Connect with us

LATEST NEWS

ಬೆಳಗಾವಿ: ಇಂದಿನಿಂದ ವಿಧಾನಮಂಡಲ ಅಧಿವೇಶನ; ಆಡಳಿತ ಪಕ್ಷವನ್ನು ಕಟ್ಟಿಹಾಕಲು ಬಿಜೆಪಿ ಜೆಡಿಎಸ್ ಸಜ್ಜು

Published

on

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಇಂದಿನಿಂದ (ಡಿ.08) ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಹಣಿಯಲು ಪ್ರತಿಪಕ್ಷಗಳಾದ ಬಿಜೆಪಿ ಹಾಗು ಜೆಡಿಎಸ್ ಜಂಟಿಯಾಗಿ ಅಖಾಡಕ್ಕೆ ದುಮುಕಲು ಸಿದ್ಧವಾಗಿದ್ದು, ಪರಸ್ಪರ ಸಹಕಾರದಿಂದ ಒಟ್ಟಾಗಿ ಕಾಂಗ್ರೆಸ್ ಎದುರಿಸಲು ಸನ್ನದ್ಧವಾಗಿವೆ.


ಕುರ್ಚಿ ಕದನದಿಂದ ಸದ್ದುಮಾಡುತ್ತಿದ್ದ ಕರ್ನಾಟಕ ರಾಜಕೀಯ ಇದೀಗ ಬೆಳಗಾವಿಗೆ ಶಿಫ್ಟ್ ಆಗಿದೆ. ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಸರಣಿ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷಗಳು ಸಜ್ಜುಗೊಂಡಿವೆ. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್‌ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ.

ನಿಧನರಾದ ಗಣ್ಯರಿಗೆ ಸಂತಾಪ ಸಭೆ
ಮೊದಲ ದಿನವಾದ ಇವತ್ತು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆಯಲಿದೆ. ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯ ನಡೆಯಲಿದೆ. ಪದ್ಮಶ್ರೀ ಸಾಲುಮರದ ತಿಮ್ಮಕ್ಕ, ಹಾಲಿ ಶಾಸಕರಾಗಿದ್ದ ಹೆಚ್‌.ವೈ ಮೇಟಿ, ಮಾಜಿ ಶಾಸಕ ಆ‌ರ್.ವಿ ದೇವರಾಜು, ಬಾಲಿವುಡ್ ನಟ ಧರ್ಮೇಂದ್ರ, ಹಿರಿಯ ನಟ ಉಮೇಶ್, ಹರೀಶ್ ರಾಯ್, ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್, ಐಎಎಸ್‌ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಹಲ ಗಣ್ಯರಿಗೆ ಸಂತಾಪ ಸೂಚನಾ ಸಭೆ ನಡೆಯಲಿದೆ.

ಆಡಳಿತ ಪಕ್ಷವನ್ನು ಕಟ್ಟಿಹಾಕಲು ಕಮಲ-ದಳ ರಣತಂತ್ರ
ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಈಗ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಸದನದಲ್ಲಿ ಉಭಯ ಪ್ರತಿಪಕ್ಷಗಳು ಜಂಟಿಯಾಗಿ ವಾಗ್ದಾಳಿ ನಡೆಸಲಿವೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯಾಗುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಮಹಿಳೆಯರ ಖಾತೆಗೆ ಪಾವತಿಯಾಗುತ್ತಿಲ್ಲ. ಯುವನಿಧಿ ಇನ್ನೂ ಜಾರಿಯೇ ಆಗಿಲ್ಲ. ಗೃಹ ಜ್ಯೋತಿಯಡಿ 200 ಯೂನಿಟ್ ಎಂದು ಹೇಳಿ ಷರತ್ತು ಹಾಕಿ ಕಡಿತ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಕಲ್ಪಿಸಿದ್ದರೂ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡದ ಕುರಿತು ಸದನದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲು ಉಭಯ ಪಕ್ಷಗಳು ಮುಂದಾಗಿವೆ.

ಇನ್ನು ಬಿಜೆಪಿ ಕಬ್ಬು ಬೆಳೆಗಾರರ ಹೋರಾಟ ಹಾಗೂ ಮೆಕ್ಕೆಜೋಳ ಬೆಲೆ ನಿಗದಿ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಸಿದ್ಧವಾಗಿದೆ. ನಾಯಕತ್ವ ಬದಲಾವಣೆ ವಿಚಾರ ಹಾಗೂ ಪರಪ್ಪನ ಅಗ್ರಹದಲ್ಲಿ ಅಕ್ರಮಗಳು ವಿಪಕ್ಷಕ್ಕೆ ಅಸ್ತ್ರವಾಗಿದೆ.

ಇದನ್ನೂ ಓದಿ: ಉಡುಪಿ: ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಪೊಲೀಸ್ ಇಲಾಖೆಗೆ ಜೀಪ್ ಕೊಡುಗೆ

ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್ ಸಿದ್ಧತೆ ಏನು?
ಸರ್ಕಾರದ ಮೇಲೆ ಮುಗಿಬಿದ್ದು, ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿ ರಣತಂತ್ರ ರೂಪಿಸಿದೆ. ಇತ್ತ ವಿಪಕ್ಷಗಳ ಅಸ್ತಗಳನ್ನು ಎದುರಿಸಲು ಸರ್ಕಾರ ಕೂಡ ರೆಡಿಯಾಗಿದೆ. ಸಿಎಂ ಕುರ್ಚಿಗಾಗಿ ರಾಜ್ಯ ಸರ್ಕಾರದಲ್ಲಿ ಹಗ್ಗ ಜಗ್ಗಾಟ ನಡೆಯುತ್ತಿರುವ ಹಿನ್ನೆಲೆ ಅಧಿವೇಶನದಲ್ಲಿ ಅವಿಶ್ವಾಸ ನಿಲುವಳಿ ಮಂಡನೆಗೆ ವಿಪಕ್ಷ ಬಿಜೆಪಿ ಚಿಂತಿಸಿತ್ತು. ಆದರೆ, ಈಗ ತನ್ನ ನಿರ್ಧಾರದಿಂದ ಕಮಲಪಡೆ ಹಿಂದೆ ಸರಿದಿದೆ.

ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಪೂರ್ಣ
8 ದಿನಗಳ ಕಾಲ ಬೆಳಗಾವಿ ರಾಜ್ಯದ ಶಕ್ತಿ ಕೇಂದ್ರವಾಗಲಿದೆ. ವಿಧಾನ ಮಂಡಲ ಚಳಿಗಾಲದ ಅಧಿವೇಶನಕ್ಕೆ ಸುವರ್ಣಸೌಧ ಸಕಲ ರೀತಿ ಸಜ್ಜಾಗಿದೆ. ಪೊಲೀಸರು ಸುವರ್ಣಸೌಧ ಸುತ್ತಮುತ್ತ ಭಾರೀ ಬಿಗಿ ಭದ್ರತೆ ಒದಗಿಸಿದ್ದಾರೆ. 6000 ಪೊಲೀಸರನ್ನು ಇಲ್ಲಿ ನಿಯೋಜಿಸಲಾಗಿದೆ.

DAKSHINA KANNADA

ಡಾ. ಬಿ. ವಿ. ಮಂಜುನಾಥ್ ಅವರಿಗೆ FRCP (ಗ್ಲಾಸ್ಗೋ–ಯುಕೆ) ಪ್ರಶಸ್ತಿ

Published

on

ಮಂಗಳೂರು : ಯುನೈಟೆಡ್ ಕಿಂಗ್ಡಮ್‌ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ವಿಶಿಷ್ಟ ವೈದ್ಯಕೀಯ ಮತ್ತು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ, ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕ,  ಮುಖ್ಯಸ್ಥರ ಹಾಗೂ ಮುಖ್ಯ ಇಂಟರ್ವೆನ್ಶನಲ್ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಬಿ. ವಿ. ಮಂಜುನಾಥ್ ಅವರಿಗೆ ಅತ್ಯಂತ ಗೌರವಾನ್ವಿತ “ಆನರರಿ FRCP” (ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್) ಪ್ರಶಸ್ತಿಯನ್ನು ಪ್ರದಾನಿಸಿದೆ.

ಡಾ. ಮಂಜುನಾಥ್ ಅವರಿಗೆ 36 ವರ್ಷಗಳಿಗಿಂತ ಹೆಚ್ಚು ಹೃದಯರೋಗ ಚಿಕಿತ್ಸಾ ಅನುಭವವಿದ್ದು, ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಶೋಧನಾ ಲೇಖನಗಳು ಮತ್ತು ಪ್ರಸ್ತುತಿಗಳು, ಪಿಎಚ್‌ಡಿ ಮಾರ್ಗದರ್ಶಕರಾಗಿ ಹಾಗೂ ವಿಶ್ವವಿದ್ಯಾಲಯದ ಪರೀಕ್ಷಕರಾಗಿ ಸೇವೆ, ಮತ್ತು ಅನೇಕ ಪದವಿ, ಸ್ನಾತಕೋತ್ತರ ಹಾಗೂ ಡಿಎಂ ಕಾರ್ಡಿಯಾಲಜಿ ಫೆಲೋಶಿಪ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಶ್ರೇಷ್ಠ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ, ಅವರು ಹೃದಯ ಕ್ಯಾಥ್ ಲ್ಯಾಬ್‌ನಲ್ಲಿ ಅನೇಕ ಸಂಕೀರ್ಣ ಇಂಟರ್ವೆನ್ಶನಲ್ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಆನರರಿ FRCP ಪದವಿ ಪರೀಕ್ಷಾಧಾರಿತ ಪದವಿಯಿಂದ ಭಿನ್ನವಾಗಿದ್ದು, ಇದು ಅನುಭವಿ ವೈದ್ಯರಿಗೆ ನೀಡಲಾಗುವ ಅತ್ಯಂತ ಅಪರೂಪದ ಹಾಗೂ ಗೌರವಾನ್ವಿತ ಅಂತಾರಾಷ್ಟ್ರೀಯ ಫೆಲೋಶಿಪ್ ಆಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ವೈದ್ಯಕೀಯ, ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದವರಿಗೆ ಈ ಗೌರವ ಲಭಿಸುತ್ತದೆ ಮತ್ತು ಇದು ಅಂತಾರಾಷ್ಟ್ರೀಯ ಮಟ್ಟದ ಸಹೋದ್ಯೋಗಿ ಮಾನ್ಯತೆಯನ್ನು ನೀಡುತ್ತದೆ.

ಇದನ್ನೂ ಓದಿ : ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

ಈ ಗೌರವವನ್ನು ವಿಶ್ವದಾದ್ಯಂತ ಆಯ್ಕೆಯಾದ ಕೆಲವೇ ವೈದ್ಯರಿಗೆ (ವಾರ್ಷಿಕವಾಗಿ ಗರಿಷ್ಠ 15 ಜನರಿಗೆ ಮಾತ್ರ) ರಾಯಲ್ ಕಾಲೇಜ್ ಸದಸ್ಯರ ಮತದಾನದ ಮೂಲಕ ಪ್ರದಾನಿಸಲಾಗುತ್ತದೆ.

 

Continue Reading

LATEST NEWS

ನಿಂತಿದ್ದ ಪಿಕ್‌-ಅಪ್‌ಗೆ ಡಿಕ್ಕಿ ಹೊಡೆದ ಶಾಲಾ ಮಕ್ಕಳಿದ್ದ ವಾಹನ; ನಾಲ್ಕು ಮಕ್ಕಳು ಗಂಭೀರ ಗಾಯ

Published

on

ಕಾರವಾರ: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ಬೊಲೆರೊ ಓಮಿನಿ ನಿಂತಿದ್ದ ಪಿಕ್‌-ಅಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್‌ ನಿಲ್ದಾಣದ ಬಳಿ ಸಂಭಿವಿಸಿದೆ.


ತನಿಷ್ಕ (15), ಅದ್ವಿತ್ (12), ಅರ್ಜುನ್ (13), ಆಯಿರಾ (10) ಗಂಭೀರ ಗಾಯಗೊಂಡ ಮಕ್ಕಳು. ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಕೆಎಸ್ಆರ್‌ಟಿಸಿ ಬಸ್‌-ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕನ ಜೀವ ಉಳಿದಿದ್ದೇ ಒಂದು ಪವಾಡ

ಈ ಘಟನೆ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವಾಗ ನಡೆದಿದೆ. ಘಟನಾ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

INTERNATIONAL

ಕೊನೆಗೂ ಸಿಕ್ತು ಡೊನಾಲ್ಡ್‌ ಟ್ರಂಪ್‌ ಕೈಗೆ ನೊಬೆಲ್‌ ಶಾಂತಿ ಪುರಸ್ಕಾರ!

Published

on

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಬಹುದಿನಗಳ ಕನಸು ಈಡೇರಿದೆ. ಕೊನೆಗೂ ನೊಬೆಲ್‌ ಶಾಂತಿ ಪುರಸ್ಕಾರ ಅವರ ಕೈ ಸೇರಿದೆ.

ಹೌದು, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ ಸಿಗಬೇಕು ಅನ್ನೋ ವಿಚಾರ ಭಾರೀ ಸದ್ದು ಮಾಡಿತ್ತು. ಜಗತ್ತಿನಲ್ಲಿ ಅನೇಕ ಯುದ್ದಗಳನ್ನು ನಾನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ಕಾಪಾಡಿದ್ದೇನೆ, ಹೀಗಾಗಿ ನನಗೆ ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿ ಕೊಡಬೇಕು ಎಂದು ಡೊನಾಲ್ಡ್‌ ಟ್ರಂಪ್‌ ವಾದ ಮಾಡಿದ್ದರು. ಆದರೆ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊಗೆ ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಲಾಗಿತ್ತು.

ಆದರೆ ತನಗೆ ಸಿಕ್ಕ ಪ್ರಶಸ್ತಿಯನ್ನು ಕೊರಿನಾ ಮಚಾದೊ ಶ್ವೇತಭವನಕ್ಕೆ ತೆರಳಿ ಅಧ್ಯಕ್ಷ ಟ್ರಂಪ್‌ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಈ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ ನೀಡಿದ್ದಾರೆ.

ವೆನೆಜುವೆಲಾದ ಮಾರಿಯಾ ಕೊರಿನಾ ಮಚದೊ ಅವರನ್ನು ಭೇಟಿಯಾಗಲು ತಮಗೆ ಸಿಕ್ಕ ದೊಡ್ಡ ಗೌರವ ಎಂದು ಅಧ್ಯಕ್ಷ ಟ್ರಂಪ್‌ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಉತ್ತಮ ಕೆಲಸಕ್ಕಾಗಿ ಮಾರಿಯಾ ಅವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಿದ್ದಾರೆ ಎಂದು ಟ್ರಂಪ್‌ ಹೇಳಿದ್ದಾರೆ.

ಇನ್ನು ಮಚಾದೊ ಅವರು ಹೇಳಿಕೆ ನೀಡಿದ್ದು, ನಾನು ಯುನೈಟೆಡ್‌ ಸ್ಟೇಟ್ಸ್‌ ಅಧ್ಯಕ್ಷರಿಗೆ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದೇನೆ ಎಂದು ಹೇಳಿದ್ದಾರೆ.

ನೊಬೆಲ್‌ ಪ್ರಶಸ್ತಿಯನ್ನು ಹಸ್ತಾಂತರಿಸಬಹುದೇ?
ಮಾರಿಯಾ ಕೊರಿನಾ ಮಚಾದೊ ಅವರಿಗೆ ಸಿಕ್ಕಿದ ನೊಬೆಲ್‌ ಶಾಂತಿ ಪ್ರಶಸ್ತಿಯ ಪದಕ ಹಾಗೂ ಪ್ರಮಾಣ ಪತ್ರವನ್ನು ಮಚಾಡೊ ಟ್ರಂಪ್‌ ಅವರಿಗೆ ಹಸ್ತಾಂತರ ಮಾಡಿದ್ದು ದೊಡ್ಡ ವಿವಾದ ಎಬ್ಬಿಸಿದೆ. ಸಾಮಾನ್ಯವಾಗಿ ನಾರ್ವೇಜಿಯನ್‌ ನೊಬೆಲ್‌ ಸಂಸ್ಥೆಯು ಪ್ರಶಸ್ತಿಯ ಹಣವ್ನನು ವಿಜೇತರು ಬಯಸುವವರೊಂದಿಗೆ ಮಾತ್ರ ಹಂಚಿಕೊಳ್ಳಬಹುದು. ಆದರೆ ಬಹುಮಾನವನ್ನು ಬೇರೆಯವರೊಂದಿಗೆ ವರ್ಗಾಯಿಸಲು ಅಥವಾ ಹಂಚಿಕೊಳ್ಳು ಸಾಧ್ಯವಿಲ್ಲ ಎಂದು ಹೇಳಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page