪ್ರಾಣಾಪಾಯವಿಲ್ಲದೆ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. 

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕ ಪ್ರಾಣಾಪಾಯವಿಲ್ಲದೆ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ಬಳಿಕ ಸಮೀಪದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಹೊಡೆದ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ.

ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

ಈ ಬಗ್ಗೆ ಸ್ಥಳೀಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BANTWAL

ಬಂಟ್ವಾಳದಲ್ಲಿ ಭಾರೀ ಅಗ್ನಿ ಅವಘಡ; ಸುಟ್ಟು ಕರಕಲಾದ ಗೋಡೋನ್‌

Published

on

ಬಂಟ್ವಾಳ : ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಗೋಣಿಯ ಗೋಡನಿಗೆ  ಬೆಂಕಿ ಹತ್ತಿ ಗೋಡನ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಿನ್ನೆ (ಫೆ.10)  ಬಂಟ್ವಾಳ ಕರಿಯಂಗಳ ಗ್ರಾಮದ ಬಡಕಬೈಲು ಪ್ರದೇಶದಲ್ಲಿ ನಡೆದಿದೆ.

ಗೋಡೋನ್‌ಗೆ ಬೆಂಕಿ ಹತ್ತಿದ್ದು ಮಾತ್ರವಲ್ಲದೇ, ಹತ್ತಿರದ ಅಬ್ದುಲ್ ಹಮೀದ್ ಮನೆಗೆ ಬೆಂಕಿ ಬಿದ್ದಿದೆ. ಸುಲೇಮಾನ್ ಹಾಗೂ ಮಹಮ್ಮದ್ ಹನೀಪ್ ಮನೆ ಸ್ವಲ್ಪಮಟ್ಟಿಗೆ ಬೆಂಕಿಗಾಹುತಿಯಾಗಿದೆ. ಬೆಂಕಿ ಅನಾಹುತದಿಂದ ಪ್ರಾಣಹಾನಿ ಉಂಟಾಗಿಲ್ಲ. ರಾತ್ರಿ ಸುಮಾರು 11 ಗಂಟೆಗೆ ಬೆಂಕಿ ಬಿದ್ದಿದ್ದು, ಕೂಡಲೇ ಸ್ಥಳೀಯರು ಅಗ್ನಿ ಶಾಮಕ ಸಿಬ್ಬಂದಿಗೆ ತಿಳಿಸಿದ್ದಾರೆ.

ಇದನ್ನೂ ಓದಿ : ಪತಿಗೆ ಅನೈತಿಕ ಸಂಬಂಧವಿರುವ ಶಂಕೆ; ಜಿಮ್‌ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಪತ್ನಿ

ತಕ್ಷಣವೇ ಮೂರು ಅಗ್ನಿಶಾಮಕ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಈ ವೇಳೆ ಭಾರೀ ಜನಸ್ತೋಮವೇ ನೆರೆದಿದ್ದು, ಬೆಂಕಿ ನಂದಿಸಲು ಸಹಕರಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

BANTWAL

ಎರಡು ಕಾರುಗಳ ನಡುವೆ ಭೀಕರ ಅಪಘಾತ

Published

on

ಬಂಟ್ವಾಳ : ಮುಖ್ಯರಸ್ತೆಯಿಂದ ಅಡ್ಡ ರಸ್ತೆಗೆ ತಿರುವು ಪಡೆದುಕೊಳ್ಳುತ್ತಿದ್ದ ಕಾರೊಂದಕ್ಕೆ ಮುಖ್ಯರಸ್ತೆಯಲ್ಲಿ ಇನ್ನೊಂದು ದಿಕ್ಕಿನಿಂದ ಕಾರು ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ಸಮೀಪ ನಡೆದಿದೆ.

ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಕಾವಳಕಟ್ಟೆ ಸಮೀಪ ಅಡ್ಡರಸ್ತೆಗೆ ತಿರುವು ಪಡೆಯುತ್ತಿರುವಾಗ ಈ ಅಪಘಾತ ಸಂಭವಿಸಿದೆ.

ಇನ್ನೋವಾ, ಡಿಕ್ಕಿ ಹೊಡೆದ ಕಾರು ರಸ್ತೆಯಲ್ಲಿ ಉರುಳಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Continue Reading

BANTWAL

ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾ*ವು

Published

on

ಬಂಟ್ವಾಳ : ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ.

ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟವರು. ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್ ತನ್ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಆನ್ಲೈನ್ ವಂಚನೆ ; ಕೊನೆಗೂ ಪೊಲೀಸರ ಕೈವಶವಾದ ಖದೀಮ

ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page