Connect with us

BELTHANGADY

ಬೆಳ್ತಂಗಡಿ: ಸುರ್ಯದ ಮಹಿಮೆಯ ಮಣ್ಣಿನಲ್ಲಿ ಮಣ್ಣ ಮೂರ್ತಿಯೇ ಸದಾಶಿವನಿಗೆ ಅರ್ಪಿತವಂತೆ…

Published

on

ಸುರ್ಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ಹರಕೆಯನ್ನಾಗಿ ಮಣ್ಣಿನ ಮೂರ್ತಿಗಳನ್ನು ಅರ್ಪಿಸಲಾಗುತ್ತದೆ. ಅರ್ಪಿಸುವಾಗ ಈ ಗೊಂಬೆಗಳಲ್ಲಿ ಯಾವುದೇ ರೀತಿಯ ಬಿರುಕಿರಬಾರದು.

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಕೃತಿ ರಮಣೀಯ ದೇಗುಲವೇ ಸುರ್ಯ ಶ್ರೀ ಸದಾಶಿವ ದೇವಸ್ಥಾನ. ನಿಮಗೆ ಬಂದ ಕಷ್ಟಗಳ ಪರಿಹಾರಕ್ಕೆ ನೀವು ಮಣ್ಣಿನ ಹರಕೆ ಒಪ್ಪಿಸುವುದೇ ಈ ಕ್ಷೇತ್ರದ ವಿಶೇಷತೆ. ಸುತ್ತಲೂ ಪ್ರಕೃತಿಯ ಹಸಿರ ರಾಶಿ….ಅದರ ಮಧ್ಯದಲ್ಲಿ ತಲೆ ಎತ್ತಿ ನಿಂತ ಭವ್ಯವಾದ ದೇಗುಲ.


ಸುಂದರವಾದ ಕೆರೆ… ನಿತ್ಯ ದೇವರ ದರ್ಶನಕ್ಕಾಗಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಊರ-ಪರವೂರಿನ ಭಕ್ತರು. ಇದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನ.

ಈ ಕ್ಷೇತ್ರವು ಶ್ರೀ ಕ್ಷೇತ್ರ ಧರ್ಮಸ್ಥಳದ ಸಮೀಪವಿರುವ ಉಜಿರೆಯಿಂದ ಸುಮಾರು 4 ಕಿ.ಮೀ ಹಾಗೂ ತಾಲೂಕು ಕೇಂದ್ರ ಬೆಳ್ತಂಗಡಿಯಿಂದ ಪೂರ್ವಕ್ಕೆ 8 ಕಿ.ಮೀ ದೂರದಲ್ಲಿದೆ. ಇಲ್ಲಿನ ವಿಶೇಷ ಎಂದರೆ ಮಣ್ಣಿನ ಹರಕೆ.


ಹಿಂದೆ ಒಬ್ಬಾಕೆ ತನ್ನ ಮಗ ಸುರೆಯ ಎಂಬಾತನ ಜೊತೆ ಕಾಡಿಗೆ ಸೊಪ್ಪು ತರಲು ಹೋಗಿದ್ದಳಂತೆ. ಸೊಪ್ಪು ಕಡಿಯುವಾಗ ಸೊಪ್ಪಿನ ನಡುವೆ ಮರೆಯಾಗಿದ್ದ ಲಿಂಗರೂಪಿ ಶಿಲೆಗೆ ಈಕೆ ಕತ್ತಿ ತಾಗಿ ರಕ್ತ ಚಿಮ್ಮಿತಂತೆ. ಆಗ ಗಾಬರಿಗೊಂಡ ಆಕೆ ತನ್ನ ಮಗನಿಗೆ “ಓ ಸುರೆಯ” ಎಂದು ಕರೆದಳು ಹಾಗೂ ಆ ಘಟನೆಯ ನಂತರ ಈ ಕ್ಷೇತ್ರಕ್ಕೆ ಸುರೆಯ, ಸುರಿಯ, ಸುರ್ಯ ಎಂಬ ಹೆಸರು ಬಂತು ಎನ್ನುತ್ತಾರೆ.


ಭೃಗು ಮಹರ್ಷಿಯ ಶಿಷ್ಯರೊಬ್ಬರು ತಪಸ್ಸು ಮಾಡುತ್ತಿದ್ದು, ಅವರ ತಪಸ್ಸಿಗೊಲಿದ ಶಿವ ಪಾರ್ವತಿಯರು ಪ್ರತ್ಯಕ್ಷವಾಗಿ ಲಿಂಗ ರೂಪದಲ್ಲಿ ಇಲ್ಲಿ ನೆಲೆಯಾದರು ಎಂಬ ಪ್ರತೀತಿ ಇದೆ.

ಮಣ್ಣಿನ ಹರಕೆಯಾಗಿ ಗೊಂಬೆಗಳನ್ನು ಆವೆ ಮಣ್ಣಿನಿಂದ ಮಾಡಿ ಕುಲುಮೆಯಲ್ಲಿ ಬೇಯಿಸಿ ತಯಾರಿಸಲಾಗುತ್ತದೆ. ದೇವರಿಗೆ ಅರ್ಪಿಸುವಾಗ ಈ ಗೊಂಬೆಗಳಲ್ಲಿ ಯಾವುದೇ ರೀತಿಯ ಬಿರುಕಿರಬಾರದು.


ದೂರದ ಊರಿಂದ ಬರುವ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಈಗ ಎಲ್ಲಾ ರೀತಿಯ ಹರಕೆ ಗೊಂಬೆಗಳನ್ನು ಕುಂಬಾರರಿಂದ ಮಾಡಿಸಿ ದೇವಸ್ಥಾನದಲ್ಲಿ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ.

ಜೊತೆಗೆ ಮಣ್ಣಿನ ಹರಕೆಯನ್ನು ಭಕ್ತರೆ ನೇರವಾಗಿ ಹರಕೆಯ ಬನದಲ್ಲಿ ಇಡದೆ, ದೇವಸ್ಥಾನದ ಅರ್ಚಕರು ಪೂಜೆ ಮಾಡಿ ಬಳಿಕ ಹರಕೆ ಸಲ್ಲಿಸಬೇಕು ಎಂಬ ಎಚ್ಚರಿಕೆ ದೇವಳದ ಆಡಳಿತ ಮಂಡಳಿ ನೀಡಿದೆ.

 

Advertisement
Click to comment

Leave a Reply

Your email address will not be published. Required fields are marked *

BELTHANGADY

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಚಾರ್ಮಾಡಿಯ ನಿವಾಸಿ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. 1990 ರಲ್ಲಿ ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. 1992 ರಲ್ಲಿ ಇದನ್ನು ಎಲ್‌ಪಿಸಿ ಪ್ರಕರಣ ಎಂಬುದಾಗಿ ಪರಿಗಣಿಸಲಾಗಿತ್ತು. ಈತನ ಪತ್ತೆ ಹಚ್ಚುವ ಬಗ್ಗೆ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ: ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿ*ಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಇದೀಗ ಆರೋಪಿ ರವೀಂದ್ರನನ್ನು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ಪೊಲೀಸರು ದಸ್ತಗಿರಿ ಮಾಡಿ ಜನವರಿ 6 ರಂದು ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BELTHANGADY

ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ

Published

on

ಬೆಳ್ತಂಗಡಿ: ತಾಲೂಕಿನ ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.


ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಡಿಕ್ಕಿ ಆಗಿದ್ದು, ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ.

ಇದನ್ನೂ ಓದಿ: ಬಸ್ ಹತ್ತುವ ವೇಳೆ ದುರಂ*ತ; ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾ*ವು

ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.

Continue Reading

BELTHANGADY

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರ ಡಿ*ಕ್ಕಿಯಾಗಿ ವಯೋವೃದ್ಧ ಸಾ*ವು

Published

on

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.


ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು ಗುರುತಿಸಲಾಗಿದೆ. ಇವರು ಪತ್ನಿ, ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಹಂಝಾ ಅವರು ಸೌದೆ ಕಡಿಯುವ ಕೆಲಸಕ್ಕೆಂದು ಮದ್ದಡ್ಕಕ್ಕೆ ಹೋಗಿದ್ದರು. ಅವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಚಾಲಕ ಬಿಹಾರಿ ರೈ ಎಂಬಾತ ಯಂತ್ರವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಹಿಂದಕ್ಕೆ ತೆಗೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಹಂಝಾ ಅವರನ್ನು ತಕ್ಷಣವೇ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು : ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಆ*ತ್ಮಹ*ತ್ಯೆ

ಹಂಝಾ ಅವರದ್ದು ಬಡ ಕುಟುಂಬವಾಗಿದ್ದು, ತಮ್ಮ ವೃದ್ಧಾಪ್ಯದಲ್ಲೂ ಸೌದೆ ಕಡಿಯುವ ಕೆಲಸಕ್ಕೆ ಹೋಗುತ್ತಿದ್ದರು. ಅವರ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page