Connect with us

LATEST NEWS

BBK 11 ; ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಅರೆಸ್ಟ್

Published

on

ಮಂಗಳೂರು/ಬೆಂಗಳೂರು: ಬಿಗ್‌ ಬಾಸ್​ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಅವರ ಗನ್​ ಮ್ಯಾನ್​ನನ್ನು ಶುಕ್ರವಾರ (ಜ.24) ನಡೆದ ಗಲಾಟೆ ನಿಮಿತ್ತ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್‌ನ ಗನ್​ಮ್ಯಾನ್​ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾಯರ್​ ಜಗದೀಶ್‌ನನ್ನೂ ಬಂಧಿಸಿದ್ದಾರೆ.

ಇತ್ತೀಚೆಗೆ ಅಣ್ಣಮ್ಮ ದೇವಿ ಕೂರಿಸುವ ವಿಚಾರಕ್ಕೆ ಕಿರಿಕ್ ಆಗಿತ್ತು. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಇದೆ. ಇದೇ ರಸ್ತೆಯಲ್ಲಿ ಅಣ್ಣಮ್ಮ ದೇವಿಯನ್ನು ಕೋರಿಸಿದ್ದನ್ನು ಜಗದೀಶ್ ಪ್ರಶ್ನೆ ಮಾಡಿದ್ದರು. ಆಗ ಜಗದೀಶ್ ಮೇಲೆ ಹಲ್ಲೆಗೆ ಯತ್ನ ನಡೆದಿತ್ತು. ಈ ಘಟನೆ ಸಂಬಂಧ ಪ್ರತಿಕ್ರಿಯಿಸುವಾಗ ಅವರು ಆವಾಜ್ ಹಾಕಿದ್ದರು. ದರ್ಶನ್ ಅಭಿಮಾನಿಗಳನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದರು. ‘ಈ ಕೆಲಸ ಮಾಡಿದ್ದು ದರ್ಶನ್ ಅಭಿಮಾನಿಗಳಂತೆ. ನನ್ನ ಬಳಿ ಬರುವಾಗ ವಿಮೆ ಮಾಡಿಸಿಕೊಂಡು ಬನ್ನಿ’ ಎಂದಿದ್ದರು.

ಈ ಬೆನ್ನಲ್ಲೇ ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಅಟ್ಯಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದು, ಕರ್ನಾಟಕದಲ್ಲಿ ಫೈರಿಂಗ್ ಮಾಡಿದ್ದಾರೆ. ಮತ್ತೊಂದೆಡೆ ದೂರುದಾರನ ಮೇಲೂ ಹಲ್ಲೆ ನಡೆಸಿದ್ದಾರೆ. ಕೆಲವರು ಕೋಲು ದೊಣ್ಣೆ ತೆಗೆದುಕೊಂಡು ಬಂದು ಜಗದೀಶ್ ಅವರ ಕಾರನ್ನು ಪೀಸ್ ಪೀಸ್ ಮಾಡಿದ್ದಾರೆ. ಜಗದೀಶ್​ ಮೇಲೂ ಹಲ್ಲೆ ಮಾಡಲಾಗಿತ್ತು. ಈ ವೇಳೆ ಜಗದೀಶ್​ ಅವರ ಗನ್​ ಮ್ಯಾನ್​ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

LATEST NEWS

ಬಸ್ ನಿಲ್ದಾಣಕ್ಕೆ ಕಾರು ಡಿ*ಕ್ಕಿ; ಚಾಲಕನಿಗೆ ಗಾ*ಯ

Published

on

ಕಾಪು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಸ್ ನಿಲ್ದಾಣಕ್ಕೆ ಡಿ*ಕ್ಕಿಯಾದ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ(ಡಿ.07) ಸಂಭವಿಸಿದೆ.

ಕಾರು ಚಾಲಕ ಕೊಪ್ಪಲಂಗಡಿಯ ಇಸ್ಮಾಯಿಲ್  ಗಾ*ಯಗೊಂಡಿದ್ದಾರೆ. ಕಾಪುನಿಂದ ಉಚ್ಚಿಲ ಕಡೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಇಸ್ಮಾಯಿಲ್‌ರನ್ನು  ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : ಮಹಿಳೆಯ ಹ*ತ್ಯೆ ಪ್ರಕರಣ : ಪೊಲೀಸರು ಬೀಸಿದ ಬಲೆಗೆ ಹಂ*ತಕ ಸಿಕ್ಕಿ ಬಿದ್ದಿದ್ದು ಹೇಗೆ?

ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು

Continue Reading

LATEST NEWS

ನಾಗರಹಾವು ಕಡಿದು ವ್ಯಕ್ತಿ ಸಾ*ವು

Published

on

ಉಡುಪಿ : ನಾಗರಹಾವು ಕ*ಡಿದು ವ್ಯಕ್ತಿಯೊಬ್ಬರು ಸಾ*ವನ್ನಪ್ಪಿರುವ ಘಟನೆ ಉಡುಪಿ ಕುತ್ಯಾರು ಗ್ರಾಮದಲ್ಲಿ ನಡೆದಿದೆ. ಸುರೇಂದ್ರ ಕಿಟ್ಟು ಪೂಜಾರಿ(54) ಮೃ*ತಪಟ್ಟ ವ್ಯಕ್ತಿ.

ಸುರೇಂದ್ರ ಸ್ಥಳೀಯರೊಬ್ಬರಿಗೆ ಸೇರಿದ ತೋಟದಲ್ಲಿ ಕಳೆದ 6 ವರ್ಷಗಳಿಂದ ತೋಟ ನೋಡಿಕೊಳ್ಳುವ ಕೆಲಸ ಮಾಡಿಕೊಂಡಿದ್ದರು. ಡಿ. 5 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಅಡಕೆ ಮರಗಳಿಗೆ ಕ್ರಿಮಿನಾಶಕ ಸಿಂಪಡಿಸಲು ತೋಟಕ್ಕೆ ಹೋಗಿದ್ದಾಗ ನಾಗರಹಾವು ಕ*ಚ್ಚಿದೆ.

ಇದನ್ನೂ ಓದಿ : ನಾಲ್ಕು ತಿಂಗಳ ಹಿಂದಷ್ಟೇ ಮದುವೆ… ನವವಿವಾಹಿತೆಯ ದುರಂ*ತ ಅಂತ್ಯ!

ತಕ್ಷಣವೇ ಅವರನ್ನು ಕಿನ್ನಿಗೋಳಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆಯೇ ಸುರೇಂದ್ರ ಪೂಜಾರಿ ಮೃ*ತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃ*ತರ ಪುತ್ರ ಕಿರಣ್.ಎಸ್ ನೀಡಿದ ದೂರಿನ ಮೇರೆಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

LATEST NEWS

ನಾಲ್ಕು ತಿಂಗಳ ಹಿಂದಷ್ಟೇ ಮದುವೆ… ನವವಿವಾಹಿತೆಯ ದುರಂ*ತ ಅಂತ್ಯ!

Published

on

ಮಂಗಳೂರು/ಬೆಂಗಳೂರು : ಗ್ಯಾಸ್ ಗೀಸರ್​ ಸೋರಿಕೆಯಿಂದ ನವ ವಿವಾಹಿತೆ ಸಾ*ವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಭೂಮಿಕಾ ಮೃ*ತ ದುರ್ದೈವಿ.

ಭೂಮಿಕಾ ಹಾಸನ ಮೂಲದವರಾಗಿದ್ದು ನಾಲ್ಕು ತಿಂಗಳ ಹಿಂದಷ್ಟೇ ಕೃಷ್ಣಮೂರ್ತಿ ಎಂಬುವವರ ಜೊತೆ ಮದುವೆಯಾಗಿದ್ದರು. ಪತಿ ಕೆಲಸಕ್ಕೆ ಹೋದ ಬಳಿಕ ಭೂಮಿಕಾ ಸ್ನಾನಕ್ಕೆ ಹೋಗಿದ್ದಳಂತೆ. ಗ್ಯಾಸ್​ ಲೀಕ್​ ಆದ ಹಿನ್ನೆಲೆ ಭೂಮಿಕಾಗೆ ಉಸಿರುಗಟ್ಟಿದ್ದು, ಬಾತ್‌ ರೂಂನಲ್ಲೇ ಕೊನೆಯು*ಸಿರೆಳೆದಿದ್ದಾಳೆ.

ಇದನ್ನೂ ಓದಿ : ‘ಮದುವೆಯನ್ನು ರದ್ದುಗೊಳಿಸಲಾಗಿದೆ’ ಕೊನೆಗೂ ವದಂತಿಗೆ ಫುಲ್ ಸ್ಟಾಪ್ ನೀಡಿದ ಸ್ಮೃತಿ ಮಂಧಾನ

ಪತಿ ಕೆಲಸ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page