Connect with us

LATEST NEWS

ಅತ್ಯಾಚಾರವೆಸಗಿ ವೃದ್ದ ಭಿಕ್ಷುಕಿಯನ್ನು ಕೊಂದ್ರು ಕಾಮುಕರು..!

Published

on

ಕಲಬುರಗಿ: 65 ವರ್ಷದ ವೃದ್ಧ ಭಿಕ್ಷುಕಿಯ ಮೇಲೆ ಕುಡುಕರಿಬ್ಬರು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಸ್ ನಿಲ್ದಾಣದಲ್ಲಿ ನಡೆದಿದೆ.

ವೃದ್ಧ ಭಿಕ್ಷುಕಿಯನ್ನು ಸಂಗನಬಸವಮ್ಮ ಎಂದು ಗುರುತಿಸಲಾಗಿದ್ದು, ಇವರು ಬಸ್ ನಿಲ್ದಾಣದ ಬಳಿ ಭಿಕ್ಷಾಟನೆ ಮಾಡಿ ಬಂದ ಹಣದಿಂದ ಊಟ-ಉಪಹಾರ ಮಾಡಿ ಬಸ್ ನಿಲ್ದಾಣದಲ್ಲಿಯೇ ಜೀವನ ನಡೆಸುತ್ತಿದ್ದರು.

ಹೀಗೆ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ಈ ವೃದ್ಧೆಯ ಮೇಲೆ ಪಾನಮತ್ತ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿ ನಂತರ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.

ಭಿಕ್ಷುಕಿ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗುವ ವೇಳೆ ಗ್ರಾಮದ ಕೆಲ ಸ್ಥಳೀಯರು ಆರೋಪಿಗಳ ಗುರುತು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ ನೆಲೋಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಇನ್ನೋರ್ವ ಆರೋಪಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

DAKSHINA KANNADA

ಹರಿಪಾದೆ ಜಾರಂದಾಯ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್

Published

on

ಮುಲ್ಕಿ : ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾದರು.

ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವೀಕ್ಷಿಸಿದರು.

ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ ಹಿನ್ನೆಲೆಯಲ್ಲಿ ಅವರು ಒಪ್ಪಿಕೊಂಡರು. ಮಾದ್ಯಮದೊಂದಿಗೆ ಮಾತನಾಡಿದ ವಿಶಾಲ್ ಕಾಂತಾರ ನಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿದಿದ್ದೇನೆ.

ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ನಿಧನ

ಇದೀಗ ಪ್ರಥಮ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ ತುಂಬಾ ಖುಷಿ ನೀಡಿದೆ. ನಿನ್ನೆ ಕೊಲ್ಲೂರು ಮುಕಾಂಬಿಕೆ ದರ್ಶನ ಪಡೆದು ಇದೀಗ ಇಲ್ಲಿಗೆ ಭೇಟಿ ನೀಡಿದ್ದೇನೆ, ಬೆಳೆಯುತ್ತಿರುವ ತುಳು ಚಿತ್ರರಂಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮಿಳಿನಲ್ಲಿ ಹಲವು ಸಿನಿಮಾಗಳ ಮಾತುಕಥೆ ನಡೆಯುತ್ತಿದೆ ಎಂದರು.

Continue Reading

LATEST NEWS

ಬಸ್ ಚಾಲಕನಿಗೆ ಎದೆನೋವು; ಕಂಟ್ರೋಲ್ ತಪ್ಪಿ ಇಳಿಜಾರಿಗಿಳಿದ ಬಸ್

Published

on

ಪಡುಬಿದ್ರೆ: ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ಚಲಿಸುತ್ತಿದ್ದ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗಿಳಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಬಸ್‌ ಚಾಲಕ ಶಂಭು ಎಂಬುವವರಿಗೆ ಎದೆನೋವು ಕಾಣಿಸಿಕೊಂಡಿದೆ. ತೆಂಕ ಎರ್ಮಾಳಿನ ಮಸೀದಿ ಬಳಿಯಿಂದ ಬಸ್ ಉಡುಪಿಯತ್ತ ಹೋಗುತ್ತಿತ್ತು. ಬಸ್‌ ನಲ್ಲಿ ಹಠಾತ್ ಚಾಲಕನಿಗೆ ಎದೆನೋವು ಸಂಭವಿಸಿದ್ದರಿಂದ ಬಸ್ ಕಂಟ್ರೋಲ್ ತಪ್ಪಿ ಇಳಿಜಾರಿಗಿಳಿದಿದೆ.

ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ವಿವರ ತಿಳಿದು ಬರಬೇಕಿದೆ.

Continue Reading

LATEST NEWS

ಉಡುಪಿಯಲ್ಲಿ ಎಟಿಎಂ ದರೋಡೆಗೆ ವಿಫಲ ಯತ್ನ

Published

on

ಉಡುಪಿ : ಉಡುಪಿಯಲ್ಲಿ ಎಟಿಎಂ ದರೋಡೆಗೆ ವಿಫಲ ಯತ್ನ ನಡೆದಿದೆ. ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂಗೆ ನುಗ್ಗಿದ ಮೂವರು ಮುಸುಕುಧಾರಿಗಳು ದರೋಡೆಗೆ ಯತ್ನಿಸಿದ್ದಾರೆ.  ತಡರಾತ್ರಿ 2 ಗಂಟೆಗೆ ಘಟನೆ ನಡೆದಿದ್ದು, ದರೋಡೆಕೋರರು ಎಟಿಎಂ ಬಾಕ್ಸ್ ಒಡೆಯಲು ಯತ್ನಿಸಿದ್ದಾರೆ. ಈ ವೇಳೆ ಸೈರನ್ ಮೊಳಗಿದೆ. ಹೀಗಾಗಿ ತಕ್ಷಣ ಖದೀಮರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೆರಳಚ್ಚು ತಜ್ಞರು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸುತ್ತಮುತ್ತಲ ಠಾಣಾ ವ್ಯಾಪ್ತಿಗಳಿಗೆ ಸಂದೇಶ ರವಾನಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page