Connect with us

LATEST NEWS

ಉಗ್ರರನ್ನು ಬಂಡುಕೋರರು ಎಂದ ಬಿಬಿಸಿ; ಎಚ್ಚರಿಕೆ ನೀಡಿದ ಕೇಂದ್ರ

Published

on

ಮಂಗಳೂರು/ನವದೆಹಲಿ : ರಾಷ್ಟ್ರದಲ್ಲಿ  ಪೆಹಲ್ಗಾಮ್‌ ಉಗ್ರರ ದಾ*ಳಿಯ ಬಗ್ಗೆ ಆಕ್ರೋಶ ಕೇಳಿ ಬರುತ್ತಲಿದೆ. ಪತ್ರಿಕೆಗಳು, ಸುದ್ದಿ ವಾಹಿನಿಗಳು ಈ ಬಗ್ಗೆ ಸುದ್ದಿ ಬಿತ್ತರಿಸುತ್ತಲೇ ಇವೆ. ಈ ನಡುವೆ ಬಿಬಿಸಿ ಎಡವಟ್ಟು ಮಾಡಿಕೊಂಡಿದೆ. ಪೆಹಲ್ಗಾಮ್ ದಾಳಿ ಕುರಿತು ಸುದ್ದಿ ಪ್ರಕಟಿಸಿದ ಬಿಬಿಸಿ ವಿರುದ್ಧ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಪೆಹಲ್ಗಾಮ್ ಉಗ್ರರ ದಾ*ಳಿ  ಬಳಿಕ ಪಾಕಿಸ್ತಾನ ಭಾರತೀಯರಿಗೆ ವೀಸಾಗಳನ್ನು ಸ್ಥಗಿತಗೊಳಿಸಿದೆ ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಕಟಿಸಿರುವ ಬಿಬಿಸಿ, ಉಗ್ರರ ದಾಳಿಯನ್ನು ಬಂಡುಕೋರರ ದಾಳಿ ಎಂದು ಉಲ್ಲೇಖಿಸಿದೆ. ಇದಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಬಿಬಿಸಿ ಭಾರತದ ಮುಖ್ಯಸ್ಥ ಜಾಕಿ ಮಾರ್ಟಿನ್ ಅವರಿಗೆ ಎಚ್ಚರಿಕೆ ನೀಡಿ ಪತ್ರ ಬರೆದಿದೆ. ಅಲ್ಲದೆ, ಸ್ಪಷ್ಟನೆ ನೀಡುವಂತೆ ಹೇಳಿದೆ. ಬಿಬಿಸಿಯ ವರದಿಯನ್ನು ವಿದೇಶಾಂಗ ಸಚಿವಾಲಯ ಮೇಲ್ವಿಚಾರಣೆ ಮಾಡಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಸತತ 4ನೇ ದಿನವೂ ಪಾಕ್ ಕದನ ವಿರಾಮ ಉಲ್ಲಂಘನೆ; ಭಾರತದಿಂದ ಪ್ರತ್ಯುತ್ತರ

ಎ.22 ರಂದು ನಡೆದ ಪೆಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಲ್ಲಿ 26 ರಂದು ಪ್ರಾಣ ಕಳೆದುಕೊಂಡಿದ್ದು, ಈ ಸುದ್ದಿಯನ್ನು ಲಘುವಾಗಿ ಪರಿಗಣಿಸಿದ್ದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯನ್ನು ಅಮೆರಿಕ  ಸರ್ಕಾರ ಟೀಕಿಸಿತ್ತು. ಭಯೋತ್ಪಾದಕರು ಎಂಬ ಪದದ ಬದಲು ಬಂದೂಕುಧಾರಿಗಳು ಎಂಬುದಾಗಿ ನ್ಯೂಯಾರ್ಕ್ ಟೈಮ್ಸ್ ಉಲ್ಲೇಖಿಸಿ ಎಡವಿತ್ತು.

LATEST NEWS

WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

Published

on

ಮಂಗಳೂರು/ವಿಜಯಪುರ : ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಜಯಪುರದಲ್ಲಿ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.  ಡ್ಯಾನ್ಸ್ ಮಾಡುವಾಗಲೇ ಯುವಕನೊಬ್ಬ ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಈ ದು*ರಂತ ಸಂಭವಿಸಿದೆ.

28 ವರ್ಷದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಮೃ*ತ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ  ಹೃ*ದಯಾಘಾತಕ್ಕೊಳಗಾಗಿ ಕು*ಸಿದು ಬಿದ್ದಿದ್ದಾನೆ.

ಇದನ್ನೂ ಓದಿ : ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ. ಯುವಕನ ಕೊನೆಯ ಕ್ಷಣದ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

 

Continue Reading

LATEST NEWS

ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

Published

on

ಮಂಗಳೂರು/ಬೆಳಗಾವಿ: ಮಹಾಮಾರಿ ಕೋವಿಡ್ ಕುರಿತು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮಿಜಿಯವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕೊವಿಡ್ ಕುರಿತು ಸ್ವಾಮೀಜಿ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರಿ. ಉಸಿರಾಟಕ್ಕೆ ತೊಂದರೆಯಾಗಿ ಸಾ*ವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ’ ಎಂದರು.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

‘ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು’ ಎಂದು ಸ್ವಾಮೀಜಿ ಹೇಳಿದ್ದಾರೆ.

Continue Reading

FILM

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

Published

on

ಮಂಗಳೂರು/ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ಗೆ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ, ಮೋಹಕ ತಾರೆ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಂಚಿಕೊಳ್ಳುವ ಮೂಲಕ ಬೇಸರ ಹಂಚಿಕೊಂಡಿದ್ದಾರೆ.

ಕರ್ನಾಟಕ ಡಿಟರ್ಜೆಂಟ್ಸ್ ಕಂಪನಿಯು ತನ್ನ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ಸಂಭಾವನೆಯನ್ನು ಗೊತ್ತುಪಡಿಸಿದೆ. ತಮನ್ನಾ, ಸಂಸ್ಥೆಯ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಕೂಡ ಪೋಸ್ಟ್‌ ಮಾಡಿದ್ದು, ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ! ಸಂಭಾವನೆ ಎಷ್ಟು?

‘ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ’ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜಗತ್ತಿನ ಯಶಸ್ವಿ ಬ್ರಾಂಡ್‌ಗಳಲ್ಲಿ ಒಂದಾದ ಆ್ಯಪಲ್ ಸಂಸ್ಥೆ ಬ್ರಾಂಡ್ ಅಂಬಾಸಿಡರ್ ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಹಾಗೆಯೇ, ಡವ್‍ ಸೋಪ್‍ ಪ್ರಚಾರ ಬಹಳ ಚೆನ್ನಾಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page